Home
ಮೊಬೈಲ್

ಭಾರೀ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ಟಾಪ್‌ ಸ್ಮಾರ್ಟ್‌ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಮೊಬೈಲ್‌ ಮಾರುಕಟ್ಟೆಯಲ್ಲಿ ಹೊಸ ಹೊಸ ಫೋನ್‌ಗಳು ಲಗ್ಗೆ ಇಡುತ್ತಲೇ ಸಾಗಿವೆ. ಮಾರುಕಟ್ಟೆಗೆ ಕಡಿಮೆ ದರದ ಫೋನ್‌ಗಳು ಲಗ್ಗೆ ಇಡುತ್ತೆ, ಬಜೆಟ್‌ ಫೋನ್‌ಗಳು ಸಹ ಬಿಡುಗಡೆ ಆಗುತ್ತವೆ ಅದೇ ರೀತಿ ಫ್ಲ್ಯಾಗ್‌ಶಿಪ್‌ ಸ್ಮಾರ್ಟ್‌ಫೋನ್‌ಗಳು ಸಹ ಲಾಂಚ್‌ ಆಗುತ್ತವೆ. ಆದರೆ, ಹೊಸದಾಗಿ ಲಾಂಚ್ ಆಗುವ ಪ್ರತಿ ಮೊಬೈಲ್‌ ಬೇಡಿಕೆಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅವುಗಳ ಪೈಕಿ ಕೆಲವೇ ಕೆಲವು ಮೊಬೈಲ್‌ಗಳು ಡಿಮ್ಯಾಂಡ್‌ ಪಡೆದುಕೊಳ್ಳುತ್ತವೆ. ಗ್ರಾಹಕರ ಗಮನ ಸೆಳೆಯುವ ಫೋನ್‌ಗಳು ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸುತ್ತವೆ.

ಹೌದು, ಎಲ್ಲ ಮೊಬೈಲ್‌ ಸಂಸ್ಥೆಗಳು ಗ್ರಾಹಕರನ್ನು ಸೆಳೆಯಲು ಹೊಸ ಫೀಚರ್ಸ್‌ ಹೊಂದಿರುವ ಭಿನ್ನ ಶ್ರೇಣಿಯಲ್ಲಿ ಹೊಸ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತವೆ. ಕೆಲವು ಫೋನ್‌ಗಳು ಹಿಂದಿನ ಜನಪ್ರಿಯ ಮಾಡೆಲ್‌ಗಳ ಅಪ್‌ಗ್ರೇಡ್‌ ಆವೃತ್ತಿ ಆಗಿರುತ್ತವೆ. ಹೀಗೆ ಸದ್ಯ ಈ ಜೂನ ದ್ವಿತೀಯಾರ್ಧದಲ್ಲಿ ಮಾರುಕಟ್ಟೆಯಲ್ಲಿ ಟ್ರೆಂಡಿಂಗ್‌ನಲ್ಲಿ (Trending) ಕಾಣಿಸಿಕೊಂಡಿರುವ ಫೋನ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿರಿ.

ಭಾರೀ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ಟಾಪ್‌ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ರಿಯಲ್‌ಮಿ GT 6 ಫೋನ್‌

ರಿಯಲ್‌ಮಿ GT 6 (Realme GT 6) ಫೋನ್‌ 6.78 ಇಂಚಿನ ಫುಲ್ HD+ (1,264 x 2,780 ಪಿಕ್ಸೆಲ್‌ಗಳ) 8T LTPO ಅಮೊಲೆಡ್‌ ಡಿಸ್‌ಪ್ಲೇ ಜೊತೆಗೆ 120Hz ರಿಫ್ರೆಶ್ ರೇಟ್, HDR 10+ ಸಪೋರ್ಟ್‌ ಮತ್ತು ಡಾಲ್ಬಿ ವಿಷನ್ ಸಪೋರ್ಟ್‌ ಹೊಂದಿದೆ. ಇದರೊಂದಿಗೆ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8s Gen 3 SoC ಪ್ರೊಸೆಸರ್‌ ಪವರ್‌ ಪಡೆದಿದೆ.

ಹಾಗೆಯೇ ಈ ಫೋನ್‌ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಆಗಿದೆ. ಹಾಗೆಯೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಮೊಬೈಲ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಮೊಬೈಲ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಫೋನ್ ಎಕ್ಸಿನೋಸ್ 1480 SoC ಪ್ರೊಸೆಸರ್‌ ಜೊತೆಗೆ ಆಂಡ್ರಾಯ್ಡ್ 14 ಓಎಸ್‌ನಲ್ಲಿ ರನ್‌ ಮಾಡಲಿದೆ. ಹಾಗೆಯೇ ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಒಳಗೊಂಡಿದೆ.

ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಅಲ್ಲದೇ ಈ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ.

ರೆಡ್ಮಿ ನೋಟ್‌ 13 ಪ್ರೊ ಮೊಬೈಲ್‌

ರೆಡ್ಮಿ ನೋಟ್‌ 13 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ 1.5K 120Hz ಡಿಸ್‌ಪ್ಲೇ ಅನ್ನು ಹೊಂದಿದ್ದು, ಇದರೊಂದಿಗೆ ಸ್ನಾಪ್‌ಡ್ರಾಗನ್ 7s ಜನ್ 2 ಪ್ರೊಸೆಸರ್‌ ಜೊತೆಗೆ MIUI 14 ಆಧಾರಿತ ಆಂಡ್ರಾಯ್ಡ್‌ 13 ಓಎಸ್‌ ಪಡೆದಿದೆ. ಹಾಗೆಯೇ 200ಎಂಪಿ ಕ್ಯಾಮೆರಾ ಪಡೆದಿದ್ದು, ಮುಂಭಾಗದಲ್ಲಿ 16ಎಂಪಿ ಸೆಲ್ಫಿ ಕ್ಯಾಮೆರಾ ರಚನೆ ಇದೆ. ಇದರ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ.

ಇನ್ಫಿನಿಕ್ಸ್ GT 20 ಪ್ರೊ ಮೊಬೈಲ್‌

ಇನ್ಫಿನಿಕ್ಸ್ GT 20 ಪ್ರೊ ಫೋನ್‌ 6.78 ಇಂಚಿನ FHD+ ಅಮೋಲೆಡ್‌ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಅಲ್ಟಿಮೇಟ್ ಪ್ರೊಸೆಸರ್‌ ಸಾಮರ್ಥ್ಯ ಒಳಗೊಂಡಿದೆ. ಜೊತೆಗೆ ಆಂಡ್ರಾಯ್ಡ್‌ 14 ಓಎಸ್ ಸಪೋರ್ಟ್‌ ಇದೆ. ಅಲ್ಲದೇ ಇದರ ಪ್ರಾಥಮಿಕ ಕ್ಯಾಮೆರಾವು 108 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಹೊಂದಿದೆ.

Best Mobiles in India

English summary
Few Trending Smartphones of June Second Half 2024. check phone list and specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+