Home
ಮೊಬೈಲ್

ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 3 ಪ್ರೊಸೆಸರ್‌ ಸೌಲಭ್ಯದ ಬೆಸ್ಟ್‌ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಪ್ರಸ್ತುತ ಮೊಬೈಲ್‌ ಪ್ರತಿಯೊಬ್ಬರ ಉಪಯಕ್ತ ಸಾಧನ ಎನ್ನುವಿದರಲ್ಲಿ ಎರಡು ಮಾತಿಲ್ಲ. ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯದ ಜೊತೆಗೆ ವೇಗದ ಪ್ರೊಸೆಸರ್‌ ಸೌಲಭ್ಯ ಪಡೆದ ಮೊಬೈಲ್‌ಗಳು ಮಲ್ಟಿಟಾಸ್ಕ್‌ ಹಾಗೂ ವೇಗದ ಕಾರ್ಯವೈಖರಿ ಒದಗಿಸುತ್ತವೆ. ಈ ನಿಟ್ಟಿನಲ್ಲಿ ಬಹುತೇಕ ಸಂಸ್ಥೆಗಳು ತಮ್ಮ ಕೆಲವು ಫೋನ್‌ಗಳಲ್ಲಿ ಹೈ ಎಂಡ್‌ ಪ್ರೊಸೆಸರ್‌ ಆಯ್ಕೆ ನೀಡುತ್ತಿವೆ. ಇತ್ತೀಚಿಗೆ ಬಿಡುಗಡೆ ಕೆಲವು ಫೋನ್‌ಗಳು ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 3 ಚಿಪ್‌ಸೆಟ್‌ (Snapdragon) ಪ್ರೊಸೆಸರ್‌ ಪವರ್‌ ಪಡೆದಿದ್ದು, ಅತ್ಯುತ್ತಮ ಕಾರ್ಯ ವೈಖರಿ ಪಡೆದುಕೊಂಡಿವೆ.

ಇತ್ತೀಚಿಗೆ ಮೊಬೈಲ್‌ ಮಾರುಕಟ್ಟೆಯಲ್ಲಿ ಬಜೆಟ್‌ ದರದ ಫೋನ್‌ಗಳಲ್ಲಿಯೂ ಸ್ನ್ಯಾಪ್‌ಡ್ರಾಗನ್‌ ಪ್ರೊಸೆಸರ್‌ ನೀಡಲಾಗುತ್ತಿದೆ. ಆದರೆ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 3 ಪ್ರೊಸೆಸರ್‌ ಅನ್ನು ಪ್ರಿಮಿಯಂ ಹಾಗೂ ಹೈ ಎಂಡ್‌ ಮಾದರಿಯ ಮೊಬೈಲ್‌ಗಳಲ್ಲಿ ಕಾಣಬಹುದಾಗಿದೆ. ಈ ಪ್ರೊಸೆಸರ್‌ ಪಡೆದಿರುವ ಸ್ಮಾರ್ಟ್‌ಫೋನ್‌ಗಳು ಮಲ್ಟಿಟಾಸ್ಕ್‌ ಕೆಲಸ ನಿರ್ವಹಿಸಿದರೂ ಕೂಡಾ ಪೂರ್ಣ ಒಂದು ದಿನದ ವರೆಗೂ ಬ್ಯಾಟರಿ ಬ್ಯಾಕ್‌ಅಪ್‌ ನೀಡುವ ಸಾಮರ್ಥ್ಯ ಪಡೆದಿವೆ. ಹಾಗಾದರೇ ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 3 ಪ್ರೊಸೆಸರ್‌ ಸಾಮರ್ಥ್ಯದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ನ್ಯಾಪ್‌ಡ್ರಾಗನ್‌ 8 ಜೆನ್‌ 3 ಪ್ರೊಸೆಸರ್‌ ಸೌಲಭ್ಯದ ಬೆಸ್ಟ್‌ ಫೋನ್‌ಗಳ ಲಿಸ್ಟ್‌

ಒನ್‌ಪ್ಲಸ್‌ 12 5G ಸ್ಮಾರ್ಟ್‌ಫೋನ್‌

ಒನ್‌ಪ್ಲಸ್‌ 12 5G ಸ್ಮಾರ್ಟ್‌ಫೋನ್‌ 6.82 ಇಂಚಿನ QHD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1440 x 3168 ಪಿಕ್ಸೆಲ್‌ ಸ್ಕ್ರೀನ್‌ ಸೂಪರ್ ಕ್ರಿಸ್ಪ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಈ ಫೋನ್‌ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ವೇಗವನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 14 ಓಎಸ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ.

ಇನ್ನು ಈ ಫೋನ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಹಾಗೆಯೇ ಈ ಫೋನ್‌ 5400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 100W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಐಕ್ಯೂ 12 5G ಸ್ಮಾರ್ಟ್‌ಫೋನ್‌

ಐಕ್ಯೂ 12 ಸ್ಮಾರ್ಟ್‌ಫೋನ್‌ 6.78 ಇಂಚಿನ 1.5K LTPO OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2800 x 1260 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೇ ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ನಲ್ಲಿ ಕಾರ್ಯ ನಿರ್ವಹಿಸಲಿದ್ದು, ಇದು ಆಂಡ್ರಾಯ್ಡ್‌ 14 ನಲ್ಲಿ ರನ್‌ ಆಗಲಿದೆ.

ಇನ್ನು ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಹಾಗೆಯೇ ಈ ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವರೆಗಿನ ವೇಗದ ಚಾರ್ಜಿಂಗ್ ಸಾಮರ್ಥ್ಯಗಳನ್ನು ಬೆಂಬಲಿಸುತ್ತದೆ.

ಶಿಯೋಮಿ 14 ಸ್ಮಾರ್ಟ್‌ಫೋನ್‌

ಶಿಯೋಮಿ 14 ಸ್ಮಾರ್ಟ್‌ಫೋನ್‌ 6.3 ಇಂಚಿನ ಪಂಚ್-ಹೋಲ್ ಫ್ಲಾಟ್ OLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 2670 x 1200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಹಾಗೆಯೇ ಈ ಫೋನ್ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಇದೆ. ಇದರೊಂದಿಗೆ 4,610mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 90W ವೈರ್ಡ್, 50W ವಾಯರ್‌ಲೆಸ್ ಮತ್ತು 10W ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

Best Mobiles in India

English summary
Few Best Snapdragon 8 Gen 3 Processor Phones list 2024. check phone list and specifications details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+