Home
ಮೊಬೈಲ್

ಭಾರತದಲ್ಲಿ ಮತ್ತೊಂದು ಸ್ಮಾರ್ಟ್ ಫೋನ್ ಲಾಂಚ್ ಗೆ ಹಾನರ್ ಸಿದ್ಧತೆ..!

By Lekhaka

ಹುವಾವೆ ಒಡೆತನದ ಹಾನರ್ ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಖ್ಯಾತಿಯನ್ನು ಗಳಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಮೇ 22 ರಂದು ಭಾರತೀಯ ಮಾರುಕಟ್ಟೆಯಲ್ಲಿ ಹೊಸದೊಂದು ಸ್ಮಾರ್ಟ್ ಫೋನ್ ಅನ್ನು ಲಾಂಚ್ ಮಾಡಲು ಮುಂದಾಗಿದೆ. ಈ ಸ್ಮಾರ್ಟ್ ಪೋನ್ ಹಾನರ್ 7C ಎನ್ನಲಾಗಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಹಲವು ಸ್ಮಾರ್ಟ್ ಫೋನ್ ಗಳನ್ನು ಲಾಂಚ್ ಮಾಡಿರುವ ಹಾನರ್, ನೂತನವಾಗಿ ಬಿಡುಗಡೆ ಮಾಡುವ ಸ್ಮಾರ್ಟ್ ಫೋನ್ ಮೇಲೆಯೂ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದೆ.

ಭಾರತದಲ್ಲಿ ಮತ್ತೊಂದು ಸ್ಮಾರ್ಟ್ ಫೋನ್ ಲಾಂಚ್ ಗೆ ಹಾನರ್ ಸಿದ್ಧತೆ..!

ಹಾನರ್ 7C ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಹುಟ್ಟಿಸಲಿದೆ ಎನ್ನಲಾಗಿದೆ. ಈ ಸ್ಮಾರ್ಟ್ ಫೋನ್ ಆಂಡ್ರಾಯ್ಡ್ ಒರಿಯೋದಲ್ಲಿ ಕಾರ್ಯನಿರ್ವಹಿಸಲಿದ್ದು, 5.99 ಇಂಚಿನ HD+ ಗುಣಮಟ್ಟದ ಡಿಸ್ ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಅಲ್ಲದೇ ಇದಕ್ಕೆ 2.5D ಕರ್ವಡ್ ವಿನ್ಯಾಸವನ್ನು ನೀಡಲಾಗಿದೆ. ಅಲ್ಲದೇ 18:9 ಅನುಪಾತದ ಡಿಸ್ ಪ್ಲೇ ಇದಾಗಿದೆ.

ಹಾನರ್ 7C ಸ್ಮಾರ್ಟ್ ಫೋನಿನಲ್ಲಿ ಸ್ನಾಪ್ ಡ್ರಾಗನ್ 450 ಪ್ರೊಸೆಸರ್ ಅನ್ನು ಕಾಣಬಹುದಾಗಿದ್ದು, ಇದರೊಂದಿಗೆ ಆಡ್ರಿನೋ 506 GPU ವನ್ನು ಸಹ ನೀಡಲಾಗಿದೆ. ಇದಲ್ಲದೇ ಹಾನರ್ 7C ಸ್ಮಾರ್ಟ್ ಫೋನ್ ಎರಡು ಆವೃತ್ತಿಯಲ್ಲಿ ಕಾಣಿಸಿಕೊಳ್ಳಲಿದ್ದು, 3 GB RAM ಮತ್ತು 32 GB ಇಂಟರ್ ನಲ್ ಮೆಮೊರಿ ಹಾಗೂ 4 GB RAM ಮತ್ತು 64 GB ಇಂಟರ್ನಲ್ ಮೆಮೊರಿಯೊಂದಿಗೆ ದೊರೆಯಲಿದೆ ಎನ್ನಲಾಗಿದೆ.

ಹಾನರ್ 7C ಸ್ಮಾರ್ಟ್ ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾವನ್ನು ಕಾಣಬಹುದಾಗಿದ್ದು, 13 MP + 2MP ಕ್ಯಾಮೆರಾ ಸೆಟಪ್ ನೀಡಲಾಗಿದ್ದು, ಉತ್ತಮವಾದ ಚಿತ್ರಗಳನ್ನು ಸೆರೆಹಿಡಿಯಲು ಇದು ಸಹಾಯಕಾರಿಯಾಗಲಿದೆ. ಇದರಿಂದಾಗಿ ಬೆಸ್ಟ್ ಚಿತ್ರಗಳನ್ನು ಕ್ಲಿಕ್ ಮಾಡಬಹುದಾಗಿದೆ. ಅಲ್ಲದೇ ಮುಂಭಾಗದಲ್ಲಿ 8 MP ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಹಾನರ್ 7C ಸ್ಮಾರ್ಟ್ ಫೋನಿನಲ್ಲಿ 3000 mAh ಬ್ಯಾಟರಿಯನ್ನು ಅಳವಡಿಸಲಾಗಿದ್ದು, ಇದಲ್ಲದೇ ಹಾನರ್ 7C ಸ್ಮಾರ್ಟ್ ಫೋನ್ 4G VoLTE ಸಫೋರ್ಟ್ ಮಾಡಲಿದೆ. ಇದರೊಂದಿಗೆ ಬ್ಲೂಟುತ್, GPS ಸೇರಿದಂತೆ ಸಾಮಾನ್ಯ ಆಯ್ಕೆಗಳನ್ನು ಹಾನರ್ 7C ಸ್ಮಾರ್ಟ್ ಫೋನಿನಲ್ಲಿ ಕಾಣಬಹುದಾಗಿದ್ದು, ರೂ.12000ದ ಆಸುಪಾನಿನಲ್ಲಿ ಈ ಸ್ಮಾರ್ಟ್ ಫೋನ್ ಮಾರಾಟವಾಗುವ ಲಕ್ಷಣಗಳು ಕಾಣಿಸುತ್ತಿದೆ.

Best Mobiles in India

English summary
Honor 7C expected to launch in India on May 22. to know more visit kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+