Home
ಮೊಬೈಲ್

ಮೊಬೈಲ್ ಪ್ರಿಯರೇ.. ಡಿ.3ಕ್ಕೆ iQOO 13 ಬಿಡುಗಡೆ; ಇಲ್ಲಿವೆ ಟಾಪ್ 5 ಫೀಚರ್ಸ್‌

ಐಕ್ಯೂ (iQOO) ಭಾರತದಲ್ಲಿ ಹೊಸ ಮೊಬೈಲ್‌ ಬಿಡುಗಡೆ ಮಾಡಲು ಸಜ್ಜಾಗಿದೆ. ಇದು ಐಕ್ಯೂ 13 (iQOO 13) ಹೆಸರಿನೊಂದಿಗೆ ಮಾರುಕಟ್ಟೆಗೆ ಬರಲಿದೆ. ಹೌದು, ಕಂಪನಿಯು ಈಗಾಗಲೇ, ಹೊಸ ಐಕ್ಯೂ 13 ಫೋನಿನ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಇದನ್ನು iQOO 12 ಫೋನಿನ ಉತ್ತರಾಧಿಕಾರಿಯಾಗಿ ಪರಿಚಯಿಸುತ್ತಿದೆ. ಈ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ ಹೊಂದಿದೆ. ಬನ್ನಿ, ಬಿಡುಗಡೆಗೆ ಸಿದ್ಧವಾಗಿರುವ ಐಕ್ಯೂ 13 ಫೋನಿನ ಟಾಪ್ 5 ಫೀಚರ್ಸ್‌ಗಳನ್ನು ತಿಳಿಯೋಣ.

ಕಂಪನಿಯು ಡಿಸೆಂಬರ್ 3ರಂದು ಹೊಸ ಐಕ್ಯೂ 13 ಫೋನನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು 6.82 ಇಂಚಿನ ದೊಡ್ಡ ಡಿಸ್ಪ್ಲೇಯನ್ನು ಹೊಂದಿದೆ. ಫೋನಿನಲ್ಲಿ 16GB RAM ಮತ್ತು 1TB ಸ್ಟೋರೇಜ್ ಲಭ್ಯವಿರಲಿದೆ. ಇದರೊಂದಿಗೆ 6150mAh ಬ್ಯಾಟರಿ ಮತ್ತು 120W ಫಾಸ್ಟ್ ಚಾರ್ಜಿಂಗ್ ಸೇರಿಂತೆ ಮುಂತಾದ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಇಲ್ಲಿ ಕೇಳಿ.. ಡಿ.3ಕ್ಕೆ iQOO 13 ಲಾಂಚ್; ಇಲ್ಲಿವೆ ಟಾಪ್ 5 ಫೀಚರ್ಸ್‌

ಐಕ್ಯೂ 13 ಫೋನಿನ ಬೆಲೆ ಎಷ್ಟು?

ಕಮಪನಿಯು ಐಕ್ಯೂ 13 ಫೋನನ್ನು ಚೀನಾದಲ್ಲಿ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 47,200 ರೂ. ಇದೆ. 16 GB RAM + 1 TB ಸ್ಟೋರೇಜ್ ಆಯ್ಕೆಯನ್ನು 61,400 ರೂ.ಗೆ ಬಿಡುಗಡೆ ಮಾಡಲಾಗಿದೆ. ಭಾರತದಲ್ಲಿ ಇದಕ್ಕಿಂತ ಕಡಿಮೆ ಬೆಲೆಗೆ ಪರಿಚಯಿಸುವ ಸಾಧ್ಯತೆಯಿದೆ.

ಅಮೆಜಾನ್‌ ಮೂಲಕ ಐಕ್ಯೂ 13 ಮಾರಾಟ

ಐಕ್ಯೂ ಡಿಸೆಂಬರ್ 3 ರಂದು ಭಾರತದಲ್ಲಿ ಲಾಂಚ್ ಈವೆಂಟ್ ಆಯೋಜಿಸಿದೆ. ಈ ಸಮಾರಂಭದಲ್ಲಿ ಹೊಸ ಐಕ್ಯೂ 13 ಮೊಬೈಲ್ ಅನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡ ಮಾಡಲಿದೆ. ಪ್ರಸ್ತುತ, ಬಿಡುಗಡೆಯ ಸಮಯವನ್ನು ಬಹಿರಂಗಪಡಿಸಿಲ್ಲ. ಈ ಫೋನಿನ ಬಿಡುಗಡೆ ಸಮಾರಂಭವನ್ನು ಐಕ್ಯೂನ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೀಕ್ಷಿಸಬಹುದು. ಬಿಡುಗಡೆ ಬಳಿಕ, ಐಕ್ಯೂ 13 ಮೊಬೈಲ್ ಅಮೆಜಾನ್‌ ಮೂಲಕ ಖರೀದಿಗೆ ಲಭ್ಯವಿರುತ್ತದೆ.

ಐಕ್ಯೂ 13: ಟಾಪ್ 5 ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಐಕ್ಯೂ 13 ಫೋನ್ 6.82 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್ಪ್ಲೇಯನ್ನು ಹೊಂದಿದೆ. ಡಿಸ್ಪ್ಲೇಯು 144Hz ರಿಫ್ರೆಶ್ ದರ, 3168 X 1440 ಪಿಕ್ಸೆಲ್‌ಗಳ ರೆಸಲ್ಯೂಶನ್, 1800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಐಕ್ಯೂ 13 ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ ಹೊಂದಿದೆ. ಇದನ್ನು 3nm ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 15 ಆಧಾರಿತ OriginOS 5 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 24GB RAM ಮತ್ತು 1TB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಕ್ಯಾಮೆರಾ ಸೆಟಪ್

ಐಕ್ಯೂ 13 ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ IMX921 ಕ್ಯಾಮೆರಾ ಹೊಂದಿದೆ. 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ S5KJN1 ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಸೋನಿ IMX816 ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ

ಬ್ಯಾಟರಿ ಮತ್ತು ಚಾರ್ಜಿಂಗ್

ನೂತನ ಐಕ್ಯೂ 13 ಸ್ಮಾರ್ಟ್‌ಫೋನ್ 6150mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 120W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಐಕ್ಯೂ 13 ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ಮತ್ತು IP68 ರೇಟಿಂಗ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ ಫೈ 7, ಬ್ಲೂಟೂತ್ 5.4, ಎನ್‌ಎಫ್‌ಸಿ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಮುಂತಾದ ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
iQOO 13 Smartphone launching on December 3: know Top 5 features. ಐಕ್ಯೂ 13 ಫೋನ್ ಡಿಸೆಂಬರ್ 3 ರಂದು ಬಿಡುಗಡೆಯಾಗಲಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+