HMD: ಹೊಸ ಫೋನ್ ಲಾಂಚ್; 108MP ಕ್ಯಾಮೆರಾ.. 256GB ಸ್ಟೋರೇಜ್.. ಕಡಿಮೆ ಬೆಲೆ!
ಎಚ್‌ಎಂಡಿ ಗ್ಲೋಬಲ್ (HMD Global) ಭಾರತದಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದು ಎಚ್‌ಎಂಡಿ ಫ್ಯೂಷನ್ (HMD Fusion) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ನೀವು, ರಿಯಾಯಿತಿಯೊಂದಿಗೆ ಕೇವಲ 15,999 ರೂ.ಗೆ ಖರೀದಿಸಬಹುದು. ವಿಶೇವೆಂದರೆ, ಇದು ರಿಪೇರಿ ಮಾಡಬಹುದಾದ ಸ್ಮಾರ್ಟ್‌ಫೋನ್ ಆಗಿದೆ. ಸ್ವತಃ ನೀವೆ, ಈ ಫೋನಿನ ಡಿಸ್ಪ್ಲೇ, ಬ್ಯಾಟರಿ ಮತ್ತು ಚಾರ್ಜಿಂಗ್ ಪೋರ್ಟ್ ಅನ್ನು ತೆಗೆಯಬಹುದು ಮತ್ತು ಬದಲಾಯಿಸಬಹುದು. ಬನ್ನಿ, ಈ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ಕಂಪನಿಯು ಎಚ್‌ಎಂಡಿ ಫ್ಯೂಷನ್ ಫೋನನ್ನು 8GB RAM + 256GB ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು 6.56 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಮತ್ತು 33W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದೆ.

ಎಚ್ಎಂಡಿ ಫ್ಯೂಷನ್ ಬೆಲೆ ಮತ್ತು ಲಭ್ಯತೆ
ಎಚ್‌ಎಂಡಿ ಫ್ಯೂಷನ್ ಮೊಬೈಲ್ ಅನ್ನು ಭಾರತದಲ್ಲಿ 17,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಇದು ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ ಆಗಿದೆ. ನವೆಂಬರ್ 29 ರಂದು ಮಧ್ಯಾಹ್ನ 12 ಗಂಟೆಗೆ ಈ ಫೋನಿನ ಮೊದಲ ಮಾರಾಟ ಪ್ರಾರಂಭವಾಗಲಿದೆ. ಕಂಪನಿಯು ಬಿಡುಗಡೆಯ ಭಾಗವಾಗಿ 2,000 ರೂ. ಬ್ಯಾಂಕ್ ಡಿಸ್ಕೌಂಟ್ ನೀಡುತ್ತಿದೆ. ನೀವು, ಕೇವಲ 15,999 ರೂ.ಗೆ ಖರೀದಿಸಬಹುದು.
ಕಂಪನಿಯು 5,999 ರೂ.ಗಳ ಎಚ್ಎಂಡಿ ಕ್ಯಾಶುಯಲ್, ಫ್ಲ್ಯಾಶಿ ಮತ್ತು ಗೇಮಿಂಗ್ ಔಟ್‌ಫಿಟ್ ಅನ್ನು ಉಚಿತವಾಗಿ ನೀಡಲಿದೆ. ನೀವು, ಅಮೆಜಾನ್ ಮತ್ತು ಎಚ್‌ಎಂಡಿ ಅಧಿಕೃತ ವೆಬ್‌ಸೈಟ್‌ನಲ್ಲಿ ಎಚ್‌ಎಂಡಿ ಫ್ಯೂಷನ್ ಫೋನನ್ನು ಕೊಳ್ಳಬಹುದು.
ಎಚ್‌ಎಂಡಿ ಫ್ಯೂಷನ್ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಎಚ್‌ಎಂಡಿ ಫ್ಯೂಷನ್ ಮೊಬೈಲ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 720 x 1612 ಪಿಕ್ಸೆಲ್‌ಗಳ ರೆಸಲ್ಯೂಶನ್, 90Hz ರಿಫ್ರೆಶ್ ದರ ಮತ್ತು 600 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ನೂತನ ಎಚ್‌ಎಂಡಿ ಫ್ಯೂಷನ್ ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಪ್ರೊಸೆಸರ್ ಅನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್ ಆಯ್ಕೆ
ಎಚ್‌ಎಂಡಿ ಫ್ಯೂಷನ್ ಸ್ಮಾರ್ಟ್‌ಫೋನ್ 8GB RAM ಹೊಂದಿದೆ. ಇದು ಮೆಮೊರಿ ವಿಸ್ತರಣೆ ತಂತ್ರಜ್ಞಾನವನ್ನು ಹೊಂದಿದೆ. ಭೌತಿಕ RAMಗೆ ವರ್ಚುವಲ್ RAM ಸೇರಿಸಬಹುದು. ಈ ಫೋನ್ 256GB ಇಂಟರ್ನಲ್ ಸ್ಟೋರೇಜ್ ಆಯ್ಕೆ ಹೊಂದಿದೆ.
ಕ್ಯಾಮೆರಾ ಸೆಟಪ್
ಎಚ್‌ಎಂಡಿ ಫ್ಯೂಷನ್ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಸ್ಮಾರ್ಟ್ ಇಐಎಸ್ ತಂತ್ರಜ್ಞಾನವನ್ನು ಹೊಂದಿದೆ. ಫೋನಿನಲ್ಲಿ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ಎಚ್‌ಎಂಡಿ ಫ್ಯೂಷನ್ ಫೋನನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.


Click it and Unblock the Notifications








