ಮಾರುಕಟ್ಟೆಗೆ ಬಂತು Infinix Zero Flip 5G; ಟ್ರಿಪಲ್ 50MP ಕ್ಯಾಮೆರಾ.. ಧೂಳೆಬ್ಬಿಸಲು Infinix ರೆಡಿ!
ಮೊಬೈಲ್ ಪ್ರಿಯರ ಕಾಯುವಿಕೆ ಮುಗಿಯಿತು! ಕೊನೆಗೂ ಇನ್ಫಿನಿಕ್ಸ್ (Infinix) ಕಂಪನಿಯ ಮೊಟ್ಟ ಮೊದಲ ಫ್ಲಿಪ್ ಫೋನ್ ಭಾರತಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದೆ. ಇದು, ಇನ್ಫಿನಿಕ್ಸ್ ಝೀರೋ ಫ್ಲಿಪ್ 5G (Infinix Zero Flip 5G) ಎಂಬ ಹೆಸರಿನೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಕಂಪನಿಯು ಈಗಾಗಲೇ, ಈ ಮೊಬೈಲ್ ಅನ್ನು ಜಾಗತಿಕ ಮಾರುಕಟ್ಟೆಗೆ ಪರಿಚಯಿಸಿದೆ. ಭಾರತದಲ್ಲಿ 50,000 ರೂ.ಗಳ ಬಜೆಟ್‌ನಲ್ಲಿ ಲಾಂಚ್ ಮಾಡಿದೆ. ಬನ್ನಿ, ಹೊಸ ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನಿನ ವೈಶಿಷ್ಟ್ಯಗಳು ಮತ್ತು ಬೆಲೆಯನ್ನು ತಿಳಿಯೋಣ.
ಕಂಪನಿಯು ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಅನ್ನು ಕೇವಲ ಒಂದು ಸ್ಟೋರೇಜ್‌ನಲ್ಲಿ ಪರಿಚಯಿಸಿದೆ. ನೀವು, ರಾಕ್ ಬ್ಲಾಕ್ ಮತ್ತು ಬ್ಲಾಸಮ್ ಗ್ಲೋ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನ್ ಆಕ್ಟಾ ಕೋರ್ ಡೈಮೆನ್ಸಿಟಿ 8020 ಪ್ರೊಸೆಸರ್ ಹೊಂದಿದೆ. ಇದರಲ್ಲಿ 6.9 ಇಂಚಿನ ಪ್ರಾಥಮಿಕ ಡಿಸ್ಪ್ಲೇ ಮತ್ತು 3.64 ಇಂಚಿನ ಕವರ್ ಡಿಸ್ಪ್ಲೇ ಲಭ್ಯವಿದೆ. ಇದರೊಂದಿಗೆ, 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ, 4720mAh ಬ್ಯಾಟರಿ ಮತ್ತು 70W ಚಾರ್ಜಿಂಗ್ ಸೇರಿದಂತೆ ಮುಂತಾದ ವೈಶಿಷ್ಟ್ಯಗಳನ್ನು ಹೊಂದಿದೆ.

ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನಿನ ಬೆಲೆ
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನಿನ 8GB RAM + 512GB ಸ್ಟೋರೇಜ್ ರೂಪಾಂತರವನ್ನು 49,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಇದರ ಬೆಲೆ ಸುಮಾರು 50,100 ರೂ. ($600) ಇದೆ. ಕಂಪನಿಯು, ಲಾಂಚ್ ಆಫರ್ ಅಡಿಯಲ್ಲಿ ಮೊಬೈಲ್ ಅನ್ನು 5,000 ರೂ. ಬ್ಯಾಂಕ್ ಆಫರ್‌ನೊಂದಿಗೆ ಮಾರಾಟ ಮಾಡಲಿದೆ. ನೀವು, ಈ ಫೋನನ್ನು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಅಕ್ಟೋಬರ್ 24 ರಂದು ಮಧ್ಯಾಹ್ನ 12 ರಿಂದ ಖರೀದಿಸಬಹುದು.
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೀಚರ್ಸ್
ಡಿಸ್ಪ್ಲೇ ವಿವರ
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನ್ 6.9 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ LTPO ಅಮೋಲೆಡ್ ಪ್ರಾಥಮಿಕ ಡಿಸ್ಪ್ಲೇಯನ್ನು ಹೊಂದಿದೆ. ಇದು 1080 x 2640 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ರೇಟ್, 1400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ 3.64 ಇಂಚಿನ ಅಮೋಲೆಡ್ ಕವರ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1056 x 1066 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ, 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲವನ್ನು ಹೊಂದಿದೆ. ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಮೊಬೈಲ್ ಆಕ್ಟಾ ಕೋರ್ ಡೈಮೆನ್ಸಿಟಿ 8020 6 nm ಪ್ರೊಸೆಸರ್ ಹೊಂದಿದೆ. ಜೊತೆಗೆ, ಮಾಲಿ G77 MC9 ಜಿಪಿಯು ಲಭ್ಯವಿದೆ. ಫೋನಿನಲ್ಲಿ ವಿಸ್ತೃತ ಬೆಂಬಲದೊಂದಿಗೆ 16GB RAM ವರೆಗೆ ಶಕ್ತಿಯನ್ನು ಬಳಸಬಹುದು. ಇದರೊಂದಿಗೆ, 8GB RAM ಮತ್ತು 512GB ವರೆಗೆ ಇಂಟರ್ನಲ್ ಸ್ಟೋರೇಜ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ XOS 14.5 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಕ್ಯಾಮೆರಾ ಸೆಟಪ್
ಹೊಸ ಇನ್ಫಿನಿಕ್ಸ್ ಫ್ಲಿಪ್ ಸ್ಮಾರ್ಟ್‌ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. 30 FPS ನಲ್ಲಿ 4K ನಲ್ಲಿ ವಿಡಿಯೋಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ, ಡ್ಯುಯಲ್ ಎಲ್‌ಇಡಿ ಫ್ಲ್ಯಾಷ್ ಮತ್ತು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಇದೆ. ಸೆಲ್ಫಿ ಪ್ರಿಯರಿಗಾಗಿ, ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಕ್ಯಾಮೆರಾವನ್ನು ಹೊಂದಿದೆ. ಇದು ಎಲ್ಇಡಿ ಮತ್ತು ಸ್ಕ್ರೀನ್ ಫ್ಲ್ಯಾಷ್ ಒಳಗೊಂಡಿದೆ.
ಬ್ಯಾಟರಿ ಬ್ಯಾಕಪ್
ಇನ್ಫಿನಿಕ್ಸ್ ಝೀರೋ ಫ್ಲಿಪ್ 5G ಫೋನ್ 4720mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 70W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಜೊತೆಗೆ, 10W ವೈರ್ಡ್ ರಿವರ್ಸ್ ಚಾರ್ಜಿಂಗ್ ವೈಶಿಷ್ಟ್ಯವೂ ಲಭ್ಯವಿದೆ.
ಇತರೆ ವೈಶಿಷ್ಟ್ಯಗಳು
ಈ ಫ್ಲಿಪ್ ಮೊಬೈಲ್ 170.75 ಎಂಎಂ x 73.4 x 7.64 ಎಂಎಂ (ಬಿಚ್ಚಿದಾಗ) ಮತ್ತು ಮಡಿಸಿದಾಗ 87.49 x 73.4 x 16.04 ಎಂಎಂ ದಪ್ಪ ಹೊಂದಿದೆ. ಇದು 195 ಗ್ರಾಂ ತೂಕ ಹೊಂದಿದೆ. ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, ಜೆಬಿಎಲ್ ಡ್ಯುಯಲ್ ಸ್ಪೀಕರ್, ವೈ-ಫೈ 6, ಬ್ಲೂಟೂತ್ 5.4, ಎನ್‌ಎಫ್‌ಸಿ (NFC), ಯುಎಸ್‌ಬಿ ಸಿ ಸೇರಿದಂತೆ ಮುಂತಾದ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








