ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಅತ್ಯುತ್ತಮ ಫೋನ್‌ಗಳ ಲಿಸ್ಟ್ ಇಲ್ಲಿದೆ
ಪ್ರಸ್ತುತ ಸ್ಮಾರ್ಟ್‌ಫೋನ್ ಎಲ್ಲರಿಗೂ ಬೇಕಿರುವ ಸಾಧನ ಎನ್ನುವುದರಲ್ಲಿ ಎರಡು ಮಾತಿಲ್ಲ. ಇಂದಿನ ಬಹುತೇಕ ಕೆಲಸಗಳು ಆನ್‌ಲೈನ್ ಮೂಲಕವೇ ನಡೆಯುತ್ತವೆ. ಈ ನಿಟ್ಟಿನಲ್ಲಿ ಅತ್ಯುತ್ತಮ ಮೊಬೈಲ್ ಅವಶ್ಯ ಎನಿಸಿರುತ್ತದೆ. ಅದರಲ್ಲಿಯೂ ಇತ್ತೀಚಿನ ಮೊಬೈಲ್‌ಗಳು ಕೆಲವು ಉಪಯುಕ್ತ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಗೆ ಎಂಟ್ರಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೆಚ್ಚಿನ ಗಮನ ಸೆಳೆದಿದೆ.
ನೂತನ ಮೊಬೈಲ್ ಖರೀದಿಸುವಾಗ ಅನೇಕ ಜನರು ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಗಮನಿಸುತ್ತಾರೆ. ಈ ನಿಟ್ಟಿನಲ್ಲಿ ಪ್ರಮುಖ ಮೊಬೈಲ್ ತಯಾರಿಕಾ ಸಂಸ್ಥೆಗಳು ತಮ್ಮ ಹೊಸ ಸಹ ಬೆಸ್ಟ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆಯಿರುತ್ತವೆ. ಹಾಗಾದರೇ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿರುವ ಕೆಲವು ಅತ್ಯುತ್ತಮ ಫೋನ್‌ಗಳ ಬಗ್ಗೆ ಈ ಲೇನದಲ್ಲಿ ನೋಡೋಣ ಬನ್ನಿರಿ.

ಪೊಕೊ X6 ನಿಯೋ ಮೊಬೈಲ್
ಪೊಕೊ X6 ನಿಯೋ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇದು 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಇದೆ.ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ.
ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಮೊಬೈಲ್
ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಅನ್ನು ಒಳಗೊಂಡಿದ್ದು, 67W ಸೂಪರ್ ವೂಕ್ ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ. ಅಲ್ಲದೇ ಈ ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಇದರ ಜೊತೆಗೆ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೇ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ.
ವಿವೋ T3x 5G ಮೊಬೈಲ್
ವಿವೋ T3x 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, 44W ಫ್ಲ್ಯಾಶ್ ಚಾರ್ಜ್ ಅನ್ನು ಸಪೋರ್ಟ್ ಇದೆ. ಹಾಗೆಯೇ ಈ ಫೋನ್ 6.72 ಇಂಚಿನ ಡಿಸ್‌ಪ್ಲೇ ಜೊತೆಗೆ 120 Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದೆ. ಇದು ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಜೊತೆಗೆ 2408 x 1080 ಪಿಕ್ಸೆಲ್ ರೆಸಲ್ಯೂಶನ್ ಪಡೆದಿದೆ. ಅಲ್ಲದೇ ಸ್ನಾಪ್‌ಡ್ರಾಗನ್ 6 ಜನ್ 1 ಚಿಪ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್ 14 ಅನ್ನು ಆಧರಿಸಿದ ಫನ್‌ಟಚ್ ಓಎಸ್ 14 ಅನ್ನು ಕೆಲಸ ಮಾಡಲಿದೆ. ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ.
ಐಕ್ಯೂ Z9x 5G ಮೊಬೈಲ್
ಐಕ್ಯೂ Z9x 5G ಮೊಬೈಲ್ 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಅಲ್ಲದೇ ಈ ಫೋನ್ 6.72 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇದರ ಡಿಸ್‌ಪ್ಲೇಯು ಫುಲ್ ಹೆಚ್‌ಡಿ+ ರೆಸಲ್ಯೂಶನ್ ಪಡೆದಿದೆ. ಜೊತೆಗೆ ಸ್ನಾಪ್‌ಡ್ರಾಗನ್ 6 ಜನ್ 1 ಪ್ರೊಸೆಸರ್ ಪವರ್ ಸೌಲಭ್ಯ ಇದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಇದೆ. ಅಲ್ಲದೇ ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ.


Click it and Unblock the Notifications








