HONOR: 108MP ಕ್ಯಾಮೆರಾ.. 5230mAh ಬ್ಯಾಟರಿ.. ಬಂತು ಸೊಗಸಾದ 5G ಫೋನ್.. ಬೆಲೆ ಇಷ್ಟು!
ಹಾನರ್ ಸದ್ದಿಲ್ಲದೆ ಹೊಸ 5G ಫೋನನ್ನು ಬಿಡುಗಡೆ ಮಾಡಿದೆ. ಇದನ್ನು 30,000 ರೂ.ಗಿಂತ ಕಡಿಮೆ ಬೆಲೆಗೆ ಪರಿಚಯಿಸಲಾಗಿದೆ. ಹೌದು, ಭಾರತದಲ್ಲಿ ಹಾನರ್ X9c (HONOR X9c) ಫೋನನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಕುರಿತ ಶಾಪಿಂಗ್ ಸೈಟ್ ಅಮೆಜಾನ್ ಮೂಲಕ ಮಾಹಿತಿ ಪ್ರಕಟಿಸಿತ್ತು. ಆದರೆ, ರಿಲೀಸ್ ದಿನಾಂಕವನ್ನು ಈವರೆಗೆ ಘೋಷಿಸಿಲ್ಸಲ. ಈ ಮಧ್ಯೆಯೇ ಹೊಸ ಹಾನರ್ 400 ಲೈಟ್ 5G (HONOR 400 Lite 5G) ಮೊಬೈಲ್ ಅನ್ನು ಲಾಂಚ್ ಮಾಡಿದೆ. ಈ ಮೂಲಕ ತನ್ನ ಅಭಿಮಾನಿಗಳಿಗೆ ಅಚ್ಚರಿ ನೀಡಿದೆ. ಈ ಫೋನಿನ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಹಾನರ್ 400 ಲೈಟ್ 5G ಸ್ಮಾರ್ಟ್‌ಫೋನ್ ಒಂದೇ ರೂಪಾಂತರದಲ್ಲಿ ಬರುತ್ತದೆ. ಕಂಪನಿಯು 108 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು ಎಐ (AI) ಕ್ಯಾಮೆರಾ ಬಟನ್‌ನೊಂದಿಗೆ ಈ ಫೋನನ್ನು ಬಿಡುಗಡೆ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.7 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದು 5,230mAh ಬ್ಯಾಟರಿ ಮತ್ತು 35W ವೇಗದ ಚಾರ್ಜಿಂಗ್ ಒಳಗೊಂಡಿದೆ. ಹಾಗೆಯೇ 8GB RAM + 256GB ಸ್ಟೋರೇಜ್, 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಹೊಂದಿದೆ.

ಹಾನರ್ 400 ಲೈಟ್ 5G ಮೊಬೈಲ್ 1.8 ಮೀಟರ್ ಎತ್ತರದಿಂದ ಬಿದ್ದರೂ ಸುರಕ್ಷಿತವಾಗಿ ಉಳಿಯುತ್ತದೆ ಎಂದು ಕಂಪನಿ ಹೇಳಿದೆ. ಈ ಫೋನ್ 171 ಗ್ರಾಂ ತೂಕ ಮತ್ತು 7.29 ಮಿಮೀ ದಪ್ಪ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ 5G ಫೋನ್, ಬ್ಲೂಟೂತ್ 5.3 ಮತ್ತು ಎನ್‌ಎಫ್‌ಸಿ ಅನ್ನು ಹೊಂದಿದೆ. ಈ 5G ಫೋನಿನಲ್ಲಿ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ತಂತ್ರಜ್ಞಾನ ಲಭ್ಯವಿದೆ.
ಹಾನರ್ 400 ಲೈಟ್ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಹಾನರ್ 400 ಲೈಟ್ 5G ಫೋನ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 2412 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಇದು 120Hz ರಿಫ್ರೆಶ್ ದರ ಮತ್ತು 3500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಹಾನರ್ 400 ಲೈಟ್ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಇದು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾದ ಚಿಪ್‌ಸೆಟ್ ಆಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ಮ್ಯಾಜಿಕ್ ಓಎಸ್ 9 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಇದು IMG BXM-8-256 GPU ಹೊಂದಿದೆ.

ಕ್ಯಾಮೆರಾ ಸೆಟಪ್
ಹಾನರ್ 400 ಲೈಟ್ 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಐಫೋನ್ 16 ನಂತಹ ಎಐ (AI) ಕ್ಯಾಮೆರಾ ಬಟನ್ ಒಳಗೊಂಡಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ ದ್ವಿತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ವೈಡ್ ಆಂಗಲ್ ಮತ್ತು ಡೆಪ್ತ್ ಸೆನ್ಸಾರ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಹಾನರ್ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಒಳಗೊಂಡಿದೆ. ಇದು ಸೆಲ್ಫಿ ಲೈಟ್‌ನೊಂದಿಗೆ ಬರುತ್ತದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಹಾನರ್ 400 ಲೈಟ್ 5G ಫೋನನ್ನು 5,230mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿದೆ. ಈ ಬ್ಯಾಟರಿಯನ್ನು ತ್ವರಿತವಾಗಿ ಚಾರ್ಜ್ ಮಾಡಲು, ಈ ಸ್ಮಾರ್ಟ್‌ಫೋನ್ 35W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಹಾನರ್ 400 ಲೈಟ್ 5G ಬೆಲೆ ಮತ್ತು ಲಭ್ಯತೆ
ಹಾನರ್ 400 ಲೈಟ್ 5G ಫೋನ್ ಕೇವಲ 8GB RAM + 256GB ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆಯಾಗಿದೆ. ಇದರ ಬೆಲೆ 29,100 ರೂ. ಆಗಿದೆ. ಇದು ಮಾರ್ಸ್ ಗ್ರೀನ್, ವೆಲ್ವೆಟ್ ಬ್ಲಾಕ್ ಮತ್ತು ವೆಲ್ವೆಟ್ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಮೊಬೈಲ್ ಪ್ರಸ್ತುತ ಜಾಗತಿ ಮಾರುಕಟ್ಟೆಯಲ್ಲಿ (ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ಇಟಲಿ) ಮಾರಾಟವಾಗಲಿದೆ. ಕಂಪನಿಯು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಪರಿಚಯಿಸಲಿದೆ.


Click it and Unblock the Notifications








