Just In
- 44 min ago
ಸೋನಿ ಸಂಸ್ಥೆಯಿಂದ ಹೊಸ ಮಾದರಿಯ ವಾಕ್ಮ್ಯಾನ್ ಲಾಂಚ್!..ಜಬರ್ದಸ್ತ್ ಫೀಚರ್ಸ್!
- 1 hr ago
ಸ್ಯಾಮ್ಸಂಗ್ ಗ್ಯಾಲಕ್ಸಿ S22 ಬೆಲೆಯಲ್ಲಿ ಏಕಾಏಕಿ ಭಾರೀ ಇಳಿಕೆ!..ಸಖತ್ ಆಫರ್!
- 1 hr ago
ಬ್ಯಾಂಕ್ ಹೆಸರಲ್ಲಿ ಬಂದ SMS ನಲ್ಲಿನ ಲಿಂಕ್ ಕ್ಲಿಕ್ ಮಾಡಿದ ಮಹಿಳೆ; ಮುಂದಾಗಿದ್ದೇನು?
- 3 hrs ago
ಸ್ಯಾಮ್ಸಂಗ್ನ ಈ ಹೊಸ ಡಿವೈಸ್ ನೋಡಿದ್ರೆ ನಿಮಗೆ ಏನನ್ನಿಸುತ್ತೆ? ಇದೇನು ಸಾಬೂನಾ?
Don't Miss
- Lifestyle
ಸಮಂತಾ ಮಯೋಸೈಟಿಸ್ನಿಂದ ಚೇತರಿಸಿಕೊಳ್ಳಲು ಪಾಲಿಸುತ್ತಿರುವ ಡಯಟ್
- Sports
IND vs NZ: ಯುಜ್ವೇಂದ್ರ ಚಾಹಲ್ ನನ್ನ ಬ್ಯಾಟಿಂಗ್ ಕೋಚ್ ಎಂದ ಸೂರ್ಯಕುಮಾರ್ ಯಾದವ್
- News
Srirangapatna bypass: ಸಂಚಾರಕ್ಕೆ ಮುಕ್ತವಾದ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಯ ಶ್ರೀರಂಗಪಟ್ಟಣ ಬೈಪಾಸ್
- Movies
ಮೊದಲ ವೀಕೆಂಡ್ನಲ್ಲಿ ಅತಿಹೆಚ್ಚು ಕಲೆಕ್ಷನ್ ಮಾಡಿದ ಚಿತ್ರ ದಾಖಲೆಯಲ್ಲಿ ಕೆಜಿಎಫ್ 2 ಹಿಂದಿಕ್ಕಿತಾ ಪಠಾಣ್?
- Automobiles
130 km ರೇಂಜ್ ನೀಡುವ 'ecoDryft' ಬೈಕ್ ಬಿಡುಗಡೆ... .ರೂ.99,999ಕ್ಕೆ ಸಿಗುತ್ತೆ!
- Finance
Budget 2023 Expectations: ಸಾಮಾನ್ಯ ಜನರ ಬಜೆಟ್ ನಿರೀಕ್ಷೆಗಳೇನು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಇನ್‌ಫಿನಿಕ್ಸ್ ಹಾಟ್ 8 ವಿಮರ್ಶೆ : ಅಗ್ಗದ ಬೆಲೆ ದೈತ್ಯ ಬ್ಯಾಟರಿ ಲೈಫ್.!
ಇತ್ತೀಚಿಗೆ ಭಾರತೀಯ ಮಾರುಕಟ್ಟೆಗೆ ಅಗ್ಗದ ಬೆಲೆಯ ಲಗ್ಗೆ ಇಟ್ಟ ಸ್ಮಾರ್ಟ್‌ಫೋನ್‌ಗಳ ಪೈಕಿ 'ಇನ್‌ಫಿನಿಕ್ಸ್ ಹಾಟ್ 8' ಕೂಡಾ ಒಂದಾಗಿದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ ಟ್ರೆಂಡ್‌ನಲ್ಲಿರುವ ತ್ರಿವಳಿ ಕ್ಯಾಮೆರಾ ಆಯ್ಕೆಯನ್ನು ಒಳಗೊಂಡಿದ್ದು, ಜೊತೆಗೆ ಬಲವಾದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಮೊದಲ ನೋಟದಲ್ಲಿಯೇ ಆಕರ್ಷಿಸುವ ಡಿಸೈನ್ ಹೊಂದಿದ್ದು, ಸದ್ಯ ಮಾರುಕಟ್ಟೆಯಲ್ಲಿ ಸದ್ದು ಹುಟ್ಟುಹಾಕಿದೆ.

ಕಡಿಮೆ ಬೆಲೆಗೆ ಬಿಡುಗಡೆ ಆಗುವ ಬಹುತೇಕ ಸ್ಮಾರ್ಟ್‌ಫೋನ್‌ಗಳು ಗಮನಸೆಳೆಯುವುದೇ ಇಲ್ಲ. ಆದರೆ 'ಇನ್‌ಫಿನಿಕ್ಸ್ ಹಾಟ್ 8' ಮಾತ್ರ ದೇಶಿಯ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ಫೋನ್ ಪ್ರಿಯರನ್ನು ಸೆಳೆಯುವ ಫೀಚರ್ಸ್‌ಗಳನ್ನು ತುಂಬಿಕೊಂಡಿದೆ. ಈ ಸ್ಮಾರ್ಟ್‌ಫೋನ್‌ಗಳು 4GB RAM ಮತ್ತು 64GB ಸ್ಟೋರೇಜ್ ಆಯ್ಕೆಯನ್ನು ಪಡೆದಿದ್ದು, ಕೇವಲ 7,999ರೂ ಬೆಲೆಗೆ ದೊರೆಯಲಿದೆ. ಹಾಗಾದರೇ 'ಇನ್‌ಫಿನಿಕ್ಸ್ ಹಾಟ್ 8' ಸ್ಮಾರ್ಟ್‌ಫೋನ್ ಫೀಚರ್ಸ್‌ಗಳ ಕಾರ್ಯವೈಖರಿ ಹೇಗಿವೆ ಎಂಬ ವಿಮರ್ಶೆ ಮುಂದೆ ನೋಡೋಣ ಬನ್ನಿರಿ.

ಇನ್‌ಫಿನಿಕ್ಸ್ ಹಾಟ್ 8' 720x1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.52 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಡಿಸ್‌ಪ್ಲೇಯು ವಾಟರ್‌ಡ್ರಾಪ್ ಸ್ಟೈಲ್ ನಾಚ್ ಮಾದರಿಯಲ್ಲಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, ಹಾಗೆಯೇ ಬಾಹ್ಯ ಬಾಡಿಯಿಂದ ಡಿಸ್‌ಪ್ಲೇ ನಡುವಿನ ಅಂತರವು ಶೇ.90.3% ಆಗಿದ್ದು, ಡಿಸ್‌ಪ್ಲೇಯು 2.5D ಗ್ಲಾಸ್ ರಕ್ಷಣೆ ಪಡೆದಿದೆ. ಈ ಅಂಶಗಳು ತನ್ನ ವರ್ಗದಲ್ಲಿಯೇ ಉತ್ತಮ ಡಿಸ್‌ಪ್ಲೇ ಎನ್ನಬಹುದಾಗಿದೆ.

ಇನ್‌ಫಿನಿಕ್ಸ್ ಹಾಟ್ 8 ಸ್ಮಾರ್ಟ್‌ಫೋನ್ 2GHz ಗಿಗಾಹರ್ಜ್ಜ ವೇಗದಲ್ಲಿ ಹಿಲಿಯೊ ಆಕ್ಟಾಕೋರ್ P22 ಪ್ರೊಸೆಸರ್ ಶಕ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದರೊಂದಿಗೆ 4GB RAM ಮತ್ತು 64GB ಆಂತರಿಕ ಸ್ಟೋರೇಜ್ ಸ್ಥಳಾವಕಾಶವನ್ನು ನೀಡಲಾಗಿದೆ. ಹಾಗೆಯೇ ಆಂಡ್ರಾಯ್ಡ್ 9 ಪೈ ಸಪೋರ್ಟ್ ಇದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು 256GB ವರೆಗೂ ವಿಸ್ತರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆಂತರಿಕ ಸ್ಟೋರೇಜ್ ಇನ್ನಷ್ಟು ಹೆಚ್ಚಿಸಿದ್ದರೇ ಚೆನ್ನಾಗಿರತಿತ್ತು ಎನಿಸುತ್ತದೆ.

ಇನ್‌ಫಿನಿಕ್ಸ್ ಹಾಟ್ 8 ಸ್ಮಾರ್ಟ್‌ಫೋನ್ ಮೂರು ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು f/1.8 ಅಪರ್ಚರ್ ಜೊತೆಗೆ 13ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2ಎಂಪಿ ಸೆನ್ಸಾರ್ ಪಡೆದಿದ್ದು, ತೃತೀಯ ಕ್ಯಾಮೆರಾವು ಲೋ ಸೆನ್ಸಾರ್ ಹೊಂದಿದೆ. ಸೆಲ್ಫಿ ಕ್ಯಾಮೆರಾವು f/2.0 ಅಪರ್ಚರ್ನೊಂದಿಗೆ 8ಎಂಪಿ ಸೆನ್ಸಾರ್ ಪಡೆದಿದ್ದು, ಎಂಟು ಸೀನ್ ಮೋಡ್, ಕ್ವಾಡ್ ಎಲ್ಇಡಿ ಫ್ಲಾಶ್ ಆಯ್ಕೆಗಳಿವೆ. ಕಡಿಮೆ ಬೆಲೆಗೆ ಮೂರು ಕ್ಯಾಮೆರಾ ನೀಡಿರುವುದು ಆಕರ್ಷಣಿಯ ಫೀಚರ್ ಎನಿಸಿದೆ.

ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯ ಬಿಗ್ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, 14ಗಂಟೆ ವಿಡಿಯೊ ಪ್ಲೇ ಬ್ಯಾಕ್ ಬೆಂಬಲ ನೀಡಲಿದೆ. ಹಾಗೆಯೇ 11.4ಗಂಟೆ ಗೇಮಿಂಗ್ ಬ್ಯಾಕ್‌ಅಪ್, 17.6ಗಂಟೆ ಮ್ಯೂಸಿಕ್ ಬ್ಯಾಕ್‌ಅಪ್ ಮತ್ತು 18.1ಗಂಟೆ 4G ಟಾಕ್‌ಟೈಮ್ ಬ್ಯಾಕ್‌ಅಪ್ ನೀಡುವ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಯುಎಸ್‌ಬಿ, ಬ್ಲೂಟೂತ್ v5.0, ಓಟಿಜಿ, ಮೈಕ್ರೋ ಯುಎಸ್‌ಬಿ ಪೋರ್ಟ್ ಆಯ್ಕೆಗಳನ್ನು ಒಳಗೊಂಡಿದೆ. ಬಿಗ್ ಬ್ಯಾಟರಿ ಈ ಫೋನ್ ಬಿಗ್ ಪ್ಲಸ್ ಪಾಯಿಂಟ್ ಆಗಿದೆ.

ಭಾರತೀಯ ಮಾರುಕಟ್ಟೆಗೆ ಬಿಡುಗಡೆಗೊಂಡಿರುವ ಇನ್‌ಫಿನಿಕ್ಸ್ ಹಾಟ್ 8 ಸ್ಮಾರ್ಟ್‌ಫೋನ್ 7,999ರೂ.ಗಳ ಪ್ರೈಸ್‌ಟ್ಯಾಗ್ ಅನ್ನು ಹೊಂದಿದೆ. ಜನಪ್ರಿಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್‌ನಲ್ಲಿ ಇದೇ ಸೆಪ್ಟಂಬರ್ 12ರಂದು ಈ ಫೋನಿನ ಫಸ್ಟ್ ಸೇಲ್ ನಡೆಯಲಿದೆ. ವಿಶೇಷವೆಂದರೇ ಆರಂಭಿಕ ಕೊಡುಗೆಯಾಗಿ ಇದೇ ಅಕ್ಟೊಬರ್ 30ರ ವರೆಗೂ ಗ್ರಾಹಕರಿಗೆ ಈ ಫೋನ್ 6,999ರೂ.ಗಳಿಗೆ ದೊರೆಯಲಿದೆ.

ಇನ್‌ಫಿನಿಟಿ ಹಾಟ್ 8 ಸ್ಮಾರ್ಟ್‌ಫೋನ್ ಕಡಿಮೆ ಬೆಲೆಯನ್ನು ಹೊಂದಿರುವುದು, ಬಿಗ್ ಬ್ಯಾಟರಿ ಮತ್ತು ತ್ರಿವಳಿ ಕ್ಯಾಮೆರಾ ಫೀಚರ್ಸ್‌ಗಳಿಂದ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಆದ್ರೆ ಆಂತರಿಕ ಸ್ಟೋರೇಜ್‌ಗೆ ಇನ್ನಷ್ಟು ಹೆಚ್ಚಿನ ಸ್ಥಳಾವಕಾಶವನ್ನು ನೀಡಬೇಕಿತ್ತು. ಅಥವಾ ಇನ್ನೊಂದು ವೇರಿಯಂಟ್ ಆಯ್ಕೆ ನೀಡಬಹುದಿತ್ತು. ಈ ಅಂಶವನ್ನು ಹೊರತು ಪಡೆಸಿದರೇ ಇನ್‌ಫಿನಿಕ್ಸ್ ಹಾಟ್ 8 ಖರೀದಿಗೆ ಯೋಗ್ಯ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470