ಅಬ್ಬರಿಸಲು ಬಂತು ಹೊಸ Honor ಫೋನ್; 108MP ಕ್ಯಾಮೆರಾ.. 6600mAh ಬ್ಯಾಟರಿ.. ಬೆಲೆ ಇಷ್ಟೆನಾ?
ಹಾನರ್ ಸದ್ದಿಲ್ಲದೆ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದು ಹಾನರ್ ಮ್ಯಾಜಿಕ್ 7 ಲೈಟ್ (Honor Magic 7 Lite) ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದೆ. ಇದರ ಜೊತೆಗೆ ಹಾನರ್ ಮಾಜಿಕ್ 7 ಪ್ರೊ, ಹಾನರ್ ಮ್ಯಾಜಿಕ್ 7 RSR ಪೋರ್ಶೆ ಡಿಸೈನ್ ಮೊಬೈಲ್ ಸಹ ರಿಲೀಸ್ ಆಗಿದೆ. ವಿಶೇಷವೆಂದರೆ, ಈ ಮೊಬೈಲ್ ಸ್ನಾಪ್‌ಡ್ರಾಗನ್ 6 ಜೆನ್ 1 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಫೋನನ್ನು 42,000 ರೂ. ಬಜೆಟ್ ಬೆಲೆಯಲ್ಲಿ ಪರಿಚಯಿಸಲಾಗಿದೆ. ಬನ್ನಿ, ಈ ಹೊಸ ಫೋನಿನ ವಿಶೇಷತೆಗಳನ್ನು ತಿಳಿಯೋಣ.
ಹೌದು, ಕಂಪನಿಯು ಹಾನರ್ ಮ್ಯಾಜಿಕ್ 7 ಲೈಟ್ ಫೋನನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದು ಟೈಟಾನಿಯಂ ಪರ್ಪಲ್ ಮತ್ತು ಟೈಟಾನಿಯಂ ಕಪ್ಪು ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 8GB RAM + 512GB ಸ್ಟೋರೇಜ್, 6600mAh ಬ್ಯಾಟರಿ ಮತ್ತು 66W ವೇಗದ ಚಾರ್ಜಿಂಗ್ ಒಳಗೊಂಡಿದೆ. ಈ ಹೊಸ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಹಾನರ್ ಮ್ಯಾಜಿಕ್ 7 ಲೈಟ್ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಹಾನರ್ ಮ್ಯಾಜಿಕ್ 7 ಲೈಟ್ ಸ್ಮಾರ್ಟ್‌ಫೋನ್ 6.78 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1,224×2,700 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಹಾನರ್ ಮ್ಯಾಜಿಕ್ 7 ಲೈಟ್ ಮೊಬೈಲ್ ಸ್ನಾಪ್‌ಡ್ರಾಗನ್ 6 ಜೆನ್ 1 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ ಮ್ಯಾಜಿಕ್ ಓಎಸ್ 8.0 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 8GB RAM + 512GB ಸ್ಟೋರೇಜ್ ಹೊಂದಿದೆ.
ಕ್ಯಾಮೆರಾ ಸೆಟಪ್
ಹಾನರ್ ಮ್ಯಾಜಿಕ್ 7 ಲೈಟ್ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 5 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಹಾನರ್ ಮ್ಯಾಜಿಕ್ 7 ಲೈಟ್ ಫೋನ್ 6600mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 66W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಹಾನರ್ ಮ್ಯಾಜಿಕ್ 7 ಲೈಟ್ ಮೊಬೈಲ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, ಡ್ಯುಯಲ್ 4G LTE, ವೈ-ಫೈ 7, ಬ್ಲೂಟೂತ್ 5.1, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಹಾನರ್ ಮ್ಯಾಜಿಕ್ 7 ಲೈಟ್ ಬೆಲೆ ಮತ್ತು ಲಭ್ಯತೆ
ಹಾನರ್ ಮ್ಯಾಜಿಕ್ 7 ಲೈಟ್ ಮೊಬೈಲ್ 8GB RAM + 512GB ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆಯಾಗಿದೆ. ಇದರ ಬೆಲೆ 42,300 ರೂ. ಆಗಿದೆ. ಇದು ಟೈಟಾನಿಯಂ ಪರ್ಪಲ್ ಮತ್ತು ಟೈಟಾನಿಯಂ ಕಪ್ಪು ಬಣ್ಣಗಳಲ್ಲಿ ಬರುತ್ತದೆ. ಪ್ರಸ್ತುತ, ಈ ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.


Click it and Unblock the Notifications








