Home
ಮೊಬೈಲ್

ರೆಡ್ಮಿ ನೋಟ್ 9 ಪ್ರೊ ಮ್ಯಾಕ್ಸ್‌ ಫೋನಿನ ಐದು ಪ್ಲಸ್‌ ಪಾಯಿಂಟ್‌!

ಜನಪ್ರಿಯ ಶಿಯೋಮಿ ಕಂಪೆನಿ ಇತ್ತೀಚಿಗೆ ಬಿಡುಗಡೆ ಮಾಡಿರುವ ರೆಡ್ಮಿ ನೋಟ್ 9 ಸ್ಮಾರ್ಟ್‌ಫೋನ್ ಸರಣಿಯು ರೆಡ್ಮಿ ನೋಟ್‌ 9 ಪ್ರೊ ಮತ್ತು ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದೆ. ಅವುಗಳಲ್ಲಿ ಹೈ ಎಂಡ್‌ ಫೀಚರ್ಸ್‌ಗಳಿಂದ ಸದ್ದು ಮಾಡಿರುವುದು ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್ ಈ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದಿದ್ದು, ಮೇನ್ ಕ್ಯಾಮೆರಾ 64ಎಂಪಿ ಸೆನ್ಸಾರ್ ಪಡೆದಿರುವುದ ಪ್ರಮುಖ ಹೈಲೈಟ್‌ ಆಗಿದೆ.

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 720G ಪ್ರೊಸೆಸರ್‌ ಹೊಂದಿದೆ. ಜೊತೆಗೆ ಸ್ವದೇಶಿ ನಿರ್ಮಿತ ಇಸ್ರೋದ ನ್ಯಾವಿಕ್‌ ತಂತ್ರಜ್ಞಾನವನ್ನು ಜಿಪಿಎಸ್‌ಗಾಗಿ ಇದು ಬೆಂಬಲಿಸಲಿದೆ. ಹಿಂದಿನ ರೆ್ಡಮಿ ನೋಟ್ 8 ಪ್ರೊ ಫೋನಿಗಿಂತ ಸಾಕಷ್ಟು ಅಪ್‌ಡೇಟ್ ಫೀಚರ್ಸ್‌ಗಳನ್ನು ಈ ಫೋನ್ ಹೊಂದಿದೆ. ಡಿಸ್‌ಪ್ಲೇ, ಪ್ರೊಸೆಸರ್, ಬ್ಯಾಟರಿ ಅಂಶಗಳಿಂದಲೂ ಗ್ರಾಹಕರನ್ನು ಆಕರ್ಷಿಸಿದೆ. ಹಾಗಾದರೆ ಈ ಫೋನಿನ ಐದು ಆಕರ್ಷಕ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಹೈ ಪಿಕ್ಸಲ್ ಡಿಸ್‌ಪ್ಲೇ

ಹೈ ಪಿಕ್ಸಲ್ ಡಿಸ್‌ಪ್ಲೇ

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.67 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 385 PPI ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿರುವ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದೆ. ಜೊತೆಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನ ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್‌ ಗೋರಿಲ್ಲಾ ಗ್ಲಾಸ್‌ 5 ಅನ್ನು ಫ್ರಂಟ್‌ ಹಾಗೂ ರಿಯರ್‌ ಸೆಟ್‌ಅಪ್‌ನಲ್ಲೂ ಸಹ ನೀಡಲಾಗಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಹಾಗೂ 120Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ.

ವೇಗದ ಪ್ರೊಸೆಸರ್‌

ವೇಗದ ಪ್ರೊಸೆಸರ್‌

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 720G ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಅದರೊಟ್ಟಿಗೆ ಆಂಡ್ರಾಯ್ಡ್‌ 10 ಒಎಸ್‌ ಬೆಂಬಲವನ್ನು ಪಡೆದಿದೆ. ಹಾಗೆಯೇ ಈ ಫೋನ್ ಸ್ಮಾರ್ಟ್‌ಫೋನ್‌ 6GB RAM ಮತ್ತು 64GB, 6GB RAM ಮತ್ತು 128GB, ಹಾಗೂ 8GB RAM ಮತ್ತು 128GB ಆಂತರಿಕ ಸಂಗ್ರಹಣ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯನ್ನ ಹೊಂದಿದೆ.

ನ್ಯಾವಿಕ್ ತಂತ್ರಜ್ಞಾನ

ನ್ಯಾವಿಕ್ ತಂತ್ರಜ್ಞಾನ

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಜಿಪಿಎಸ್‌ ಫೀಚರ್‌ಗಾಗಿ ಭಾರತದ ಇಸ್ರೋ ಸಂಸ್ಥೆ ಅಭಿವೃದ್ದಿ ಪಡಿಸಿರುವ ನ್ಯಾವಿಗೇಷನ್‌ ತಂತ್ರಜ್ಞಾನ ನ್ಯಾವಿಕ್‌ ಅನ್ನು ಒಳಗೊಂಡಿರುವುದು ಪ್ರಮುಖ ಹೈಲೈಟ್ಸ್‌ಗಳಲ್ಲಿ ಒಂದಾಗಿದೆ.

ಕ್ವಾಡ್‌ ಕ್ಯಾಮೆರಾ

ಕ್ವಾಡ್‌ ಕ್ಯಾಮೆರಾ

ರೆಡ್ಮಿ ನೋಟ್‌ 9 ಪ್ರೊ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೆ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ 120 ಡಿಗ್ರಿ ಆಂಗಲ್‌ ಲೆನ್ಸ್‌, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಪವರ್‌ಫುಲ್ ಬ್ಯಾಟರಿ

ಪವರ್‌ಫುಲ್ ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್‌ 9 ಪ್ರೊ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ನಲ್ಲಿ 0 ಟು 50% ಬ್ಯಾಟರಿ ಚಾರ್ಜಿಂಗ್‌ ಅನ್ನು ಕೇವಲ 30 ನಿಮಿಷಗಳಲ್ಲಿ ಮಾಡಬಹುದಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ನ್ಯಾವಿಕ್‌ ಜಿಪಿಎಸ್‌ ಟೆಕ್ನಾಲಜಿ ಹಾಗೂ 3.5mm ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಶಿಯೋಮಿ ರೆಡ್ಮಿ ನೋಟ್‌ 9 ಪ್ರೊ ಸ್ಮಾರ್ಟ್‌ಫೋನ್‌ ಬೇಸ್‌ ವೇರಿಯೆಂಟ್‌ 6GB RAM ಮತ್ತು 64GB ಸ್ಮಾರ್ಟ್‌ಫೋನ್‌ ಬೆಲೆ 14,999.ರೂ,ಆಗಿದೆ. ಅಲ್ಲದೆ 6GB RAM ಮತ್ತು128GB ಸಾಮರ್ಥ್ಯದ ಸ್ಮಾರ್ಟ್‌ಫೋನ್‌ ಬೆಲೆ 16,999.ಆಗಿದ್ದರೆ, 8GB RAM ಮತ್ತು 128GB ಆಯ್ಕೆಯ ಸ್ಮಾರ್ಟ್‌ಫೋನ್‌ ಬೆಲೆ 18,999.ರೂ,ಆಗಿದೆ. ಹಾಗೆಯೇ ಬ್ಲ್ಯಾಕ್‌, ಗ್ಲೇಸಿಯರ್‌ ವೈಟ್‌ ಮತ್ತು ಆರೋರಾ ಬ್ಲೂ ಬಣ್ಣದ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Redmi Note 9 Pro Max on the rear packs a 64-megapixel primary camera with an f/1.89 aperture.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+