iQOO 13 vs Realme GT 7 Pro: ಯಾವ ಫೋನ್ ಉತ್ತಮ? ಬೆಲೆ, ವಿಶೇಷತೆಗಳೇನು?
ಭಾರತದಲ್ಲಿ ಹೊಸ ಫೋನ್‌ಗಳ ಬಿಡುಗಡೆ ಭರಾಟೆ ಜೋರಾಗಿದೆ. ಬಹುನಿರೀಕ್ಷಿತ ಐಕ್ಯೂ 13 (iQOO 13) ಮೊಬೈಲ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ. ವಿಶೇಷವೆಂದರೆ, ಇತ್ತೀಚೆಗೆ ರಿಯಲ್‌ಮಿ ಸಹ ತನ್ನ ರಿಯಲ್‌ಮಿ GT 7 ಪ್ರೊ (Realme GT 7 Pro) ಫೋನನ್ನು ಬಿಡುಗಡೆ ಮಾಡಿದೆ. ಇದರಲ್ಲೂ ಸಹ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಇದೆ. ಎರಡೂ ಮೊಬೈಲ್‌ಗಳು ಸಹ ಒಂದೇ ಬೆಲೆ ಶ್ರೇಣಿಯನ್ನು ಹೊಂದಿವೆ. ಹಾಗಿದ್ರೆ, ಶಕ್ತಿಶಾಲಿ ಪ್ರೊಸೆಸರ್ ಹೊಂದಿರುವ ಈ ಎರಡು ಸ್ಮಾರ್ಟ್‌ಫೋನ್‌ಗಳಲ್ಲಿ ಯಾವುದು ಉತ್ತಮ? ತಿಳಿಯಲು ಮುಂದೆ ಓದಿ.
ಐಕ್ಯೂ 13 5G ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ರಿಯಲ್‌ಮಿ GT7 ಪ್ರೊ ಸಹ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ. ಎರಡೂ ಮೊಬೈಲ್‌ಗಳು ಅಲ್ಯೂಮಿನಿಯಂ ಫ್ರೇಮ್ ಮತ್ತು ಗ್ಲಾಸ್ ಬ್ಯಾಕ್ ವಿನ್ಯಾಸ ಹೊಂದಿವೆ. ರಿಯಲ್‌ಮಿ GT 7 ಪ್ರೊ 8.6 ಎಂಎಂ ದಪ್ಪ ಮತ್ತು 222 ಗ್ರಾಂ ತೂಕವಿದೆ. ಐಕ್ಯೂ 13 213 ಗ್ರಾಂ ತೂಕ ಮತ್ತು 8 ಎಂಎಂ ದಪ್ಪ ಹೊಂದಿದೆ. ಈ ಫೋನ್‌ಗಳ ಬೆಲೆ ಮತ್ತು ಇನ್ನುಳಿದ ವಿಶೇಷತೆಗಳು ಈ ಕೆಳಗಿನಂತಿವೆ.

ಐಕ್ಯೂ 13 5G ಮತ್ತು ರಿಯಲ್‌ಮಿ GT7 ಪ್ರೊ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಐಕ್ಯೂ 13 ಮೊಬೈಲ್ 6.82 ಇಂಚಿನ 2K ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1440 x 3168 ಪಿಕ್ಸೆಲ್ ರೆಸಲ್ಯೂಶನ್, 144Hz ರಿಫ್ರೆಶ್ ದರ, 4500 ನಿಟ್ಸ್ ಬ್ರೈಟ್‌ನೆಸ್ ಹೊಂದಿದೆ. ರಿಯಲ್‌ಮಿ GT7 ಪ್ರೊ ಮೊಬೈಲ್ 6.78 ಇಂಚಿನ 1.5K ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 2780 x 1264 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 6500 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಎರಡೂ ಫೋನ್‌ಗಳು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿವೆ. ಐಕ್ಯೂ 13 ಫೋನ್ 12GB ಮತ್ತು 16GB ವರ್ಚುವಲ್ RAM ನೊಂದಿಗೆ ಬರುತ್ತದೆ. ರಿಯಲ್‌ಮಿ GT7 ಪ್ರೊ ಫೋನ್ 12GB RAM ಮತ್ತು 16GB RAM ಹೊಂದಿದೆ.

ಕ್ಯಾಮೆರಾ ಸೆಟಪ್
ಐಕ್ಯೂ 13 ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ರಿಯಲ್‌ಮಿ GT7 ಪ್ರೊ ಸಹ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಐಕ್ಯೂ 13 ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲ ಪಡೆದಿದೆ. ರಿಯಲ್‌ಮಿ GT7 ಪ್ರೊ ಮೊಬೈಲ್ 5800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಐಕ್ಯೂ 13 ಮತ್ತು ರಿಯಲ್‌ಮಿ GT7 ಪ್ರೊ ಬೆಲೆ
ಐಕ್ಯೂ 13 ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 54,999 ಆಗಿದೆ. 16GB RAM + 512GB ಸ್ಟೋರೇಜ್ ಆಯ್ಕೆಯು 59,999 ರೂ.ಗೆ ಲಭ್ಯವಿದೆ. ಕಂಪನಿಯು 3,000 ರೂ.ಗಳ ರಿಯಾಯಿತಿ ನೀಡುತ್ತಿದೆ.
ರಿಯಲ್‌ಮಿ GT7 ಪ್ರೊ ಸಹ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 59,999 ರೂ. ಆಗಿದೆ. 16GB RAM + 512GB ಸ್ಟೋರೇಜ್ ಆಯ್ಕೆಯು 65,999 ರೂ.ಗೆ ಲಭ್ಯವಿದೆ. ಐಕ್ಯೂ 13 ಫೋನಿಗಿಂತ ಸ್ವಲ್ಪ ದುಬಾರಿಯಾಗಿದೆ. ರಿಯಲ್‌ಮಿ ಸಹ ಈ ಫೋನಿ ಖರೀದಿ ಮೇಲೆ 3,000 ರೂ. ಡಿಸ್ಕೌಂಟ್ ನೀಡುತ್ತಿದೆ.


Click it and Unblock the Notifications







