Subscribe to Gizbot

ಹೊಸ ಸ್ಮಾರ್ಟ್‌ಫೋನ್‌ ಕೊಳ್ಳುವ ಪ್ಲಾನ್ ಇದ್ಯಾ: ಹಾಗಿದ್ರೆ ಏಪ್ರಿಲ್ 4ರವರೆಗೆ ಕಾಯಿರಿ..!

Written By:

ಕಳೆದ ತಿಂಗಳಿನಲ್ಲಿ ನಡೆದ ಮೊಬೈಲ್ ವರ್ಲ್ಡ್ ಸಮಾವೇಶದಲ್ಲಿ ಐದು ಹೊಸ ಸ್ಮಾರ್ಟ್‌ಫೋನ್‌ಗಳನ್ನು ನೋಕಿಯಾ ಪರಿಚಯ ಮಾಡಿತ್ತು. ಇದರಲ್ಲಿ ನೋಕಿಯಾ 1, ನೋಕಿಯಾ 6 (2018), ನೋಕಿಯಾ 7 ಪ್ಲಸ್, ನೋಕಿಯಾ 8 ಸಿರೊಕ್ಕಾ ಮತ್ತು ನೋಕಿಯಾ 8110 4G ಸೇರಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ಗಳು ಇದೇ ಏಪ್ರಿಲ್‌ನಿಂದ ಭಾರತೀಯ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ.

ಸ್ಮಾರ್ಟ್‌ಫೋನ್‌ ಕೊಳ್ಳುವ ಪ್ಲಾನ್ ಇದ್ಯಾ: ಹಾಗಿದ್ರೆ ಏಪ್ರಿಲ್ 4ರವರೆಗೆ ಕಾಯಿರಿ..

ಈಗಾಗಲೇ HMD ಗ್ಲೊಬಲ್ ಸಂಸ್ಥೆ ಆಂಡ್ರಾಯ್ಡ್ ಗೋ ಆವೃತ್ತಿಯ ನೋಕಿಯಾ 1 ಸ್ಮಾರ್ಟ್‌ಫೋನ್‌ ಅನ್ನು ಈಗಾಗಲೇ ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದ್ದು, ಇದೇ ಮಾದರಿಯಲ್ಲಿ ಎಪ್ರಿಲ್ 4 ರಿಂದ ಉಳಿದ ಎಲ್ಲಾ ಸ್ಮಾರ್ಟ್‌ಫೋನ್‌ಗಳನ್ನು ಮಾರಾಟ ಮಾಡಲಿದೆ ಎನ್ನಲಾಗಿದೆ. ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಭಾರತೀಯ ಮಾರುಕಟ್ಟೆಗೆ ಪರಿಚಯಗೊಸಲು ನೋಕಿಯಾ ಮಾಧ್ಯಮಗಳಿಗೆ ಆಹ್ವಾನವನ್ನು ನೀಡಿದೆ.

ನೋಕಿಯಾ 7 ಪ್ಲಸ್ ಮತ್ತು ನೋಕಿಯಾ 8 ಸಿರೊಕ್ಕಾ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್ ಕ್ಯಾಮೆರಾದೊಂದಿಗೆ ಕಾಣಿಸಿಕೊಳ್ಳಲಿದೆ. ಝೈಸ್ ಆಪ್ಟಿಕ್ಸ್ ಲೈನ್ಸ್ ಅನ್ನು ಒಳಗೊಂಡಿದೆ. ಇದರಲ್ಲಿ 12MP + 13MP ಕ್ಯಾಮೆರಾ ಸೆಟಪ್ ಅನ್ನು ಕಾಣಬಹುದಾಗಿದೆ. ಇದರಲ್ಲಿ ನೋಕಿಯಾ 7 ಪ್ಲಸ್ ಸ್ಮಾರ್ಟ್‌ಫೋನಿನಲ್ಲಿ 16MP ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದ್ದು, ನೋಕಿಯಾ 8 ಸಿರೊಕ್ಕಾದಲ್ಲಿ 5MP ಸೆಲ್ಫಿ ಕ್ಯಾಮೆರಾವನ್ನು ಕಾಣಬಹುದಾಗಿದೆ.

ಸ್ಮಾರ್ಟ್‌ಫೋನ್‌ ಕೊಳ್ಳುವ ಪ್ಲಾನ್ ಇದ್ಯಾ: ಹಾಗಿದ್ರೆ ಏಪ್ರಿಲ್ 4ರವರೆಗೆ ಕಾಯಿರಿ..

ನೋಕಿಯಾ 7 ಪ್ಲಸ್ ಸ್ಮಾರ್ಟ್‌ಫೋನಿನಲ್ಲಿ 6 ಇಂಚಿನ ಡಿಸ್‌ಪ್ಲೇಯನ್ನು ಕಾಣಬಹುದಾಗಿದ್ದು, 4GB RAM ಮತ್ತು 64GB ಇಂಟರ್ನಲ್ ಮೆಮೊರಿಯನ್ನು ಹೊಂದಿದೆ. ಅಲ್ಲದೇ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 660 ಪ್ರೋಸೆಸರ್ ಅನ್ನು ನೀಡಲಾಗಿದೆ. ಇದೇ ಮಾದರಿಯಲ್ಲಿ ನೋಕಿಯಾ 8 ಸಿರೊಕ್ಕಾ ಸ್ಮಾರ್ಟ್‌ಫೋನ್‌ನಲ್ಲಿ 5.5 ಇಂಚಿನ ಡಿಸ್‌ಪ್ಲೇ ಇದ್ದು, QHD ಗುಣಮಟ್ಟದಾಗಿದೆ. ಅಲ್ಲದೇ 6GB RAM ಮತ್ತು 128GB ಇಂಟರ್ನಲ್ ಮೆಮೊರಿಯೊಂದಿಗೆ ಕಾಣಿಸಿಕೊಳ್ಳಲಿದ್ದು, ಸ್ನಾಪ್‌ಡ್ರಾಗನ್ 835ನಲ್ಲಿ ಕಾರ್ಯನಿರ್ವಹಿಸಲಿದೆ.

ಮೊಬೈಲ್‌ನಲ್ಲಿಯೇ 'PF' ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ?

ನೋಕಿಯಾ 6 (2018) ಸ್ಮಾರ್ಟ್‌ಫೋನ್ ಆಪ್‌ಡೇಟ್ ಆಗಿದ್ದು, 3GB/4GB RAM ಆವೃತ್ತಿಯಲ್ಲಿ ದೊರೆಯಲಿದ್ದು, 32GB ಮತ್ತು 63GB ಇಂಟರ್ನಲ್ ಮೆಮೊರಿಯನ್ನು ಹೊಂದಿರಲಿದೆ. ಅಲ್ಲದೇ ಇದು 16MP ಹಿಂಬದಿ ಕ್ಯಾಮೆರಾ ಮತ್ತು 8MP ಮುಂಭಾಗದ ಕ್ಯಾಮೆರಾವನ್ನು ಹೊಂದಿವೆ.

English summary
HMD Global announces April 4 event in India, might launch Nokia 6 (2018), Nokia 7 Plus, Nokia 8 Sirocco. to know more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot