Home
ಮೊಬೈಲ್

ಕೇವಲ 6,549 ರೂ.! 6000mAh ಬ್ಯಾಟರಿ.. 128GB ಸ್ಟೋರೇಜ್‌.. 22% ಡಿಸ್ಕೌಂಟ್! ಯಾವ ಫೋನ್?

ನೀವು ಅಗ್ಗದ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೊನ್ ಖರೀದಿಸಲು ಬಯಸುತ್ತಿದ್ದೀರಾ? ಹಾಗಿದ್ರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ನೀವು, ಕೇವಲ 6,549 ರೂ.ಗೆ ಸ್ಟೈಲಿಶ್ ಫೋನ್ ಖರೀದಿಸಬಹುದು. ಹೌದು, ಇನ್ಫಿನಿಕ್ಸ್ ಸ್ಮಾರ್ಟ್‌ 8 ಪ್ಲಸ್ (Infinix Smart 8 Plus) ಮೊಬೈಲ್ ಭಾರೀ ರಿಯಾಯಿತಿಯೊಂದಿಗೆ ಲಭ್ಯವಿದೆ. ಜೊತೆಗೆ, ಬ್ಯಾಂಕ್ ಡಿಸ್ಕೌಂಟ್‌, ನೋ ಕಾಸ್ಟ್‌ ಇಎಂಐ ಮತ್ತು ಎಕ್ಸ್‌ಚೇಂಜ್‌ ಆಫರ್‌ಗಳ ಲಾಭ ಪಡೆಯಬಹುದು. ರಿಯಾಯಿತಿಯೊಂದಿಗೆ ನೀವು, ಮೊಬೈಲ್ ಅನ್ನು ಅತ್ಯಂತ ಅಗ್ಗದ ಬೆಲೆಯಲ್ಲಿ ಖರೀದಿಸಬಹುದು. ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಕಂಪನಿಯು ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನನ್ನು ಕೇವಲ 4GB RAM + 128GB ಸ್ಟೋರೇಜ್‌ನಲ್ಲಿ ಬಿಡುಗಡೆ ಮಾಡಿದೆ. ಇದನ್ನು 7,799 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಕೇವಲ 6,549 ರೂ.ಗೆ ಮಾರಾಟ ಮಾಡಲಾಗುತ್ತಿದೆ. ನೀವು, ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್‌ನಲ್ಲಿ ಫೋನನ್ನು ಖರೀದಿಸಬಹುದು. ಎಸ್‌ಬಿಐ ಇಎಂಐ ವಹಿವಾಟುಗಳ ಮೇಲೆ 1,250 ರೂ. ಮತ್ತು ಸಾಮಾನ್ಯ ವಹಿವಾಟುಗಳಲ್ಲಿ 750 ರೂ. ವರೆಗೆ ರಿಯಾಯಿತಿ ಲಭ್ಯವಿದೆ.

ಕೇವಲ 6,549 ರೂ.! 6000mAh ಬ್ಯಾಟರಿ.. 128GB ಸ್ಟೋರೇಜ್‌.. 22% ಡಿಸ್ಕೌಂಟ್!

ನೀವು, ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿದರೆ, ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಕಂಪನಿಯು 3 ರಿಂದ 6 ತಿಂಗಳ ನೋ ಕಾಸ್ಟ್‌ ಇಎಂಐ ಆಯ್ಕೆಯನ್ನು ನೀಡುತ್ತಿದೆ. ಜೊತೆಗೆ 6,700 ರೂ. ವರೆಗೆ ಎಕ್ಸ್‌ಚೇಂಜ್ ಆಫರ್‌ ಸಹ ನೀಡುತ್ತಿದೆ. ಇದು ನಿಮ್ಮ ಹಳೆಯ ಫೋನಿನ ಸ್ಥಿತಿಯನ್ನು ಅವಲಂಭಿಸಿದೆ. ನೀವು ಫ್ಲಿಪ್‌ಕಾರ್ಟ್‌ನಲ್ಲಿ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು. ಅಮೆಜಾನ್‌ನಲ್ಲಿಯೂ ಈ ಫೋನನ್ನು ಖರೀದಿಸಬಹುದು.

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ 6.6 ಇಂಚಿನ ದೊಡ್ಡ ಎಲ್‌ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ದರ ಮತ್ತು 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಅನ್ನು ಮೀಡಿಯಾ ಟೆಕ್ ಹೆಲಿಯೊ G36 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ನೀವು ಬ್ರೌಸಿಂಗ್, ಸ್ಟ್ರೀಮಿಂಗ್ ಅಥವಾ ಬಹುಕಾರ್ಯಕವನ್ನು ಬಹಳ ಸುಲಭವಾಗಿ ಮಾಡಬಹುದು. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 13 ಗೋ ಆವೃತ್ತಿಯಲ್ಲಿ XOS 13 ಜೊತೆಗೆ ಕೆಲಸ ನಿರ್ವಹಿಸುತ್ತದೆ.

ಸ್ಟೋರೇಜ್ ಆಯ್ಕೆ

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಮೊಬೈಲ್ 4GB LPDDR4X RAM ನೊಂದಿಗೆ ಬರುತ್ತದೆ. ಜೊತೆಗೆ, ಹೆಚ್ಚುವರಿ 4GB ವರ್ಚುವಲ್ RAM ಮತ್ತು 128GB ಇಂಟರ್ನಲ್ ಸ್ಟೋರೇಜ್‌ 2TB ವರೆಗೆ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್‌ 50 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಹೊಂದಿದೆ. ಇದು ಎಐ (AI) ಲೆನ್ಸ್ ಮತ್ತು ಕ್ವಾಡ್ ಎಲ್ಇಡಿ ರಿಂಗ್ ಫ್ಲ್ಯಾಷ್‌ ಅನ್ನು ಒಳಗೊಂಡಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಅನ್ನು 6,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ತಂತ್ರಜ್ಞಾನ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಇನ್ಫಿನಿಕ್ಸ್ ಸ್ಮಾರ್ಟ್ 8 ಪ್ಲಸ್ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ 802.11ac, ಬ್ಲೂಟೂತ್ 5 ಮತ್ತು ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
infinix smart 8 plus available with 22 percent discount on flipkart sale: know offers, availability, specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+