ಕೇವಲ 9499 ರೂ.! 48MP ಕ್ಯಾಮೆರಾ.. 5000mAh ಬ್ಯಾಟರಿ.. ಅತೀ ಕಡಿಮೆ ಬೆಲೆಗೆ Infinix 5G ಫೋನ್
ಇನ್ಫಿನಿಕ್ಸ್ (Infinix) ಕಳೆದ ವರ್ಷ ಭಾರತದಲ್ಲಿ ಇನ್ಫಿನಿಕ್ಸ್ ಹಾಟ್ 50 5G (Infinix Hot 50 5G) ಫೋನನ್ನು ಬಿಡುಗಡೆ ಮಾಡಿತ್ತು. ಪ್ರಸ್ತುತ, ಈ ಸ್ಮಾರ್ಟ್‌ಫೋನ್ ಭಾರೀ ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಇನ್ಫಿನಿಕ್ಸ್ ಹಾಟ್ 50 ಮೊಬೈಲ್ ಶೇ.26 ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಆಯ್ದ ಬ್ಯಾಂಕ್ ಆಫರ್, ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಹ ನೀಡಲಾಗುತ್ತಿದೆ. ನೀವು 9,500 ರೂ.ಗಿಂತ ಕಡಿಮೆ ಬೆಲೆಗೆ ಈ ಫೋನನ್ನು ಖರೀದಿಸಬಹುದು. ಬನ್ನಿ, ಈ ಫೋನಿನ ಮೂಲ ಬೆಲೆ, ಆಫರ್ ಬೆಲೆ ಮತ್ತು ಇದರ ವಿಶೇಷತೆಗಳನ್ನು ತಿಳಿಯೋಣ.
ಇನ್ಫಿನಿಕ್ಸ್ ತನ್ನ ಅಭಿಮಾನಿಗಳ ಬಜೆಟ್ ಗಮನದಲ್ಲಿಟ್ಟುಕೊಂಡು ಇನ್ಫಿನಿಕ್ಸ್ ಹಾಟ್ 50 5G ಫೋನನ್ನು ಪರಿಚಯಿಸಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಇದು 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನಿನಲ್ಲಿ 48 ಮೆಗಾಪಿಕ್ಸೆಲ್ ಡುಯಲ್ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8GB + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಮಾರಾಟವಾಗುತ್ತಿದೆ.

ಇನ್ಫಿನಿಕ್ಸ್ ಹಾಟ್ 50 5G ಹೊಸ ಬೆಲೆ ಮತ್ತು ಆಫರ್‌ಗಳು
ಇನ್ಫಿನಿಕ್ಸ್ ಹಾಟ್ 50 5G ಫೋನನ್ನು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ. 4GB RAM + 128GB ಸ್ಟೋರೇಜ್ ರೂಪಾಂತರವನ್ನು 9,999 ರೂ.ಗೆ ಬಿಡುಗಡೆ ಮಾಡಲಾಗಿದೆ. 8GB RAM + 128 GB ಸ್ಟೋರೇಜ್ ರೂಪಾಂತರವನ್ನು 10,999 ರೂ.ಗೆ ಪರಿಚಯಿಸಲಾಗಿದೆ. ಈ ಫೋನನ್ನು ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 9,499 ರೂ.ಗೆ ಖರೀದಿಸಬಹುದು. ನೀವು ಸುಮಾರು 500 ರೂ. ರಿಯಾಯಿತಿ ಪಡೆಯಬಹುದು. ಫ್ಲಿಪ್‌ಕಾರ್ಟ್ ಆಕ್ಸೆಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಿಗುತ್ತದೆ. ಮತ್ತು ವಿವಿಧ ಬ್ಯಾಂಕ್ ಕಾರ್ಡ್‌ಗಳ ಮೇಲೆ ಗರಿಷ್ಠ 1,200 ರೂ.ಗಳ ರಿಯಾಯಿತಿ ಪಡೆಯಬಹುದು. ಈ ಮೊಬೈಲ್ ವೈಬ್ರೆಂಟ್ ಬ್ಲೂ, ಸ್ಲೀಕ್ ಬ್ಲಾಕ್, ಸೇಜ್ ಗ್ರೀನ್ ಮತ್ತು ಡ್ರೀಮಿ ಪರ್ಪಲ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಇನ್ಫಿನಿಕ್ಸ್ ಹಾಟ್ 50 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಇನ್ಫಿನಿಕ್ಸ್ ಹಾಟ್ 50 5G ಫೋನ್ 6.7 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 1600 x 720 ಪಿಕ್ಸೆಲ್ ಡಿಸ್ಪ್ಲೇ, 120Hz ರಿಫ್ರೆಶ್ ದರದ ಬೆಂಬಲ ವನ್ನು ಬೆಂಬಲಿಸುತ್ತದೆ. ಜೊತೆಗೆ, ಅತ್ಯುತ್ತಮ ಭದ್ರತೆಯನ್ನು ಹೊಂದಿದೆ. ಡೈನಾಮಿಕ್ ಬಾರ್ ಇಂಟರಾಕ್ಟಿವ್ ಸ್ಕ್ರೀನ್ ಕೂಡ ಇದೆ.
ಮೀಡಿಯಾಟೆಕ್ ಪ್ರೊಸೆಸರ್
ಇನ್ಫಿನಿಕ್ಸ್ ಹಾಟ್ 50 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಶನ್ 6300 ಪ್ರೊಸೆಸರ್ ಹೊಂದಿದೆ. ಈ ಫೋನ್ XOS 14.5 ಆಧಾರಿತ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಂನೊಂದಿಗೆ ಕೆಲಸ ಮಾಡುತ್ತದೆ. ಇದು 4GB + 128GB ಮತ್ತು 8GB + 128GB ಸ್ಟೋರೇಜ್ ಆಯ್ಕೆಗಳನ್ನು ಒಳಗೊಂಡಿದೆ. ಇದು 8GB ವರೆಗೆ ವಿಸ್ತೃತ RAMಗೆ ಬೆಂಬಲವನ್ನು ಸಹ ಒಳಗೊಂಡಿದೆ. ಇದರ ಸಹಾಯದಿಂದ 16GB ವರೆಗೆ ಬಳಸಬಹುದು.
ಡ್ಯುಯಲ್ ಕ್ಯಾಮೆರಾ ಸೆಟಪ್
ಇನ್ಫಿನಿಕ್ಸ್ ಹಾಟ್ 50 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್ ಲೈಟ್‌ನೊಂದಿಗೆ 48 ಮೆಗಾಪಿಕ್ಸೆಲ್ ಪ್ರಾಥಮಿಕ ಸೋನಿ ಕ್ಯಾಮೆರಾ ಲಭ್ಯವಿದೆ. ಜೊತೆಗೆ ಎಐ (AI) ಲೆನ್ಸ್ ಕೂಡ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ ಎಲ್ಇಡಿ ಫ್ಲ್ಯಾಷ್‌ನೊಂದಿಗೆ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಅದ್ಭುತ ಬ್ಯಾಟರಿ ಬ್ಯಾಕಪ್
ಇನ್ಫಿನಿಕ್ಸ್ ಹಾಟ್ 50 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು ಎಐ ಚಾರ್ಜ್ ರಕ್ಷಣೆ, ಪವರ್ ಮ್ಯಾರಥಾನ್, ಸ್ಮಾರ್ಟ್ ಮೋಡ್, ಅಲ್ಟ್ರಾ ಪವರ್ ಸೇವಿಂಗ್ ಮೋಡ್‌ನಂತಹ ವೈಶಿಷ್ಟ್ಯಗಳನ್ನು ಸಹ ಒಳಗೊಂಡಿದೆ.
ಇತರೆ ವೈಶಿಷ್ಟ್ಯಗಳು
ಇನ್ಫಿನಿಕ್ಸ್ ಹಾಟ್ 50 5G ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಫೇಸ್ ಅನ್‌ಲಾಕ್ ಮತ್ತು ಹಲವು ಎಐ ತಂತ್ರಜ್ಞಾನ ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು ಡ್ಯುಯಲ್ ಸಿಮ್, ವೈ-ಫೈ, ಬ್ಲೂಟೂತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








