20 ಸಾವಿರಕ್ಕಿಂತ ಕಡಿಮೆ ಬೆಲೆಗೆ Infinix Note 40 Pro 5G ಫೋನ್ ಸೇಲ್: ಇಂಥ ಆಫರ್ ಮತ್ತೆ ಸಿಗಲ್ಲ!
ನಿಮಗೆ 20,000 ರೂ. ಒಳಗಿನ ಮೊಬೈಲ್ ಖರೀದಿಸುವ ಬಯಕೆ ಇದ್ಯಾ? ನಿಮಗಿದು ಭರ್ಜರಿ ಖುಷಿ ಸುದ್ದಿ. 2,000 ರೂ. ಡಿಸ್ಕೌಂಟ್, ಇಎಂಐ ಸೌಲಭ್ಯ, ಕ್ಯಾಶ್‌ಬ್ಯಾಕ್ ಸಹ ಸಿಗುತ್ತೆ. ಇನ್ಫಿನಿಕ್ಸ್ ಕಂಪನಿಯು Infinix Note 40 Pro 5G ಸ್ಮಾರ್ಟ್‌ಫೋನ್ ಅನ್ನು ಏಪ್ರಿಲ್‌ನಲ್ಲಿ ಪರಿಚಯಿಸಿತ್ತು. ಪ್ರಸ್ತುತ, ಈ ಮೊಬೈಲ್ ಅನ್ನು ಬ್ಯಾಂಕ್ ಆಫರ್‌ಗಳೊಂದಿಗೆ ಕಡಿಮೆ ಬೆಲೆಗೆ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದು. ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿರುವ ಕೈಗೆಟುಕುವ ಮೊಬೈಲ್ ಇದಾಗಿದೆ. ನೀವು 20,000 ರೂ. ಒಳಗಿನ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಈ ಫೋನ್ ನಿಮಗೆ ಪರ್ಫೆಕ್ಟ್ ಆಯ್ಕೆಯಾಗಿದೆ.
ಇನ್ಫಿನಿಕ್ಸ್ ನೋಟ್ 40 ಪ್ರೊ 5G ಸ್ಮಾರ್ಟ್‌ಫೋನ್ 8GB RAM + 256GB ಇಂಟರ್ನಲ್ ಸ್ಟೋರೇಜ್ ರೂಪಾಂತರವು ಫ್ಲಿಪ್‌ಕಾರ್ಟ್‌ನಲ್ಲಿ 21,999 ರೂ.ಗೆ ಲಭ್ಯವಿದೆ. HDFC, ICICI ಮತ್ತು Axis ಬ್ಯಾಂಕ್ ಕಾರ್ಡ್‌ಗಳ ಮೂಲಕ ಗರಿಷ್ಠ 2,000 ರೂ. ಆಫರ್ ಅನ್ನು ಪಡೆಯಬಹುದು . ಇದು, ಮೊಬೈಲ್ ಟೈಟಾನ್ ಗೋಲ್ಡ್ ಮತ್ತು ವಿಂಟೇಜ್ ಗ್ರೀನ್ ಬಣ್ಣಗಳಲ್ಲಿ ಲಭ್ಯವಿದೆ. ಜೊತೆಗೆ, ಆಯ್ದ ಸ್ಮಾರ್ಟ್‌ಫೋನ್ ಎಕ್ಸ್‌ಚೇಂಜ್ ಮೇಲೆ 1,000 ರೂ. ರಿಯಾಯಿತಿಯನ್ನು ಪಡೆಯಬಹುದು.

ಇನ್ಫಿನಿಕ್ಸ್ ನೋಟ್ 40 ಪ್ರೊ 5G ಫೀಚರ್ಸ್‌ಗಳು
Infinix Note 40 Pro 5G ಸ್ಮಾರ್ಟ್‌ಫೋನ್ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದರಲ್ಲಿ ಬಳಕೆಯಾಗದ ಸಂಗ್ರಹಣೆಯನ್ನು ಬಳಸಿಕೊಂಡು ಲಭ್ಯವಿರುವ ಮೆಮೊರಿಯನ್ನು ವಾಸ್ತವಿಕವಾಗಿ 24GB ವರೆಗೆ ವಿಸ್ತರಿಸಬಹುದು. ಜೊತೆಗೆ ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 7020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು Android 14-ಆಧಾರಿತ XOS 14 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಇನ್ಫಿನಿಕ್ಸ್ ನೋಟ್ 40 ಪ್ರೊ 5G ಡಿಸ್‌ಪ್ಲೇ ಯಾವುದು?
ಇನ್ಫಿನಿಕ್ಸ್ ನೋಟ್ 40 ಪ್ರೊ 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1,080 x 2,436 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 3D ಕರ್ವ್ಡ್ AMOLED ಡಿಸ್‌ಪ್ಲೇ ಜೊತೆಗೆ 120Hz ಡೈನಾಮಿಕ್ ರಿಫ್ರೆಶ್ ರೇಟ್ ಮತ್ತು 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇಯು 2160 PWM ಡಿಮ್ಮಿಂಗ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.
ಇನ್ಫಿನಿಕ್ಸ್ ನೋಟ್ 40 ಪ್ರೊ 5G ಕ್ಯಾಮೆರಾ ಸೆಟಪ್
Infinix Note 40 Pro 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಮುಂಭಾಗದಲ್ಲಿ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಇನ್ಫಿನಿಕ್ಸ್ ನೋಟ್ 40 ಪ್ರೊ 5G ಬ್ಯಾಟರಿ
Infinix Note 40 Pro 5G 45W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ವೈರ್‌ಲೆಸ್ ಮ್ಯಾಗ್‌ಚಾರ್ಜ್‌ಗೆ ಬೆಂಬಲವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, 5G, GPS, NFC, ಬ್ಲೂಟೂತ್ ಮತ್ತು ವೈ-ಫೈ ಸೇರಿವೆ. ಇದು IR ಬ್ಲಾಸ್ಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ಕಂಪಾಸ್, ಗೈರೊಸ್ಕೋಪ್, ಲೈಟ್ ಸೆನ್ಸಾರ್ , ಸಾರ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ, ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಹೊಂದಿದೆ.


Click it and Unblock the Notifications








