Home
ಮೊಬೈಲ್

Infinix: ನಾಳೆ ದೈತ್ಯ ಫೋನ್ ಲಾಂಚ್; 50MP ಸೆಲ್ಫಿ ಕ್ಯಾಮೆರಾ.. ಬೆಲೆ ಎಷ್ಟು?

ಇನ್ಫಿನಿಕ್ಸ್ (Infinix) ಕಂಪನಿಯು ತನ್ನ ಮೊದಲ ಫ್ಲಿಪ್ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಇದು, ಇನ್ಫಿನಿಕ್ಸ್ ಝೀರೋ ಫ್ಲಿಪ್ 5G (Infinix Zero Flip 5G) ಎಂಬ ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಕಂಪನಿಯು ನಾಳೆ (ಅಕ್ಟೋಬರ್ 17) ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಮೊಬೈಲ್, ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಮುಂಬರುವ ಈ ಫೋನ್, Motorola Razr 50 ಮತ್ತು Tecno Phantom V Flip 5G ಮೊಬೈಲ್‌ಗಳಿಗೆ ಸ್ಪರ್ಧೆ ನೀಡಲಿದೆ.

ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಮೊಬೈಲ್‌ನಲ್ಲಿ ಮೂರು 50 ಮೆಗಾಪಿಕ್ಸೆಲ್ ಕ್ಯಾಮೆರಾ ಇರಲಿದೆ. ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 8020 ಚಿಪ್‌ಸೆಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಇದು 120Hz ರಿಫ್ರೆಶ್ ದರದೊಂದಿಗೆ 6.9 ಇಂಚಿನ ಹೆಚ್‌ಡಿ ಡಿಸ್ಪ್ಲೇ ಮತ್ತು 3.6 ಇಂಚಿನ ಕವರ್ ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ, 4720mAh ಸಾಮರ್ಥ್ಯದ ಬ್ಯಾಟರಿ ಮತ್ತು 70W ಚಾರ್ಜಿಂಗ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ. ಬನ್ನಿ, ಈ ಫೋನಿನ ಮತ್ತಿತರ ವಿಶೇಷತೆಗಳನ್ನು ತಿಳಿಯೋಣ.

Infinix: ನಾಳೆ ದೈತ್ಯ ಫೋನ್ ಲಾಂಚ್; 50MP ಸೆಲ್ಫಿ ಕ್ಯಾಮೆರಾ.. ಬೆಲೆ ಎಷ್ಟು?

ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ನಿರೀಕ್ಷಿತ ಬೆಲೆ

ಕಂಪನಿಯು ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಮೊಬೈಲ್ ಅನ್ನು ಭಾರತದಲ್ಲಿ ಸುಮಾರು 50,000 ರೂ. ಅಥವಾ 55,000 ರೂ. ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಫೋನ್ ಬ್ಲಾಸಮ್ ಗ್ಲೋ ಮತ್ತು ರಾಕ್ ಬ್ಲಾಕ್ ಎಂಬ ಎರಡು ಬಣ್ಣ ಆಯ್ಕೆಗಳಲ್ಲಿ ಮಾರಾಟವಾಗಲಿದೆ.

ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಮೊಬೈಲ್ 6.9 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ LTPO ಅಮೋಲೆಡ್ ಪ್ರಾಥಮಿಕ ಡಿಸ್ಪ್ಲೇಯನ್ನು ಹೊಂದಿದೆ. ಇದು 1,080 x 2,640 ಪಿಕ್ಸೆಲ್‌ಗಳ ರೆಸಲ್ಯೂಶನ್, 1100 ನಿಟ್ಸ್ ಪೀಕ್ ಬ್ರೈಟ್‌ನೆಸ್‌ ಮತ್ತು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ. ಈ ಫೋನಿನಲ್ಲಿ 3.64 ಇಂಚಿನ ಕವರ್ ಡಿಸ್ಪ್ಲೇ ಹೊಂದಿದೆ. ಇದು 1056 x 1066 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಎರಡೂ ಡಿಸ್ಪ್ಲೇಗಳು 120Hz ರಿಫ್ರೆಶ್ ದರದೊಂದಿಗೆ ಬರುತ್ತವೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಅನ್ನು ಆಕ್ಟಾಕೋರ್ ಮೀಡಿಯಾ ಟೆಕ್ ಡೈಮೆನ್ಶನ್ 8020 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಿದೆ. ಈ ಫೋನ್ ವಿಸ್ತೃತ ಬೆಂಬಲದೊಂದಿಗೆ 16GB RAM ಹೊಂದಿದೆ. 512GB ಇಂಟರ್ನಲ್ ಸ್ಟೋರೇಜ್‌, 8GB RAM ಹೊಂದಿದೆ. ಈ ಮೊಬೈಲ್ ಕಂಪನಿಯ XOS 14.5 ಸ್ಕಿನ್‌ನ ಮೇಲೆ ಆಂಡ್ರಾಯ್ಡ್ 14 ಅನ್ನು ರನ್ ಮಾಡುತ್ತದೆ.

ಕ್ಯಾಮೆರಾ ಸೆಟಪ್

ಇನ್ಫಿನಿಕ್ಸ್ ಝೀರೋ ಫ್ಲಿಪ್ ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ, 50 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಇರಲಿದೆ. ಸೆಲ್ಫಿ ಪ್ರಿಯರಿಗಾಗಿ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನ್ 4,720mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 70W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ, 10W ವೈರ್ಡ್ ರಿವರ್ಸ್ ಚಾರ್ಜಿಂಗ್ ವೈಶಿಷ್ಟ್ಯ ಸಹ ಲಭ್ಯವಿದೆ.

ಇತರೆ ವೈಶಿಷ್ಟ್ಯಗಳು

ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಮೊಬೈಲ್ 7.64 ಮಿಮೀ (ಮುಚ್ಚಿದ) ದಪ್ಪವಿದೆ. ಈ ಫೋನ್ ಮಡಿಸಿದಾಗ 16.04 ಮಿಮೀ ದಪ್ಪ ಇರುತ್ತದೆ. ಈ ಫೋನಿನಲ್ಲಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಇರಲಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, ವೈ ಫೈ, ಬ್ಲೂಟೂತ್ 5.4, ಜಿಪಿಎಸ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Infinix Zero Flip 5G to launch in India tommorrow: know Price, Specifications and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+