ಗೂಗಲ್‌ ಪಿಕ್ಸೆಲ್‌ 7 V/S ನಥಿಂಗ್ ಫೋನ್ 1: ಖರೀದಿಗೆ ಯಾವುದು ಬೆಸ್ಟ್‌?

|

ಸರ್ಚ್ ಇಂಜಿನ್ ದೈತ್ಯ ಗೂಗಲ್‌ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಗೂಗಲ್‌ ಪಿಕ್ಸಲ್ 7 (Google Pixel 7) ಸ್ಮಾರ್ಟ್‌ಫೋನ್‌ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಅದೇ ರೀತಿ ನಥಿಂಗ್ ಸಂಸ್ಥೆಯು ಬಿಡುಗಡೆ ಮಾಡಿರುವ ನಥಿಂಗ್ ಫೋನ್ 1 (Nothing Phone (1)) ಭಿನ್ನ ಡಿಸೈನ್‌ ಪಡೆದಿದ್ದು, ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಖರೀದಿಗೆ ಯಾವುದು ಬೆಸ್ಟ್‌ ಗೊತ್ತಾ?

ನಥಿಂಗ್ ಫೋನ್ 1

ಹೊಸದಾಗಿ ಎಂಟ್ರಿ ಕೊಟ್ಟಿರುವ ನಥಿಂಗ್ ಫೋನ್ 1 ರಚನೆ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಫೋನ್‌ ಪ್ರಿಯರನ್ನು ತನ್ನತ್ತ ಸೆಳೆದಿದೆ. ಇನ್ನು ಗೂಗಲ್‌ ಪಿಕ್ಸಲ್ 7 ಫೋನ್‌ ಕ್ಯಾಮೆರಾ ಜೊತೆಗೆ ಕೆಲವು ಅತ್ಯುತ್ತಮ ಫೀಚರ್ಸ್‌ ಪಡೆದಿರುವುದು ಪ್ರಮುಖ ಹೈಲೈಟ್‌ ಆಗಿದೆ. ಈ ಎರಡು ಫೋನ್‌ಗಳಲ್ಲಿನ ಪ್ರಮುಖ ಭಿನ್ನತೆಗಳೆನು? ಕ್ಯಾಮೆರಾ ಸೆನ್ಸಾರ್‌ನಲ್ಲಿರುವ ವ್ಯತ್ಯಾಸಗಳೆನು ಎನ್ನುವ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ ಹಾಗೂ ಭಿನ್ನತೆಗಳು

ಡಿಸ್‌ಪ್ಲೇ ವಿನ್ಯಾಸ ಹಾಗೂ ಭಿನ್ನತೆಗಳು

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, OLED ಡಿಸ್‌ಪ್ಲೇ ಪಡೆದಿದೆ. ಇನ್ನು ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಎರಡು ಫೋನ್‌ಗಳು 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಡಿಸ್‌ಪ್ಲೇ ಸಾಮರ್ಥ್ಯವನ್ನು ಹೊಂದಿದೆ. ಆದರೆ ನಥಿಂಗ್ ಫೋನ್ (1) ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್‌ ರೇಟ್ ಪಡೆದಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದ್ದು, ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇನ್ನು ಈ ಎರಡು ಫೋನ್‌ಗಳು 8GB RAM ಸಾಮರ್ಥ್ಯದ ಆಯ್ಕೆ ಪಡೆದಿವೆ. ಆದರೆ ನಥಿಂಗ್ ಫೋನ್ (1) ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್ ಪಡೆದಿದ್ದು, ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಪಡೆದಿದೆ.

ಕ್ಯಾಮೆರಾ ರಚನೆ ಹಾಗೂ ಸೆನ್ಸಾರ್ ಎಷ್ಟು?

ಕ್ಯಾಮೆರಾ ರಚನೆ ಹಾಗೂ ಸೆನ್ಸಾರ್ ಎಷ್ಟು?

ಗೂಗಲ್‌ ಪಿಕ್ಸೆಲ್‌ 7 ಮತ್ತು ನಥಿಂಗ್ ಫೋನ್ (1) ಈ ಎರಡು ಸ್ಮಾರ್ಟ್‌ಫೋನ್‌ಗಳು ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಆದರೆ ಭಿನ್ನ ಸೆನ್ಸಾರ್ ಆಯ್ಕೆ ಹೊಂದಿವೆ. ಈ ಎರಡು ಫೋನ್‌ಗಳ ಮುಖ್ಯ ಕ್ಯಾಮೆರಾ ಸೆನ್ಸಾರ್ 50 ಮೆಗಾ ಪಿಕ್ಸಲ್‌ ಸಾಮರ್ಥ್ಯದಲ್ಲಿವೆ. ಪಿಕ್ಸೆಲ್‌ 7 ಫೋನಿನ ಸೆಕೆಂಡರಿ ಕ್ಯಾಮೆರಾ 12 ಮೆಗಾ ಪಿಕ್ಸಲ್‌ ಆಗಿದ್ದು, ನಥಿಂಗ್ ಫೋನ್ (1) ಫೋನಿನ ಎರಡನೇ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್ ನಲ್ಲಿದೆ.

ಸೆಲ್ಫಿ ಕ್ಯಾಮೆರಾದಲ್ಲಿ ಭಿನ್ನತೆ

ಸೆಲ್ಫಿ ಕ್ಯಾಮೆರಾದಲ್ಲಿ ಭಿನ್ನತೆ

ಗೂಗಲ್‌ ಪಿಕ್ಸೆಲ್‌ 7 ಮುಂಭಾಗದಲ್ಲಿ 10.8 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ರಚನೆಯನ್ನು ಒಳಗೊಂಡಿದೆ. ಇನ್ನು ನಥಿಂಗ್ ಫೋನ್ (1) 16 ಮೆಗಾ ಪಿಕ್ಸಲ್‌ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ವಿನ್ಯಾಸವನ್ನು ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾ ಗುಣಮಟ್ಟದಲ್ಲಿ ಗೂಗಲ್‌ ಪಿಕ್ಸಲ್‌ 7 ಫೋನ್‌ ಹೆಚ್ಚು ಗಮನ ಸೆಳೆಯುತ್ತದೆ.

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಎಷ್ಟು?

ಬ್ಯಾಟರಿ ಬ್ಯಾಕ್‌ಅಪ್‌ ಸಾಮರ್ಥ್ಯ ಎಷ್ಟು?

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಅದೇ ರೀತಿ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಭಾರತದಲ್ಲಿ ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ 59,999ರೂ. ಬೆಲೆಯನ್ನು ಹೊಂದಿದೆ. ಹಾಗೆಯೇ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ಆಯ್ಕೆಗೆ 32,999ರೂ. ಆಗಿದೆ.

ಕೊನೆಯ ಮಾತು

ಕೊನೆಯ ಮಾತು

ಗೂಗಲ್‌ ಪಿಕ್ಸೆಲ್‌ 7 ಸ್ಮಾರ್ಟ್‌ಫೋನ್‌ ಮತ್ತು ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ ನಡುವೆ ಬೆಲೆಯಲ್ಲಿ ಹಾಗೂ ಕ್ಯಾಮೆರಾ ಕ್ವಾಲಿಟಿಯಲ್ಲಿ ಜೊತೆಗೆ ಆಪರೇಟಿಂಗ್ ಸಿಸ್ಟಮ್‌ ಆಯ್ಕೆಗಳಲ್ಲಿ ಭಿನ್ನತೆಗಳನ್ನು ಕಾಣಬಹುದಾಗಿದೆ. ಫ್ಲ್ಯಾಗ್‌ಶಿಪ್‌ ಮಾದರಿಯ ಬೆಲೆಯಲ್ಲಿ ಅತ್ಯುತ್ತಮ ಕ್ಯಾಮೆರಾ ಫೋನ್‌ ಖರೀದಿ ಮಾಡುವ ಇಚ್ಛೆ ಇರುವ ಗ್ರಾಹಕರು ಗೂಗಲ್‌ ಪಿಕ್ಸಲ್‌ 7 ಖರೀದಿ ಸೂಕ್ತ ಎನಿಸುತ್ತದೆ. ಇನ್ನು ಮೀಡ್‌ ರೇಂಜ್‌ ಪ್ರೈಸ್ ಟ್ಯಾಗ್‌ನಲ್ಲಿ ಒಂದೊಳ್ಳೆ ಫೋನ್‌ ಖರೀದಿ ಮಾಡುವ ಗ್ರಾಹಕರು ನಥಿಂಗ್ ಫೋನ್ (1) ಆಯ್ಕೆ ಮಾಡಿಕೊಳ್ಳಬಹುದು.

Best Mobiles in India

English summary
Google Pixel 7 vs Nothing Phone (1) Comparison: Which One Better to Buy.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X