TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಜನಪ್ರಿಯ 'ನೋಕಿಯಾ 6.1 ಪ್ಲಸ್' ಬೆಲೆ ದಿಢೀರ್ ಇಳಿಕೆ!!
ಮೊನ್ನೆ ಮೊನ್ನೆಯಷ್ಟೇ ನೂತನ ಮಾದರಿಯ ನೋಕಿಯಾ 8.1 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ ಹೆಚ್‌ಎಂಡಿ ಗ್ಲೋಬಲ್ ಕಂಪೆನಿ ಇದೀಗ ಮತ್ತೊಂದು ಸಿಹಿಸುದ್ದಿ ನೀಡಿದೆ. ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಈಗಾಗಲೇ ಭರ್ಜರಿ ಮಾರಾಟ ಕಾಣುತ್ತಿರುವ ನೋಕಿಯಾದ ಬಜೆಟ್ ಸ್ಮಾರ್ಟ್‌ಫೋನ್ 'ನೋಕಿಯಾ 6.1' ಮೇಲೆ ಭರ್ಜರಿ ಡಿಸ್ಕೌಂಟ್ಸ್ ನೀಡಿ ಗಮನಸೆಳೆದಿದೆ.
ಹೌದು, ತನ್ನ ಅತ್ಯುತ್ತಮ 'ನೋಕಿಯಾ 6.1' ಸ್ಮಾರ್ಟ್‌ಪೋನ್ ಮುಖಬೆಲೆಯಲ್ಲಿ 1,500 ರೂ. ಕಡಿತಗೊಳಿಸಿರುವ ಹೆಚ್‌ಎಂಡಿ ಗ್ಲೋಬಲ್ ಸಂಸ್ಥೆ ಇದೀಗ ಅಗ್ಗದ ಬೆಲೆಯಲ್ಲಿ ನೋಕಿಯಾ 6.1 ಸ್ಮಾರ್ಟ್‌ಫೋನ್ ಅನ್ನು ಗ್ರಾಹಕರಿಗೆ ದೊರೆಯುವಂತೆ ಮಾಡಿದೆ. ಮಾರುಕಟ್ಟೆಯ ಇತರೆ ಬಜೆಟ್ ಫೋನ್‌ಗಳಿಗೆ ಹೋಲಿಸಿದರೆ ಇದೀಗ 'ನೋಕಿಯಾ 6.1' ಅಗ್ರಸ್ಥಾನದಲ್ಲಿ ನಿಲ್ಲುವಂತೆ ಮಾಡಿದೆ.
ಈ ಮೊದಲು 16,999 ರೂ.ಗಳಿಗೆ ಬಿಡುಗಡೆಯಾಗಿದ್ದ ಡ್ಯುಯಲ್ ಕ್ಯಾಮೆರಾ ಸ್ಮಾರ್ಟ್‌ಫೋನ್ 'ನೋಕಿಯಾ 6.1 ಪ್ಲಸ್'' ಸ್ಮಾರ್ಟ್‌ಫೋನ್ ಬೆಲೆ ಬಾರೀ ಇಳಿಕೆಯಾಗಿದ್ದು, ಹಾಗಾದರೆ, ಇಂದಿನ ಹಾಟ್ ಫೇವರೇಟ್ ಸ್ಮಾರ್ಟ್‌ಫೋನ್ 'ನೋಕಿಯಾ 6.1 ಪ್ಲಸ್'' ಸ್ಮಾರ್ಟ್‌ಫೋನ್ ಹೊಂದಿರುವ ವಿಶೇಷ ಫೀಚರ್ಸ್ ಯಾವುವು? ಬೆಲೆ ಎಷ್ಟು ಇಳಿಕೆಯಾಗಿದೆ ಎಂಬುದನ್ನು ಮುಂದೆ ಓದಿ ತಿಳಿಯಿರಿ.
ಡಿಸ್‌ಪ್ಲೇ ಮತ್ತು ಡಿಸೈನ್!
ಅತ್ಯಾಕರ್ಷಕ ವಿನ್ಯಾಸದಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡಿರುವ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 19: 9 ಆಕಾರ ಅನುಪಾತದ 5.84 ಇಂಚಿನ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. 1080 x 2280 ಸಾಮರ್ಥ್ಯದ ಡಿಸ್‌ಪ್ಲೇ ಇದಾಗಿದೆ. ಇನ್ನು ಹಿಂಭಾಗದಲ್ಲಿ ಎರಡು ಕ್ಯಾಮೆರಾಗಳು ಹಾಗೂ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಐಫೋನ್ 10 ಮಾದರಿಯ ನೋಚ್ ಡಿಸ್‌ಪ್ಲೇಯನ್ನು ಹೊಂದಿದೆ.
ಪ್ರೊಸೆಸರ್ ಮತ್ತು RAM!
ಮೊದಲೇ ಹೇಳಿದಂತೆ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 4+64 GB ವೆರಿಯಂಟ್ ಮಾದರಿಯಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಂಡಿದೆ. ಆಂಡ್ರಾಯ್ಡ್ ಒನ್ ಸಪೋರ್ಟ್ ಕ್ವಾಲ್ಕಂ ಕಂಪೆನಿಯ ಸ್ನ್ಯಾಪ್‌ಡ್ರಾಗನ್ 636 ಎಸ್‌ಒಸಿ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ ಓರಿಯೋದಲ್ಲಿ ಕಾರ್ಯನಿರ್ವಹಣೆ ನೀಡಲಿದೆ. ಎಸ್‌ಡಿ ಕಾರ್ಡ್ ಸಹಾಯದಿಂದ ಸ್ಮಾರ್ಟ್‌ಫೋನ್ ಮೆಮೊರಿಯನ್ನು 400GB ಹೆಚ್ಚಿಸಿಕೊಳ್ಳಬಹುದಾದ ಆಯ್ಕೆ ಸಹ ಲಭ್ಯವಿದೆ.
ಕ್ಯಾಮೆರಾ ಸಾಮರ್ಥ್ಯ?
ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ ಡ್ಯುಯಲ್ ರಿಯರ್ ಕ್ಯಾಮೆರಾಗಳನ್ನು ಹೊಂದಿದ್ದು, ಎಫ್ / 2.0 ಅಪಾರ್ಚರ್ ಮತ್ತು 1-ಮೈಕ್ರಾನ್ ಪಿಕ್ಸೆಲ್ಗಳಲ್ಲಿ 16-ಮೆಗಾಪಿಕ್ಸೆಲ್ ಮತ್ತು 5-ಮೆಗಾಪಿಕ್ಸೆಲ್ ಮೊನೊಕ್ರೋಮ್ ರಿಯರ್ ಕ್ಯಾಮೆರಾಗಳನ್ನು ಹೊಂದಿದೆ. 2.0 ಅಪಾರ್ಚರ್ ಮತ್ತು 1ಮೈಕ್ರಾನ್ ಪಿಕ್ಸೆಲ್ ಸೆನ್ಸಾರ್‌ನೊಂದಿಗೆ 16-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮರಾವನ್ನು ಸ್ಮಾರ್ಟ್‌ಫೋನಿನಲ್ಲಿ ನೋಡಬಹುದಾಗಿದೆ.
ಬ್ಯಾಟರಿ ಸಾಮರ್ಥ್ಯ ಎಷ್ಟು?
ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಪೋನ್ 3060mAh ಬ್ಯಾಟರಿ ಶಕ್ತಿಯನ್ನು ಹೊಂದಿದೆ. ಅಲ್ಲದೇ, ಸ್ಮಾರ್ಟ್‌ಫೋನ್ 18W ಚಾರ್ಜರ್ ಸಹಾಯದಿಂದ ಕೇವಲ 30 ನಿಮಿಷಗಳಲ್ಲಿ 50 ಪರ್ಸೆಂಟ್ ಚಾರ್ಜ್ ಆಗುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಯುಎಸ್‌ಬಿ ಟೈಪ್ ಸಿ ಪೋರ್ರ್ಟ ಮತ್ತು 3.5MM ಹೆಡ್‌ಪೋನ್ ಜಾಕ್ ಅನ್ನು ಸ್ಮಾರ್ಟ್‌ಫೋನಿನಲ್ಲಿ ಕಾಣಬಹುದಾಗಿದೆ.
ಇತರೆ ಏನೆಲ್ಲಾ ಫೀಚರ್ಸ್?
4G ವೋಲ್ಟ್, ಬ್ಲೂಟೂತ್ V5.0, 2.3 ಕರ್ವರ್ ಗ್ಲಾಸ್ 3 ಸ್ಕ್ರೀನ್ ಪ್ರೊಟೆಕ್ಷನ್ ಹೊಂದಿರುವ ಸ್ಮಾರ್ಟ್‌ಫೋನ್, ಅಕ್ಸೆಲೆರೊಮೀಟರ್, ಸುತ್ತುವರಿದ ಬೆಳಕಿನ ಸಂವೇದಕ, ಡಿಜಿಟಲ್ ದಿಕ್ಸೂಚಿ, ಗೈರೊಸ್ಕೋಪ್ ಮತ್ತು ಸಾಮೀಪ್ಯ ಸಂವೇದಕಗಳನ್ನು ಹೊಂದಿದೆ. ಹಿಂಬಾಗದಲ್ಲಿ ಫಿಂಗರ್‌ಪ್ರಿಂಟ್ ರೀಡರ್ ಆಯ್ಕೆಯನ್ನು ಹೊಂದಿರುವ ಸ್ಮಾರ್ಟ್‌ಫೋನ್ ಫೇಸ್‌ಲಾಕ್ ಫೀಚರ್ ಅನ್ನು ಒಳಗೊಂಡಿರುವುದು ವಿಶೇಷತೆಯಾಗಿದೆ.
ನೋಕಿಯಾ 6.1 ಪ್ಲಸ್ ಬೆಲೆ ಎಷ್ಟು?
ಇಷ್ಟೆಲ್ಲಾ ಫೀಚರ್ಸ್ ಹೊಂದಿರುವ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಫೋನ್ ಬೆಲೆ ಈಗ ಕಡಿಮೆಯಾಗಿದೆ. ರೆಡ್ ಮಿ ನೋಟ್ 5 ಸ್ಮಾರ್ಟ್‌ಫೋನಿಗೆ ನೇರಾನೇರ ಸೆಡ್ಡು ಹೊಡೆಯುತ್ತಿರುವ ನೋಕಿಯಾ 6.1 ಪ್ಲಸ್ ಸ್ಮಾರ್ಟ್‌ಫೋನ್ ಬೆಲೆ ಫ್ಲಿಪ್‌ಕಾರ್ಟ್‌ನಲ್ಲಿ 14,999 ರೂ.ಗಳಿಗೆ ಲಭ್ಯವಿದೆ. ಹಾಗಾಗಿ, ಇದು ನೋಕಿಯಾ ಆಂಡ್ರಾಯ್ಡ್ ಸ್ಮಾರ್ಟ್‌ಪೋನ್‌ಗಳಲ್ಲಿಯೇ ಬೆಲೆಗೆ ತಕ್ಕಂತಹ ಫೀಚರ್ಸ್ ಹೊಂದಿರುವ ಸ್ಮಾರ್ಟ್‌ಪೋನ್ ಆಗಿದೆ.