ಜಸ್ಟ್ 6,699 ರೂ.! 5000mAh ಬ್ಯಾಟರಿ.. ದೊಡ್ಡ ಡಿಸ್‌ಪ್ಲೇ.. ಹೊಸ Infinix ಫೋನ್ ಲಾಂಚ್
ಅಗ್ಗದ ಮೊಬೈಲ್ ಬಯಸುವ ಗ್ರಾಹಕರಿಗೆ ಇನ್ಫಿನಿಕ್ಸ್ ಸಿಹಿಸುದ್ದಿ ನೀಡಿದೆ. ಕಂಪನಿಯು ಹೊಸ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಹೌದು, ಬಹುನಿರೀಕ್ಷಿತ ಇನ್ಫಿನಿಕ್ಸ್ ಸ್ಮಾರ್ಟ್ 9 HD (Infinix Smart 9 HD) ಸ್ಮಾರ್ಟ್‌ಫೋನ್ ದೇಶೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ನೀವು ಫ್ಲಿಪ್‌ಕಾರ್ಟ್ ಮೂಲಕ ಈ ಹೊಸ ಮೊಬೈಲ್ ಖರೀದಿಸಬಹುದು. ಕಂಪನಿಯು ಅಗ್ಗದ ದರವೆಂಬ ಕಾರಣಕ್ಕೆ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಬನ್ನಿ, ಇನ್ಫಿನಿಕ್ಸ್ ಸ್ಮಾರ್ಟ್ 9 HD ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಇನ್ಫಿನಿಕ್ಸ್ ಸ್ಮಾರ್ಟ್ 9 HD ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹೆಲಿಯೊ G50 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 90Hz ರಿಫ್ರೆಶ್ ದರದೊಂದಿಗೆ 6.7 ಇಚಿನ ಡಿಸ್ಪ್ಲೇ ಲಭ್ಯವಿದೆ. ಇದು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 13 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಈ ಜೊತೆಗೆ 6GB RAM, 64GB ಸ್ಟೋರೇಜ್ ಮತ್ತು 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಇನ್ಫಿನಿಕ್ಸ್ ಸ್ಮಾರ್ಟ್ 9 HD ಬೆಲೆ
ಇನ್ಫಿನಿಕ್ಸ್ ಸ್ಮಾರ್ಟ್ 9 HD ಫೋನನ್ನು ಕೇವಲ ಒಂದೇ ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಮಾಡಲಾಗಿದೆ. ಇದು 3GB RAM + 64GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಕಂಪನಿಯು ಈ ಫೋನನ್ನು 6,699 ರೂ.ಗಳ ಆರಂಭಿಕ ಬೆಲೆಯಲ್ಲಿ ಲಾಂಚ್ ಮಾಡಿದೆ. ಈ ಫೋನ್ ಖರೀದಿ ಮೇಲೆ 500 ರೂ.ಗಳ ರಿಯಾಯಿತಿ ಸಹ ನೀಡಲಾಗಿದೆ. ನೀವು ಈ ಫೋನನ್ನು ಕೇವಲ 6,199 ರೂ.ಗೆ ಖರೀದಿಸಬಹುದು. ಈ ಹೊಸ ಇನ್ಫಿನಿಕ್ಸ್ ಮೊಬೈಲ್ ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ಇದು ಕೋರಲ್ ಗೋಲ್ಡ್, ಮೆಟಾಲಿಕ್ ಬ್ಲಾಕ್, ಮಿಂಟ್ ಗ್ರೀನ್ ಮತ್ತು ನಿಯೋ ಟೈಟಾನಿಯಂ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ಇನ್ಫಿನಿಕ್ಸ್ ಸ್ಮಾರ್ಟ್ 9 HD ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಇನ್ಫಿನಿಕ್ಸ್ ಸ್ಮಾರ್ಟ್ 9 HD ಮೊಬೈಲ್ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿರುತ್ತದೆ. ಇದು 90Hz ರಿಫ್ರೆಶ್ ದರ ಮತ್ತು 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿರಲಿದೆ. ಈ ಹೊಸ ಫೋನ್ IP54 ರೇಟಿಂಗ್‌ನೊಂದಿಗೆ ಬರುತ್ತದೆ.
ಪ್ರೊಸೆಸರ್ ಸಾಮರ್ಥ್ಯ
ಇನ್ಫಿನಿಕ್ಸ್ ಸ್ಮಾರ್ಟ್ 9 HD ಫೋನ್ ಮೀಡಿಯಾಟೆಕ್‌ನ ಹೆಲಿಯೊ G50 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನ್ 3GB RAM ಹೊಂದಿರುತ್ತದೆ. ಜೊತೆಗೆ 3GB ವರ್ಚುವಲ್ RAM ತಂತ್ರಜ್ಞಾನ ಸಹ ಒಳಗೊಂಡಿರುತ್ತದೆ. ನೀವು ಭೌತಿಕ RAM ಜೊತೆಗೆ 6GB RAM ಅನ್ನು ಬಳಸಬಹುದು.
ಕ್ಯಾಮೆರಾ ಸೆಟಪ್
ಇನ್ಫಿನಿಕ್ಸ್ ಸ್ಮಾರ್ಟ್ 9 HD ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 13 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಜೊತೆಗೆ AI ಲೆನ್ಸ್ ಸಹ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಇನ್ಫಿನಿಕ್ಸ್ ಸ್ಮಾರ್ಟ್ 9 HD ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ನೀವು ಈ ಫೋನ್‌ನಲ್ಲಿ 14.5 ಗಂಟೆಗಳ ವಿಡಿಯೋ ಪ್ಲೇಬ್ಯಾಕ್ ಅಥವಾ 8.6 ಗಂಟೆಗಳ ಗೇಮಿಂಗ್ ಮಾಡಬಹುದು ಎಂದು ಕಂಪನಿ ಹೇಳಿದೆ. ಈ ಫೋನಿನಲ್ಲಿ ಯುಎಸ್‌ಬಿ ಟೈಪ್ ಸಿ ಪೋರ್ಟ್ ಲಭ್ಯವಿರುತ್ತದೆ. ಈ ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಪಡೆದಿದೆ.


Click it and Unblock the Notifications








