Just In
- 1 hr ago
ಮಾರುಕಟ್ಟೆಗೆ ಎಂಟ್ರಿ ಕೊಟ್ಟ ವಾಯರ್ಲೆಸ್ ಚಾರ್ಜಿಂಗ್ ಬೆಂಬಲಿಸುವ ಸ್ಮಾರ್ಟ್ವಾಚ್!
- 3 hrs ago
Valentines Day ಗಿಫ್ಟ್ ಸರ್ಚ್ ಮಾಡ್ತಾ ಇದ್ದೀರಾ?..ಇಲ್ಲಿವೆ ನೋಡಿ ಅತ್ಯುತ್ತಮ ಉಡುಗೊರೆ
- 4 hrs ago
ವಾಟ್ಸಾಪ್ಗೆ ಈ ಅಚ್ಚರಿಯ ಆಯ್ಕೆ ಸೇರೋದು ಪಕ್ಕಾ! ಇದರ ಬಗ್ಗೆ ಕೂಡಲೇ ತಿಳಿದುಕೊಳ್ಳಿ!
- 4 hrs ago
ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ; ಈ ಪ್ಲ್ಯಾನ್ 28 ದಿನಕ್ಕಲ್ಲ ಬದಲಾಗಿ ಒಂದು ತಿಂಗಳ ಮಾನ್ಯತೆ!
Don't Miss
- News
Infographics: ಕೇಂದ್ರ ಬಜೆಟ್ನಲ್ಲಿ ಯಾವ ಯೋಜನೆಗಳಿಗೆ ಎಷ್ಟೇಷ್ಟು ಅನುದಾನ ಘೋಷಣೆ ಆಗಿದೆ?
- Movies
ಕಿರುತೆರೆ ಮೂಲಕ ನಟನೆಗೆ ಕಾಲಿಟ್ಟ ದೀಕ್ಷಿತ್ ಈಗ ಚಿತ್ರರಂಗದಲ್ಲಿ ಬ್ಯುಸಿ
- Sports
WIPL Auction 2023: ಫೆ.13ರಂದು ಮುಂಬೈನಲ್ಲಿ ಮಹಿಳಾ ಐಪಿಎಲ್ ಹರಾಜು ನಡೆಯುವ ಸಾಧ್ಯತೆ
- Finance
ಉದ್ಯೋಗಿಗಳಿಗೆ ಟೊಯೋಟಾ ಗ್ಲಾನ್ಜಾ ಗಿಫ್ಟ್ ನೀಡಿದ ರಮೇಶ್ ಮರಂದ್ ಯಾರು?
- Automobiles
ಭಾರತದಲ್ಲಿ ದುಬಾರಿ ಬೆಲೆಯ ಈ ಕಿಯಾ ಕಾರಿಗೆ ಭಾರೀ ಡಿಮ್ಯಾಂಡ್: ಇನೋವಾಗೆ ಹೆಚ್ಚಿದ ಪೈಪೋಟಿ
- Lifestyle
ಸುಖಿ ಸಂಸಾರ ಅಂತ ಇದ್ದರೂ ಗಂಡ ಅನೈತಿಕ ಸಂಬಂಧ ಬೆಳೆಸುವುದೇಕೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ವಿಶ್ವದ ಮೊದಲ ಫೋಲ್ಡಬಲ್ ಫೋನ್ 'ಗ್ಯಾಲಕ್ಸಿ ಫೋಲ್ಡ್' ಮಾರಾಟ ಆರಂಭ!..ಬೆಲೆ ಎಷ್ಟು?
ವಿಶ್ವ ಮೊಬೈಲ್ ಮಾರುಕಟ್ಟೆ ಬಹುನಿರೀಕ್ಷೆಯಿಂದ ಕಾಯುತ್ತಿರುವ ಐದನೇ ತಲೆಮಾರಿನ 'ಗ್ಯಾಲಕ್ಸಿ ಫೋಲ್ಡ್' ಫೋಲ್ಡಬಲ್ ಸ್ಮಾರ್ಟ್‌ಫೋನ್ ಮಾರಾಟ ದಕ್ಷಿಣ ಕೊರಿಯಾದಲ್ಲಿ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಸ್ಮಾರ್ಟ್‌ಫೋನ್ ಮಾರಾಟಗಾರ ಕಂಪೆನಿಯಾದ ಸ್ಯಾಮ್‌ಸಂಗ್ ಈ ಸಾಧನದ ಬೆಲೆಯನ್ನು 2.398 ಮಿಲಿಯನ್ ವಾನ್‌ಗೆ (ಅಂದಾಜು 1.40 ಲಕ್ಷ ರೂ.) ನಿಗದಿಪಡಿಸಿದ್ದು, ಇನ್ನೆರಡು ವಾರಗಳಲ್ಲಿ ಬ್ರಿಟನ್, ಫ್ರಾನ್ಸ್ ಮತ್ತು ಜರ್ಮನಿಯಲ್ಲಿ ಫೋನ್ ಮಾರಾಟವಾಗಲಿದೆ ಮತ್ತು ಯು.ಎಸ್. ಬಿಡುಗಡೆಯನ್ನೂ ಯೋಜಿಸಲಾಗಿದೆ ಎಂದು ಕಂಪೆನಿ ತಿಳಿಸಿದೆ.

ಗ್ರಾಹಕರು ದೊಡ್ಡ ಪರದೆಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಮತ್ತು ಗ್ಯಾಲಕ್ಸಿ ಫೋಲ್ಡ್ ಕ್ರಾಂತಿಕಾರಿ ಪರದೆಯನ್ನು ನೀಡುತ್ತದೆ. ಇದನ್ನೇ ನಾವು ಹೊಸ ಮೊಬೈಲ್ ಅನುಭವದ ನಾವೀನ್ಯತೆ ಎಂದು ಕರೆಯುತ್ತೇವೆ. ಈ ಪ್ರವರ್ತಕ ಮೊಬೈಲ್ ತಂತ್ರಜ್ಞಾನವನ್ನು ಬಿಡುಗಡೆ ಮಾಡಲು ನಾವು ಉತ್ಸುಕರಾಗಿದ್ದೇವೆ ಮತ್ತು ಗ್ರಾಹಕರು ಅದನ್ನು ಅನುಭವಿಸಲು ಅನುವು ಮಾಡಿಕೊಡುತ್ತೇವೆ ಎಂದು ಸಂಸ್ಥೆಯ ಅಧ್ಯಕ್ಷ ಮತ್ತು ಸಿಇಒ ಆಗಿರುವ ಡಿಜೆ ಕೊಹ್ ಅವರು ಹೇಳಿದ್ದಾರೆ.

ಟೆಕ್ ಲೋಕದ ವಿಸ್ಮಯವಾಗಿರುವ 'ಗ್ಯಾಲಕ್ಸಿ ಫೋಲ್ಡ್' ಸ್ಮಾರ್ಟ್‌ಫೋನ್ ಅಧಿಕೃತವಾಗಿ ಅನಾವರಣಗೊಂಡು ಐದು ತಿಂಗಳುಗಳಿಗಿಂತ ಹೆಚ್ಚು ಕಳೆದಿದೆ. 'ಗ್ಯಾಲಕ್ಸಿ ಫೋಲ್ಡ್' ತೆರೆದು ಬಳಸಲು ಆರಂಭಿಸುತ್ತಿದ್ದಂತೆಯೇ ಪರದೆಯ ಕೆಳ ಭಾಗದಲ್ಲಿ ಪ್ರೊಟೆಕ್ಟಿವ್ ಲೇಯರ್ ಕಿತ್ತುಬರುತ್ತಿದೆ ಎಂದು ಹೇಳಲಾಗಿದ್ದರಿಂದ ಫೋನ್ ಈವರೆಗೂ ಮಾರಾಟಕ್ಕೆ ಬಂದಿರಲಿಲ್ಲ. ಆದರೆ, ಈ ಸಮಸ್ಯೆಯನ್ನು ಸ್ಯಾಮ್‌ಸಂಗ್ ಈಗ ಬಗೆಹರಿಸಿದೆ. ಹಾಗಾದರೆ, ಮೊಟ್ಟ ಮೊದಲ ಮಡುಚಬಹುದಾದ 'ಗ್ಯಾಲಕ್ಸಿ ಫೋಲ್ಡ್' ಫೋನ್ ಹೇಗಿದೆ ಎಂಬುದನ್ನು ಮುಂದೆ ಓದಿ ತಿಳಿಯಿರಿ.

ಭವಿಷ್ಯದಲ್ಲಿ ಇಂತಹದೊಂದು ಮೊಬೈಲ್ ಮಾರುಕಟ್ಟೆಗೆ ಬರಲಿದೆ ಎಂಬ ಊಹೆಯನ್ನು ಮಾಡಿಕೊಳ್ಳದಂತೆ ಗ್ಯಾಲಕ್ಸಿ ಫೋಲ್ಡ್ ಸ್ಮಾರ್ಟ್‌ಫೋನ್ ವಿನ್ಯಾಸಗೊಂಡಿದೆ. ಮಡುಚಿದಾಗ ಕೇವಲ 4.6 ಇಂಚಿನ ಸ್ಕ್ರೀನ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಅನ್ನು ಪೂರ್ತಿ ತೆರೆದಾಗ 7.3 ಇಂಚಿನ ಸ್ಕ್ರೀನ್ ತೆರೆದುಕೊಳ್ಳುತ್ತದೆ. ಮುಂಬಾಗದ ಬಲಾಭಾಗದಲ್ಲಿ ಮೂರು ಸೆಲ್ಫೀ ಕ್ಯಾಮೆರಾಕ್ಕೆ ಸಪೋರ್ಟ್ ಮಾಡುವಂತಹ ನೋಚ್ ಹಾಗೂ ಹಿಂಬಾಗದಲ್ಲಿ ಮೂರು ಕ್ಯಾಮೆರಾಗಳನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್ ವಿನ್ಯಾಸಕ್ಕೆ ಸರಿಸಾಟಿಯಾದ ಸ್ಮಾರ್ಟ್‌ಫೋನ್ ಮತ್ತೊಂದಿಲ್ಲ.

ಇದೊಂದು ಮಡಚುವ ಸ್ಮಾರ್ಟ್‌ಫೋನ್ ಆಗಿರುವುದರಿಂದ ಎರಡು ಡಿಸ್‌ಪ್ಲೇ ಸ್ರೀನ್‌ಗಳನ್ನು ಹೊಂದಿರುವುದನ್ನು ನೀವು ಸುಲಭವಾಗಿ ತಿಳಿಯಬಹುದಾಗಿದೆ. 4.6 ಇಂಚಿನ ಹಾಗೂ 7.3 ಇಂಚಿನ ಸ್ಕ್ರೀನ್ ಎರಡು ಸ್ಕ್ರೀನ್‌ಗಳು ಗ್ಯಾಲಾಕ್ಸಿ ಫೋಲ್ಡ್ ಫೋನಿನ ಪ್ರಮುಖ ವಿಶೇಷತೆಯಾಗಿದೆ. ಸ್ಯಾಮ್ಸಂಗ್ ಹೇಳುವ ಪ್ರಕಾರ, ಇನ್ಫಿನಿಟಿ ಫ್ಲೆಕ್ಸ್ ಡಿಸ್ಪ್ಲೇ ಹೊಂದಿರುವ ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಅತ್ಯಂತ ವಿಶೇಷವಾಗಿದ್ದು, ಸ್ಮಾರ್ಟ್‌ಫೋನ್ ಅನ್ನು ಮನಬಂದಂತೆ ಪದರ ಮಾಡಲು ಅನುಮತಿಸುತ್ತದೆ ಎಂದು ತಿಳಿಸಿದೆ.

ಮೊದಲೇ ಹೇಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ ಪದರ 7nm ಆಕ್ಟಾ-ಕೋರ್ ಪ್ರೊಸೆಸರ್ನಿಂದ ಶಕ್ತಿಯನ್ನು ಹೊಂದಿದೆ ಮತ್ತು ಡ್ಯುಯಲ್ ಬ್ಯಾಟರಿ ಸಿಸ್ಟಮ್ ಅನ್ನು ಪ್ಯಾಕ್ ಮಾಡುತ್ತದೆ. ಇದು ವೈರ್ಲೆಸ್ ಪವರ್ ಶೇರ್ ಸಿಸ್ಟಮ್ ಅನ್ನು ಬೆಂಬಲಿಸುತ್ತದೆ, ಇದು ಗ್ಯಾಲಕ್ಸಿ ಪದರವನ್ನು ಸ್ವತಃ ಚಾರ್ಜ್ ಮಾಡಲು ಮತ್ತು ಎರಡನೆಯ ಸಾಧನವನ್ನು ಏಕಕಾಲದಲ್ಲಿ ಅನುಮತಿಸುತ್ತದೆ. ಇನ್ನು ಫೋನ್ 12 ಜಿಬಿ ರಾಮ್ ಮತ್ತು 512 ಜಿಬಿ ಆಂತರಿಕ ಶೇಖರಣಾ ಬೆಂಬಲವನ್ನು ಹೊಂದುವ ಮೂಲಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ.

'ಗ್ಯಾಲಕ್ಸಿ ಪೋಲ್ಡ್' ಸ್ಮಾರ್ಟ್‌ಫೋನ್ ಒಟ್ಟು ಆರು ಕ್ಯಾಮೆರಾಗಳನ್ನು ಪ್ಯಾಕ್ ಮಾಡುವ ಮೊದಲ ಸ್ಮಾರ್ಟ್‌ಫೋನ್ ಆಗಿ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಮಡುಚಿದಾದ 10MP+f/2.2 ಸಾಮರ್ಥ್ಯದ ಒಂದು ಸೆಲ್ಫೀ ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್‌ಫೋನ್ 16MP ಅಲ್ಟ್ರಾ ವಿಶಾಲ ಕೋನ ಮಸೂರ ಮತ್ತು ಎರಡು 12MP ವಿಶಾಲ ಕೋನ ಮತ್ತು ಟೆಲಿಫೋಟೋ ಮಸೂರಗಳ ಟ್ರಿಪಲ್ ರಿಯರ್ ಕ್ಯಾಮೆರಾಗಳನ್ನು ಹೊಂದಿದೆ. ಇನ್ನು ಟ್ಯಾಬ್ಲೆಟ್ ಮೋಡ್‌ನಲ್ಲಿ 10MP + 8MP ಡೆಪ್ತ್ ಸಂವೇದಕದಲ್ಲಿ ಸೆಲ್ಫೀ ಕ್ಯಾಮೆರಾಗಳನ್ನು ಕಾಣಬಹುದಾಗಿದೆ.

ಭಾರೀ ಫೀಚರ್ಸ್ ಹೊಂದಿರುವ 'ಗ್ಯಾಲಕ್ಸಿ ಪೋಲ್ಡ್' ಸ್ಮಾರ್ಟ್‌ಫೋನ್ ಶಕ್ತಿಕೇಂದ್ರಕ್ಕೆ ಬಲವನ್ನು ಒದಗಿಸುವಲ್ಲಿ ಸ್ಯಾಮ್‌ಸಂಗ್ ಯಶಸ್ವಿಯಾಗಿದೆ. 4380mAh ಬ್ಯಾಟರಿ ಶಕ್ತಿಯನ್ನು ಹೊಂದಿರುವ ಸ್ಮಾರ್ಟ್‌ಪೋನ್ ತ್ವರಿತವಾಗಿ ಚಾರ್ಜ್ ಆಗುವಂತಹ ಇತ್ತೀಚಿನ QC2.0 ವೇಗದ ತಂತ್ರಜ್ಞಾನವನ್ನು ಹೊತ್ತು 'ಗ್ಯಾಲಕ್ಸಿ ಪೋಲ್ಡ್' ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದೆ. QC2.0 ಮತ್ತು AFC ಯೊಂದಿಗೆ ಹೊಂದಾಣಿಕೆಯ ಚಾರ್ಜಿಂಗ್ WPC ಮತ್ತು PMA ನೊಂದಿಗೆ ಹೊಂದಾಣಿಕೆಯ ವೈರ್ಲೆಸ್ ಚಾರ್ಜಿಂಗ್ ಆಗಿದೆ.!

'ಗ್ಯಾಲಕ್ಸಿ ಪೋಲ್ಡ್' ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 9 ಅಥವಾ ಆಂಡ್ರಾಯ್ಡ್ 10 ಮೂಲಕ ರನ್ ಆಗಲಿದೆ ಮತ್ತು ಅಪ್ಲಿಕೇಶನ್ ಮುಂದುವರಿದಂತಹ ವೈಶಿಷ್ಟ್ಯಗಳನ್ನು ಬೆಂಬಲಿಸುತ್ತದೆ ಮತ್ತು ಅದು ಮುಖಪುಟದಲ್ಲಿ ಚಾಲನೆಯಲ್ಲಿರುವ ಒಳಭಾಗದಲ್ಲಿ ಅದೇ ಅಪ್ಲಿಕೇಶನ್ ಅನ್ನು ಪ್ರವೇಶಿಸಲು ನಿಮಗೆ ಅನುಮತಿಸುತ್ತದೆ. ಸ್ಯಾಮ್ಸಂಗ್ ಗೂಗಲ್ ಮತ್ತು ಆಂಡ್ರಾಯ್ಡ್ ಡೆವಲಪರ್ ಸಮುದಾಯದೊಂದಿಗೆ ಕೆಲಸ ಮಾಡಿರುವುದರಿಮದ ಈ ಸ್ಮಾರ್ಟ್‌ಫೋನಿನಲ್ಲಿ ವಿಶಿಷ್ಟ ಅನುಭವಕ್ಕಾಗಿ ವಿಶೇಷ ಅಪ್ಲಿಕೇಶನ್‌ಗಳು ಮತ್ತು ಸೇವೆಗಳು ಲಭ್ಯವಿವೆ ಎಂದು ತಿಳಿದುಬಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470