Home
ಮೊಬೈಲ್

ಡಿ.11ಕ್ಕೆ iQOO 13 ಫಸ್ಟ್ ಸೇಲ್; 6000mAh ಬ್ಯಾಟರಿ.. ಮೂರು 50MP ಕ್ಯಾಮೆರಾಗಳು.. 3000 ಡಿಸ್ಕೌಂಟ್!

ಐಕ್ಯೂ ಇತ್ತೀಚೆಗೆ ಭಾರತದಲ್ಲಿ ಬಹುನಿರೀಕ್ಷಿತ ಐಕ್ಯೂ 13 (iQOO 13) ಫೋನನ್ನು ಬಿಡುಗಡೆ ಮಾಡಿದೆ. ಇದು ಮೊಬೈಲ್‌ ಪ್ರಿಯರನ್ನು ಆಕರ್ಷಸುವಲ್ಲಿ ಯಶಸ್ವಿಯಾಗಿದೆ. ಅಂದಹಾಗೆ, ಈ ಫೋನ್‌ ಡಿಸೆಂಬರ್ 11ರಿಂದ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಈಗಾಗಲೇ, ಇ-ಕಾಮರ್ಸ್‌ ಸೈಟ್ ಅಮೆಜಾನ್‌ನಲ್ಲಿ ಪ್ರಿ-ಬುಕಿಂಗ್ ಪ್ರಾರಂಭವಾಗಿದೆ. ನೀವು,ಮೊದಲ ದಿನವೇ ಈ ಮೊಬೈಲ್ ಖರೀದಿಸಿದರೆ, ಕಂಪನಿಯು 3,000 ರೂ.ಗಳ ರಿಯಾಯಿತಿ ನೀಡುತ್ತಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ಟಾಪ್ 5 ವಿಶೇಷತೆಗಳನ್ನು ತಿಳಿಯೋಣ.

ಐಕ್ಯೂ 13 ಫೋನ್‌ ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ನೀವು, ಕೇವಲ 999 ರೂ.ಗೆ ಮುಂಗಡ ಬುಕಿಂಗ್ ಮಾಡಬಹುದು. ಈ ಮೊಬೈಲ್ 213 ಗ್ರಾಂ ತೂಕ ಮತ್ತು 8 ಎಂಎಂ ದಪ್ಪ ಹೊಂದಿದೆ. ಫೋನಿನಲ್ಲಿ ಮೂರು 50 ಮೆಗಾಪಿಕ್ಸೆಲ್ ಕ್ಯಾಮೆರಾಗಳು ಲಭ್ಯವಿದೆ. ಇದು ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 6.82 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 6000mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನಾಳೆ iQOO 13 ಫಸ್ಟ್ ಸೇಲ್; 3000 ಡಿಸ್ಕೌಂಟ್.. ಬೆಲೆ, ವಿಶೇಷತೆಗಳೇನು?

ಐಕ್ಯೂ 13 ಬೆಲೆ ಮತ್ತು ಆಫರ್‌ಗಳು

ಐಕ್ಯೂ 13 ಫೋನಿನ 12GB RAM + 256GB ಸ್ಟೋರೇಜ್‌ ರೂಪಾಂತರವನ್ನು 54,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಹಾಗೆಯೇ 16GB RAM + 512GB ಸ್ಟೋರೇಜ್‌ ಆಯ್ಕೆಯ ಬೆಲೆ 59,999 ರೂ. ಆಗಿದೆ. ಕಂಪನಿಯು 3,000 ರೂ.ಗಳ ರಿಯಾಯಿತಿ ನೀಡುತ್ತಿದೆ. ನೀವು, ಎಚ್‌ಡಿಎಫ್‌ಸಿ ಹಾಗೂ ಐಸಿಐಸಿಐ ಬ್ಯಾಂಕ್‌ ಕಾರ್ಡ್‌ ಪಾವತಿ ಮೇಲೆ ಈ ಆಫರ್‌ ಪಡೆಯಬಹುದು. ಡಿಸೆಂಬರ್‌ 11 ರಂದು ಮಧ್ಯಾಹ್ನ 12 ಗಂಟೆಯಿಂದ ಈ ಫೋನ್ ಮಾರಾಟ ಪ್ರಾರಂಭಿಸಲಿದೆ. ನೀವು, ಕಪ್ಪು, ಹಸಿರು, ಬೂದು ಮತ್ತು ಬಿಳಿ ಬಣ್ಣಗಳಲ್ಲಿ ಲಭ್ಯವಿರಲಿದೆ.

ಐಕ್ಯೂ 13 5G: ಟಾಪ್ 5 ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಐಕ್ಯೂ 13 ಮೊಬೈಲ್ 6.82 ಇಂಚಿನ 2K ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 8T LTPO ಪಂಚ್ ಹೋಲ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 1440 x 3168 ಪಿಕ್ಸೆಲ್‌ ರೆಸಲ್ಯೂಶನ್, 144Hz ರಿಫ್ರೆಶ್ ದರ, 4500 ನಿಟ್ಸ್‌ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.

ಪ್ರೊಸೆಸರ್ ಯಾವುದು?

ಐಕ್ಯೂ 13 ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 15 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 12GB ಮತ್ತು 16GB ವರ್ಚುವಲ್ RAM ಹೊಂದಿದೆ.

ಕ್ಯಾಮೆರಾ ಸೆಟಪ್

ಐಕ್ಯೂ 13 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ಐಕ್ಯೂ 13 ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕೇವಲ 10 ನಿಮಿಷದಲ್ಲಿ ಶೇ.40ರಷ್ಟು ಚಾರ್ಜ್ ಮಾಡಬಹುದು ಮತ್ತು 30 ನಿಮಿಷದಲ್ಲಿ ಈ ಮೊಬೈಲ್ ಸಂಪೂರ್ಣವಾಗಿ ಚಾರ್ಜ್ ಆಗಲಿದೆ.

ಇತರೆ ವೈಶಿಷ್ಟ್ಯಗಳು

ಐಕ್ಯೂ 13 ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68/IP69 ರೇಟಿಂಗ್‌ ಪಡೆದಿದೆ. ಈ ಫೋನ್ ಇನ್ ಡಿಸ್ಪ್ಲೇ ಅಲ್ಟ್ರಾಸಾನಿಕ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸಹ ಹೊಂದಿದೆ. ಈ ಫೋನಿನಲ್ಲಿ ಎಐ (AI) ವೈಶಿಷ್ಟ್ಯಗಳು ಲಭ್ಯವಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು 5G, 4G LTE, ವೈ-ಫೈ 7, ಬ್ಲೂಟೂತ್ 5.4, ಎನ್‌ಎಫ್‌ಸಿ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
iQOO 13 First Sale Start Tommorrow via Amazon: check price, availability, offers, specs and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+