ಅತೀ ಕಡಿಮೆ ಬೆಲೆಗೆ Infinix Hot 50i ಬಿಡುಗಡೆ: 256GB ಸ್ಟೋರೇಜ್.. ಬಿಗ್ ಬ್ಯಾಟರಿ!
ಇನ್ಫಿನಿಕ್ಸ್ (Infinix) ಸದ್ದಿಲ್ಲದೆ ಹೊಸ ಮೊಬೈಲ್ ಅನ್ನು ರಿಲೀಸ ಮಾಡಿದೆ. ಕಳೆದ ತಿಂಗಳು ಭಾರತದಲ್ಲಿ Infinix Hot 50 5G ಫೋನನ್ನು ಬಿಡುಗಡೆ ಮಾಡಲಾಗಿತ್ತು. ಇದನ್ನು ಕೇವಲ 9,999 ರೂ.ಗೆ ಪರಿಚಯಿಸಿತ್ತು. ಇದೀಗ ಈ ಸರಣಿಯ ಅಡಿಯಲ್ಲಿ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಇನ್ಫಿನಿಕ್ಸ್ ಹಾಟ್ 50i (Infinix Hot 50i) ಸಹ ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದನ್ನು ಶೀಘ್ರದಲ್ಲೇ ಭಾರತದಲ್ಲಿಯೂ ಲಾಂಚ್ ಮಾಡಲಾಗುವುದು. ಬನ್ನಿ, ಈ ಹೊಸ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ನೋಡೋಣ.
ಇನ್ಫಿನಿಕ್ಸ್ ಹಾಟ್ 50i ಅನ್ನು 10 ಸಾವಿರ ರೂ. (ಅಗ್ಗದ ಬೆಲೆ) ಒಳಗಿನ ಬಜೆಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಇದು 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಈ ಫೋನ್ ಮೀಡಿಯಾಟೆಕ್ ಹೆಲಿಯೊ 581 ಚಿಪ್‌ಸೆಟ್ ಅನ್ನು ಒಳಗೊಂಡಿದೆ. ಇದು ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಇದೆ. ಜೊತೆಗೆ, 5000mAh ಬ್ಯಾಟರಿ, 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಫೀಚರ್ಸ್‌ಗಳನ್ನು ಹೊಂದಿದೆ.

ಇನ್ಫಿನಿಕ್ಸ್ ಹಾಟ್ 50i ಬೆಲೆ ಮತ್ತು ಲಭ್ಯತೆ
ಇನ್ಫಿನಿಕ್ಸ್ ಹಾಟ್ 50i ಮೊಬೈಲ್ ಅನ್ನು ಸುಮಾರು 9,235 ರೂ.ಗೆ ($110) ಬಿಡುಗಡೆ ಮಾಡಲಾಗಿದೆ. ಈ ಫೋನ್ ಟೆಲಿಕಾಂ ಪ್ಲಾನ್‌ನೊಂದಿಗೆ ಮಾರಾಟವಾಗಲಿದೆ. ನೈಜೀರಿಯಾದಲ್ಲಿ ಸ್ಲೀಕ್ ಬ್ಲಾಕ್, ಟೈಟಾನಿಯಂ ಗ್ರೇ ಮತ್ತು ಸೇಜ್ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ತಿಂಗಳ ಅಂತ್ಯದ ವೇಳೆಗೆ ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ?: iQOO 12 5G ಬೆಲೆ ದೊಡ್ಡ ಕುಸಿತ! ಜೊತೆಗೆ 6,000 ರಿಯಾಯಿತಿ.. ಹೊಸ ಬೆಲೆ ಎಷ್ಟು?
ಇನ್ಫಿನಿಕ್ಸ್ ಹಾಟ್ 50i ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಈ ಸ್ಮಾರ್ಟ್‌ಫೋನ್ 6.7 ಇಂಚಿನ ಹೆಚ್‌ಡಿ ಪ್ಲಸ್ ಪಂಚ್ ಹೋಲ್ ಡಿಸ್ಪ್ಲೇಯನ್ನು ಹೊಂದಿದೆ. ಇದು ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. 720 x 1600 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ರೇಟ್ ಮತ್ತು 500 ನಿಟ್ಸ್ ಬ್ರೈಟ್‌ನೆಸ್ ಅನ್ನು ಬೆಂಬಲಿಸುತ್ತದೆ.
ಪ್ರೊಸೆಸರ್ ಸಾಮರ್ಥ್ಯ
ಇನ್ಫಿನಿಕ್ಸ್ ಹಾಟ್ 50i ಫೋನ್ ಆಂಡ್ರಾಯ್ಡ್ 14 ನೊಂದಿದೆ ಬಿಡುಗಡೆ ಮಾಡಲಾಗಿದೆ. ಇದು XOS 14.5 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹೆಲಿಯೊ 581 ಚಿಪ್‌ಸೆಟ್ ಅನ್ನು ಹೊಂದಿದೆ. ಇದು ಡೈನಾಮಿಕ್ RAM ವಿಸ್ತರಣೆ ತಂತ್ರಜ್ಞಾನವನ್ನು ಹೊಂದಿದೆ. ಇದರಲ್ಲಿ 4GB ಮತ್ತು 6GB ವಿಸ್ತೃತ RAM ಲಭ್ಯವಿದೆ. ಈ ಫೋನ್ 256GB ಇಂಟರ್ನಲ್ ಸ್ಟೋರೇಜ್ ಮತ್ತು 2 TB ಮೆಮೊರಿ ಕಾರ್ಡ್ ಅನ್ನು ಒಳಗೊಂಡಿದೆ.
ಕ್ಯಾಮೆರಾ ರಚನೆ
ಈ ಮೊಬೈಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ 48 ಮೆಗಾಪಿಕ್ಸೆಲ್ ಮುಖ್ಯ ಲಭ್ಯವಿದೆ. ಎಲ್ಇಡಿ ಫ್ಲ್ಯಾಷ್ ಲೈಟ್ 5 ಮೀಟರ್ ವರೆಗೆ ಫೋಕಸ್ ಮಾಡಬಹುದು. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಬ್ಯಾಕಪ್
ಇನ್ಫಿನಿಕ್ಸ್ ಹಾಟ್ 50i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಈ ಫೋನ್ ಇನ್ಫಿನಿಕ್ಸ್ ಎಐ (Infinix AI) ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಎನ್‌ಎಫ್‌ಸಿ (NFC), ಬ್ಲೂಟೂತ್ 5.3 ಮತ್ತು ವೈ ಫೈ, ಯುಎಸ್‌ಬಿ ಸಿ ಮತ್ತು ಓಟಿಜಿ (OTG) ಬೆಂಬಲವನ್ನು ಹೊಂದಿದೆ. ಈ ಫೋನ್ IP54 ರೇಟಿಂಗ್ ಪಡೆದಿದೆ. ಇದಲ್ಲದೆ 3.5mm ಹೆಡ್‌ಫೋನ್ ಜ್ಯಾಕ್, ಡ್ಯುಯಲ್ ಸ್ಪೀಕರ್‌ಗಳು ಮತ್ತು 300% ಅಲ್ಟ್ರಾ ವಾಲ್ಯೂಮ್ ಬೂಸ್ಟ್ ತಂತ್ರಜ್ಞಾನವನ್ನು ಸಹ ಹೊಂದಿದೆ.


Click it and Unblock the Notifications








