ಬಜೆಟ್ ಬೆಲೆಯಲ್ಲಿ ಹೊಸ iQOO ಫೋನ್ ಖರೀದಿಸಬೇಕೆ?..ಇಲ್ಲಿದೆ ಮಾಹಿತಿ
ಪ್ರಮುಖ ಮೊಬೈಲ್ ಸಂಸ್ಥೆಗಳಲ್ಲಿ ಒಂದೆನಿಸಿರುವ ವಿವೋದ ಸಬ್ ಬ್ರ್ಯಾಂಡ್ ಐಕ್ಯೂ (iQOO) ಭಾರತೀಯ ಟೆಕ್ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಆಕರ್ಷಿಸಿದೆ. ಈ ಸಂಸ್ಥೆಯು ಈಗಾಗಲೇ ಭಿನ್ನ ಶ್ರೇಣಿಯಲ್ಲಿ ಹಲವು ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಕಂಪನಿಯ ಇತ್ತೀಚಿನ ಐಕ್ಯೂ Z9 ಸರಣಿಯ ಫೋನ್‌ಗಳು ಬೊಂಬಾಟ್ ಫೀಚರ್ಸ್ ಪಡೆದಿದ್ದು, ಮಾರುಕಟ್ಟೆಯಲ್ಲಿ ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಇನ್ನು ಸಂಸ್ಥೆಯ ಮೊಬೈಲ್‌ಗಳು ಉತ್ತಮ ಕ್ಯಾಮೆರಾ, ವೇಗದ ಪ್ರೊಸೆಸರ್, ಆಕರ್ಷಕ ಡಿಸೈನ್, ಬಿಗ್ ಬ್ಯಾಟರಿಗಳಂತಹ ಆಯ್ಕೆಗಳಿಂದಲೂ ಅತ್ಯುತ್ತಮ ಎನಿಸಿವೆ.
ಹೌದು, ಐಕ್ಯೂ (iQOO) ಮೊಬೈಲ್ ಸಂಸ್ಥೆಯ ಇತ್ತೀಚಿನ ಐಕ್ಯೂ Z9x ಹಾಗೂ ಐಕ್ಯೂ Z9 ಫೋನ್ ಮೊಬೈಲ್‌ಗಳು ಆಕರ್ಷಕ ಲುಕ್ ಹಾಗೂ ಫೀಚರ್ಸ್‌ನಿಂದ ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಅಲ್ಲದೇ ಸಂಸ್ಥೆಯ ಐಕ್ಯೂ ನಿಯೋ 9 ಪ್ರೊ ಸಹ ಜಬರ್ದಸ್ತ್ ಫೀಚರ್ಸ್ ಮೂಲಕ ಫೋನ್ ಪ್ರಿಯರ ಚಿತ್ತ ಸೆಳೆದಿದೆ. ಹಾಗಾದರೇ ಐಕ್ಯೂ ಸಂಸ್ಥೆಯ ಕೆಲವು ಅತ್ಯುತ್ತಮ ಮೊಬೈಲ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಐಕ್ಯೂ Z9x 5G ಫೋನ್
ಐಕ್ಯೂ Z9x 5G ಮೊಬೈಲ್ 6.72 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು ಫುಲ್ ಹೆಚ್‌ಡಿ+ ರೆಸಲ್ಯೂಶನ್ ಪಡೆದಿದೆ. ಹಾಗೆಯೇ 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಪವರ್ ಸೌಲಭ್ಯವನ್ನು ಪಡೆದಿದ್ದು, ಇದರ ಜೊತೆಗೆ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದಿದೆ.
ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದೆ. ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಪಡೆದಿದೆ. ಅಲ್ಲದೇ ಇದು 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿರುವುದು ಪ್ಲಸ್ ಪಾಯಿಂಟ್ ಆಗಿದೆ. ಇದಕ್ಕೆ ಬೆಂಬಲವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ.
ಐಕ್ಯೂ Z9 5G ಸ್ಮಾರ್ಟ್‌ಫೋನ್
ಐಕ್ಯೂ Z9 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್‌ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಪಡೆದಿದೆ. ಅಲ್ಲದೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದರ ಜೊತೆಗೆ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಪಡೆದಿದೆ.
ಅಲ್ಲದೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಇದ್ದು, 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಪಡೆದಿದೆ. ಅಲ್ಲದೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದೆ. ಇದಕ್ಕೆ ಬೆಂಬಲವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ.
ಐಕ್ಯೂ ನಿಯೋ 9 ಪ್ರೊ ಫೋನ್
ಐಕ್ಯೂ ನಿಯೋ 9 ಪ್ರೊ ಮೊಬೈಲ್ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದು 1260 x 2800 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಸಪೋರ್ಟ್‌ನೊಂದಿಗೆ ಕಾರ್ಯ ನಿರ್ವಹಿಸಲಿದೆ.
ಹಾಗೆಯೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಆಗಿದೆ. ಇದರೊಂದಿಗೆ 5160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 120W FlashCharge ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.


Click it and Unblock the Notifications







