ಇನ್ಫಿನಿಕ್ಸ್‌ ಸ್ಮಾರ್ಟ್‌ 6 ವಿಮರ್ಶೆ: ಕಡಿಮೆ ಬೆಲೆಯಲ್ಲಿ ಜಬರ್ದಸ್ತ್‌ ಸ್ಮಾರ್ಟ್‌ಫೋನ್‌!

|

ಹಾಂಗ್ ಕಾಂಗ್ ಮೂಲದ ಇನ್ಫಿನಿಕ್ಸ್ ಕಂಪೆನಿಯು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಮಾರುಕಟ್ಟೆಯಲ್ಲಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಇನ್ಫಿನಿಕ್ಸ್‌, ಇದೀಗ ಇತ್ತೀಚಿಗಷ್ಟೆ ನೂತನವಾಗಿ 'ಇನ್ಫಿನಿಕ್ಸ್‌ ಸ್ಮಾರ್ಟ್‌ 6' ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಫೋನ್ ಎಂಟ್ರಿ ಲೆವೆಲ್‌ ಪ್ರೈಸ್‌ ಟ್ಯಾಗ್‌ ಮತ್ತು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್‌ ಹಿಲಿಯೋ A22 ಕ್ವಾಡ್ ಕೋರ್ SoC ಅನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌

ಹೌದು, ಇನ್ಫಿನಿಕ್ಸ್‌ ಕಂಪೆನಿ ಪರಿಚಯಿಸಿರುವ ಹೊಸ 'ಇನ್ಫಿನಿಕ್ಸ್‌ ಸ್ಮಾರ್ಟ್‌ 6' ಆರಂಭಿಕ ಮಾದರಿಯ ಸ್ಮಾರ್ಟ್‌ಫೋನ್ ಆಗಿದೆ. ಅದಾಗ್ಯೂ ಈ ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಫೋನ್ ಟ್ರೆಂಡಿ ಲುಕ್ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಹಾಗೆಯೇ ಡ್ಯುಯಲ್ AI ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗಾದರೇ ಹೊಸ ಇನ್ಫಿನಿಕ್ಸ್‌ ಸ್ಮಾರ್ಟ್‌ 6' ಸ್ಮಾರ್ಟ್‌ಫೋನ್ ಫಸ್ಟ್‌ ಲುಕ್ ಹೇಗಿದೆ?..ಈ ಫೋನಿನ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಇನ್ಫಿನಿಕ್ಸ್ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ HD+ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 266 ppi ಪಿಕ್ಸೆಲ್‌ ಸಾಂದ್ರತೆ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 500 ನಿಟ್ಸ್ ಬ್ರೈಟ್‌ನೆಸ್ ಮತ್ತು 89% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ತನ್ನ ವರ್ಗದಲ್ಲಿಯೇ ಉತ್ತಮ ಸ್ಕ್ರೀನ್ ಹೊಂದಿದ್ದು, ವಿಡಿಯೋ ವೀಕ್ಷಣೆಗೆ ಪೂರಕವಾಗಿದೆ. ಇನ್ನು ಇದರ ಡಿಸೈನ್ ಸಹ ಗ್ರಾಹಕರನ್ನು ಸೆಳೆಯುವಂತಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ಇದು ಮೀಡಿಯಾ ಟೆಕ್ ಹಿಲಿಯೊ A22 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 (Go ಆವೃತ್ತಿ) ಆಧಾರಿತ XOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM + 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 2GB ವರ್ಚುವಲ್ RAM ಅನ್ನು ಕೂಡ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಅಗ್ಗದ ಬೆಲೆಯ ಫೋನ್‌ ಆಗಿದ್ದರೂ ಹೆಚ್ಚುವರಿ ಸ್ಟೋರೇಜ್‌ಗೆ ಪೂರಕ ಅವಕಾಶ ನೀಡಲಾಗಿದೆ. ಗ್ರಾಹಕರು ಎಸ್‌ಡಿ ಕಾರ್ಡ್‌ ಮೂಲಕ 512GB ವರೆಗೆ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ. ಎಂಟ್ರಿ ಲೆವಲ್ ಮಾದರಿಯ ಸ್ಮಾರ್ಟ್‌ಫೋನ್‌ ವರ್ಗದಲ್ಲಿ ಪೈಪೋಟಿ ನೀಡುವ ಪ್ರೊಸೆಸರ್ ಎನಿಸಿದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು?

ಕ್ಯಾಮೆರಾ ಸೆನ್ಸಾರ್ ಎಷ್ಟು?

ಇನ್ಫಿನಿಕ್ಸ್‌ ಸ್ಮಾರ್ಟ್ 6 ಸ್ಮಾರ್ಟ್‌ಫೋನ್‌ ಡ್ಯುಯಲ್ AI ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಡಬಲ್ LED ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ AI HDR, ಬ್ಯೂಟಿ ಮತ್ತು ಪೋರ್ಟ್ರೇಟ್‌ನಂತಹ ವಿಭಿನ್ನ ಮೋಡ್‌ಗಳನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಫೋಟೊ ಫೀಲ್ಟರ್ ಹಾಗೂ ಎಡಿಟಿಂಗ್ ಆಯ್ಕೆಗಳು ಇವೆ. ತನ್ನ ವರ್ಗದಲ್ಲಿಯೇ ಆಕರ್ಷಕ ಕ್ಯಾಮೆರಾ ಫೀಚರ್‌ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ

ಬ್ಯಾಟರಿ ಮತ್ತು ಇತರೆ ಸೌಲಭ್ಯ

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಟಾಕ್ ಟೈಮ್ ಜೊತೆಗೆ 31 ಗಂಟೆಗಳ ಬ್ಯಾಟರಿ ಬಾಳಿಕೆ ಮತ್ತು 678 ಗಂಟೆಗಳ ಸ್ಟ್ಯಾಂಡ್‌ಬೈ ಬ್ಯಾಟರಿ ಬಾಳಿಕೆಯನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌ v5.0 ಅನ್ನು ಬೆಂಬಲಿಸುತ್ತದೆ. ಇದಲ್ಲದೆ DTS-HD ಸರೌಂಡ್ ಸೌಂಡ್ ಮತ್ತು ವರ್ಧಿತ ಆಡಿಯೊ ಅನುಭವಕ್ಕಾಗಿ ಬೀಜ್ 2.0 ಅನ್ನು ಸಹ ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ಗಳು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿವೆ.

ಬೆಲೆ ಮತ್ತು ಕೊನೆಯ ಮಾತು

ಬೆಲೆ ಮತ್ತು ಕೊನೆಯ ಮಾತು

ಇನ್ಫಿನಿಕ್ಸ್‌ ಸ್ಮಾರ್ಟ್‌ 6 ಸ್ಮಾರ್ಟ್‌ಫೋನ್‌ 7,499ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹಾರ್ಟ್ ಆಫ್ ಓಷನ್, ಲೈಟ್ ಸೀ ಗ್ರೀನ್, ಪೋಲಾರ್ ಬ್ಲಾಕ್ ಮತ್ತು ಸ್ಟಾರಿ ಪರ್ಪಲ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಫೋನ್ ಸ್ಪರ್ಧಾತ್ಮಕ ಬೆಲೆಯನ್ನು ಹೊಂದಿದೆ. ಆದರೆ RAM ಸಾಕಷ್ಟು ಕಡಿಮೆಯಾಗಿದೆ, ಇದು ಈ ಫೋನಿನ ಪ್ರಮುಖ ಮೈನಸ್‌ ಪಾಯಿಂಟ್‌ ಎನಿಸುತ್ತದೆ. ಕಂಪನಿಯು ಉತ್ತಮ RAM ಸಾಮರ್ಥ್ಯ ಮತ್ತು ಸುಧಾರಿತ ಪ್ರೊಸೆಸರ್ ಅನ್ನು ಆರಿಸಿದರೆ ಅದು ಉತ್ತಮವಾಗಿರುತ್ತದೆ.

Best Mobiles in India

English summary
Infinix Smart 6: Attractive Smartphone at Entry Level Price Tag.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X