Home
ಮೊಬೈಲ್

ಹೊಸ Honor ಫೋನ್‌ಗಳು ಬಿಡುಗಡೆ; 200MP ಕ್ಯಾಮೆರಾ.. 100W ಚಾರ್ಜಿಂಗ್.. ಅಬ್ಬರ ಶುರು!

ಮೊಬೈಲ್‌ ಪ್ರಿಯರಿಗೆ ಇದಕ್ಕಿಂತ ಹೆಚ್ಚೇನು ಬೇಕು? 200MP ಕ್ಯಾಮೆರಾ.. 100W ಚಾರ್ಜಿಂಗ್.. ಸದ್ದಿಲ್ಲದೆ ಎರಡು ಹೊಸ ಹಾನರ್ ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ. ಹೌದು, ಹಾನರ್ (Honor) ಕಂಪನಿಯು ತನ್ನ ಹಾನರ್ ಮ್ಯಾಜಿಕ್ 7 (Honor Magic7) ಮತ್ತು ಹಾನರ್ ಮ್ಯಾಜಿಕ್ 7 ಪ್ರೊ (Honor Magic7 Pro) ಫೋನ್‌ಗಳನ್ನು ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಈ ಮೊಬೈಲ್‌ಗಳು ಆಕ್ಟಾಕೋರ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ ಹೊಂದಿವೆ. ಬನ್ನಿ, ಈ ಫೋನ್‌ಗಳ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.

ಕಂಪನಿಯು ಹಾನರ್ ಮ್ಯಾಜಿಕ್ 7 ಮತ್ತು ಹಾನರ್ ಮ್ಯಾಜಿಕ್ 7 ಪ್ರೊ ಮೊಬೈಲ್‌ಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಹಾನರ್ ಮ್ಯಾಜಿಕ್ 7 ಪ್ರೊ ಆರಂಭಿಕ ಬೆಲೆ 73,150 ರೂ. ಆಗಿದೆ. ಇನ್ನೂ, ಹಾನರ್ ಮ್ಯಾಜಿಕ್ 7 ಫೋನಿನ ಆರಂಭಿಕ ಬೆಲೆ 53,090 ರೂ. ಇದೆ. ಹೊಸ ಹಾನರ್ ಫೋನ್‌ಗಳು ಮೂನ್ ಶಾಡೋ ಗ್ರೇ, ಸ್ನೋ ವೈಟ್, ಸ್ಕೈ ಬ್ಲೂ ಮತ್ತು ವೆಲ್ವೆಟ್ ಬ್ಲಾಕ್ ಬಣ್ಣಗಳಲ್ಲಿ ಲಭ್ಯವಿದೆ. ಶೀಘ್ರದಲ್ಲೇ ಈ ಫೋನ್‌ಗಳು ಎಲ್ಲಾ ದೇಶಗಳಲ್ಲಿ ಬಿಡುಗಡೆಯಾಗಲಿವೆ.

ಹೊಸ Honor ಫೋನ್‌ಗಳು ಲಾಂಚ್; 200MP ಕ್ಯಾಮೆರಾ.. 100W ಚಾರ್ಜಿಂಗ್.. ಬೆಲೆ ನೋಡಿ

ಹಾನರ್ ಮ್ಯಾಜಿಕ್ 7 ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಹಾನರ್ ಮ್ಯಾಜಿಕ್ 7 ಫೋನ್ 6.78 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಓಎಲ್‌ಇಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 5000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, HDR 10 ಪ್ಲಸ್, 4320Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ಹಾನರ್ ಮ್ಯಾಜಿಕ್ 7 ಫೋನನ್ನು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಫೋನ್ Adreno 830 ಜಿಪಿಯು ಮತ್ತು ಆಂಡ್ರಾಯ್ಡ್ 9.0 ಅನ್ನು ಆಧರಿಸಿ ಆಂಡ್ರಾಯ್ಡ್ 15 ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 16GB RAM ಮತ್ತು 1TB ವರೆಗೆ ಸ್ಟೋರೇಜ್ ಹೊಂದಿದೆ.

ಕ್ಯಾಮೆರಾ ಸೆಟಪ್

ಹಾನರ್ ಮ್ಯಾಜಿಕ್ 7 ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ, 50 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಇದೆ. ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ, 3x ಆಪ್ಟಿಕಲ್ ಜೂಮ್ ಮತ್ತು 4K ವೀಡಿಯೊ ರೆಕಾರ್ಡಿಂಗ್ ಬೆಂಬಲವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಈ ಸ್ಮಾರ್ಟ್‌ಫೋನ್ 5650mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು, 100W ವೇಗದ ಚಾರ್ಜಿಂಗ್, 80W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

ಇತರೆ ವೈಶಿಷ್ಟ್ಯಗಳು

ಹೊಸ ಹಾನರ್ ಫೋನ್ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸಾರ್, IP69+IP68 ಧೂಳು ಮತ್ತು ನೀರಿನ ಪ್ರತಿರೋಧ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ 5G SA/NSA, Dual 4G VoltE, ವೈ-ಫೈ Fi 7 802.11 PE, ಬ್ಲೂಟೂತ್ 5.4, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, NFC ಸೇರಿದಂತೆ ವಿವಿಧ ಸೌಲಭ್ಯಗಳನ್ನು ಹೊಂದಿದೆ.

ಹೊಸ Honor ಫೋನ್‌ಗಳು ಲಾಂಚ್; 200MP ಕ್ಯಾಮೆರಾ.. 100W ಚಾರ್ಜಿಂಗ್.. ಬೆಲೆ ನೋಡಿ

ಹಾನರ್ ಮ್ಯಾಜಿಕ್ 7 ಪ್ರೊ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಹಾನರ್ ಮ್ಯಾಜಿಕ್ 7 ಪ್ರೊ ಸ್ಮಾರ್ಟ್‌ಫೋನ್ 6.8 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಓಎಲ್‌ಇಡಿ ಡಿಸ್ಪ್ಲೇಯನ್ನು ಹೊಂದಿದೆ. ಈ ಡಿಸ್ಪ್ಲೇಯು 5000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 1280×2800 ಪಿಕ್ಸೆಲ್‌ಗಳ ರೆಸಲ್ಯೂಶನ್, HDR 10 ಪ್ಲಸ್, 4320Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಹಾನರ್ ಮ್ಯಾಜಿಕ್ 7 ಪ್ರೊ ಮೊಬೈಲ್ ಇತ್ತೀಚಿನ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ. ಇದು ಮ್ಯಾಜಿಕ್ UI 9.0 ಆಧಾರಿತ ಆಂಡ್ರಾಯ್ಡ್ 15 ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು Adreno 830 ಜಿಪಿಯುನೊಂದಿಗೆ ಬರುತ್ತದೆ. ಈ ಫೋನ್ 16GB RAM ಮತ್ತು 1TB ವರೆಗೆ ಸ್ಟೋರೇಜ್ ಹೊಂದಿದೆ.

ಕ್ಯಾಮೆರಾ ಸೆಟಪ್

ಹಾನರ್ ಮ್ಯಾಜಿಕ್ 7 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ, 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಮತ್ತು 200 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಫೋನಿನಲ್ಲಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ, 3D ಡೆಪ್ತ್ ಕ್ಯಾಮೆರಾಗಳಿವೆ. ಈ ಫೋನ್ 3x ಆಪ್ಟಿಕಲ್ ಜೂಮ್, 4K ವಿಡಿಯೋ ರೆಕಾರ್ಡಿಂಗ್ ಬೆಂಬಲ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಹೊಸ ಹಾನರ್ ಫೋನ್ 5850mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ವೇಗದ ಚಾರ್ಜಿಂಗ್, 80W ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ.

ಇತರೆ ವೈಶಿಷ್ಟ್ಯಗಳು

ಈ ಮೊಬೈಲ್‌ನಲ್ಲಿ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸಾರ್, IP69+IP68 ಧೂಳು ಮತ್ತು ನೀರಿನ ಪ್ರತಿರೋಧ ಸೇರಿದಂತೆ ವಿವಿಧ ವೈಶಿಷ್ಟ್ಯಗಳಿವೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G SA/NSA, Dual 4G VoltE, ವೈ-ಫೈ 7, ಬ್ಲೂಟೂತ್ 5.4, ಜಿಪಿಎಸ್, ಎಜಿಪಿಎಸ್, ಯುಎಸ್‌ಬಿ ಟೈಪ್ ಸಿ, NFC ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಭಾರತದಲ್ಲಿ ಯಾವಾ ಬಿಡುಗಡೆ?

ಪ್ರಸ್ತುತ, ಕಂಪನಿಯು ಹಾನರ್ ಮ್ಯಾಜಿಕ್ 7 ಪ್ರೊ ಮತ್ತು ಹಾನರ್ ಮ್ಯಾಜಿಕ್ 7 ಫೋನ್‌ಗಳನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಮುಂಬರುವ ದಿನಗಳಲ್ಲಿ ಈ ಫೋನ್‌ಗಳು ಭಾರತೀಯ ಮಾರುಕಟ್ಟೆಗೂ ಲಗ್ಗೆ ಇಡಲಿವೆ. ಈ ಬಗ್ಗೆ ಕಂಪನಿಯು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಭಾರತದಲ್ಲಿಯೂ ಇದೇ ರೀತಿಯ ಬೆಲೆಯೊಂದಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ.

Best Mobiles in India

English summary
HONOR Magic 7 and HONOR Magic 7 Pro with Snapdragon 8 Elite, 200MPcamera Launched: Price, Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+