Home
ಮೊಬೈಲ್

ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌!

ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ರಿಯಲ್‌ಮಿ ಮೊಬೈಲ್‌ (realme) ಕಂಪನಿಯ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಟೆಕ್‌ ವಲಯದಲ್ಲಿ ಸದ್ದು ಮಾಡಿದೆ. ಸಂಸ್ಥೆಯ GT ಸರಣಿಯ ಮೊಬೈಲ್‌ಗಳು ಮೀಡ್‌ರೇಂಜ್‌ನಲ್ಲಿ ಕಾಣಿಸಿಕೊಂಡಿದ್ದು, ಇನ್ನು ರಿಯಲ್‌ಮಿ ನಾರ್ಜೋ ಸರಣಿ, ರಿಯಲ್‌ಮಿ C ಸರಣಿಯ ಫೋನ್‌ಗಳು ಬಜೆಟ್‌ ಬೆಲೆಯಲ್ಲಿ ಗಮನ ಸೆಳೆದಿವೆ. ಅದಾಗ್ಯೂ, ಬಜೆಟ್‌ ಬೆಲೆಯಲ್ಲಿ ಲಭ್ಯ ಇರುವ ಫೋನ್‌ಗಳಿಗೆ ಬೇಡಿಕೆ ಅಧಿಕ ಇದೆ. ಇನ್ನು ಸಂಸ್ಥೆಯ ಇತ್ತೀಚಿನ ಕೆಲವು ಫೋನ್‌ಗಳು ಸ್ಟೈಲಿಶ್‌ ಲುಕ್‌ ಹಾಗೂ ಗ್ರಾಹಕ ಸ್ನೇಹಿ ಬೆಲೆಯಿಂದ ಗುರುತಿಸಿಕೊಂಡಿವೆ.

ಹೌದು, ರಿಯಲ್‌ಮಿ ಮೊಬೈಲ್‌ ಸಂಸ್ಥೆಯ ಇತ್ತೀಚಿನ ರಿಯಲ್‌ಮಿ ನಾರ್ಜೋ 70 5G, ನಾರ್ಜೋ 70X 5G, ನಾರ್ಜೋ 70 ಪ್ರೊ 5G ಹಾಗೂ ನಾರ್ಜೋ N65 5G ಮೊಬೈಲ್‌ಗಳು ಬಜೆಟ್‌ ದರದಲ್ಲಿ ಇತರೆ ಬ್ರ್ಯಾಂಡ್‌ಗಳಿಗೆ ಪೈಫೋಟಿ ನೀಡುವಂತೆ ಇವೆ. ಹಾಗಾದರೇ ಬಜೆಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇರುವ ಕೆಲವು ಅತ್ಯುತ್ತಮ ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌!

ರಿಯಲ್‌ಮಿ ನಾರ್ಜೋ N65 5G ಫೋನ್

ರಿಯಲ್‌ಮಿ ನಾರ್ಜೋ N65 5G ಫೋನ್‌ 6.67 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಅಲ್ಲದೇ ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 6300 5G ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದರೊಂದಿಗೆ 4GB + 12GB ಹಾಗೂ 6GB + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದೆ.

ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದ್ದು, ಇದರೊಂದಿಗೆ 15W ವೇಗದ ಚಾರ್ಜಿಂಗ್‌ಗೆ ಸೌಲಭ್ಯ ಸಹ ಇದೆ.

ರಿಯಲ್‌ಮಿ ನಾರ್ಜೋ 70x 5G ಫೋನ್‌

ರಿಯಲ್‌ಮಿ ನಾರ್ಜೋ 70x 5G ಫೋನ್ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ (1,080 x 2,400 ಪಿಕ್ಸೆಲ್‌ ರೆಸಲ್ಯೂಶನ್‌) ಎಲ್‌ಸಿಡಿ ಡಿಸ್‌ಪ್ಲೇ ಆಯ್ಕೆ ಹೊಂದಿದ್ದು, 120Hz ರಿಫ್ರೆಶ್ ರೇಟ್ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಆಯ್ಕೆ ಪಡೆದಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದ್ದು. ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ.

ಇನ್ನು ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಹಾಗೆಯೇ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 45W ಸೂಪರ್‌ವೂಕ್‌ ಚಾರ್ಜಿಂಗ್ ವ್ಯವಸ್ಥೆ ಸಹ ಪಡೆದಿದೆ.

ರಿಯಲ್‌ಮಿ ನಾರ್ಜೋ 70 5G ಫೋನ್‌

ರಿಯಲ್‌ಮಿ ನಾರ್ಜೋ 70 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್ (1,080x2,400 ಪಿಕ್ಸೆಲ್‌) ಅಮೋಲೆಡ್‌ ಡಿಸ್‌ಪ್ಲೇ ಮಾದರಿಯನ್ನು ಹೊಂದಿದ್ದು, ಜೊತೆಗೆ 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ. ಹಾಗೆಯೇ ಈ ಮೀಡಿಯಾ ಟೆಕ್ ಡೈಮೆನ್ಸಿಟಿ 7050 5G ಪ್ರೊಸೆಸರ್‌ ಪವರ್ ಪಡೆದಿದ್ದು, ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಲಭ್ಯ ಇದೆ.

ಹಾಗೆಯೇ ಈ ಫೋನ್ ಕೂಡಾ ಡ್ಯುಯಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ. ಇದರ ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 45W ಸೂಪರ್‌ವೂಕ್‌ ಚಾರ್ಜಿಂಗ್ ವ್ಯವಸ್ಥೆ ಸಹ ಹೊಂದಿದೆ.

Best Mobiles in India

English summary
Few best realme phones at budget price tag in India 2024. check phone list, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+