ಸ್ವಲ್ಪ ಕಾಯಿರಿ! 6400mAh ಬ್ಯಾಟರಿ.. 50MP ಸೋನಿ ಕ್ಯಾಮೆರಾ.. ಬರ್ತಿದೆ ಹೊಸ iQOO ಫೋನ್.. ಯಾವಾಗ ಲಾಂಚ್?
ಐಕ್ಯೂ ಭಾರತದಲ್ಲಿ ಹೊಸ ಮೊಬೈಲ್ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಕಂಪನಿಯು ಇತ್ತೀಚೆಗೆ ತನ್ನ ಐಕ್ಯೂ ನಿಯೋ 10 (iQOO Neo 10) ಸರಣಿಯನ್ನು ಚೀನಾದಲ್ಲಿ ಪರಿಚಯಿಸಿದೆ. ಇದರಲ್ಲಿ ಐಕ್ಯೂ ನಿಯೋ 10 (iQOO Neo 10) ಮತ್ತು ಐಕ್ಯೂ ನಿಯೋ 10 ಪ್ರೊ (iQOO Neo 10 Pro) ಸ್ಮಾರ್ಟ್‌ಫೋನ್‌ಗಳನ್ನು ರಿಲೀಸ್ ಮಾಡಿದೆ. ಈ ಎರಡು ಮೊಬೈಲ್‌ಗಳು ಭಾರತಕ್ಕೆ ಯಾವಾಗ ಬರುತ್ತವೆ ಎಂದು ಕಂಪನಿ ತಿಳಿಸಿಲ್ಲ. ಆದರೆ, ಇವುಗಳಿಗಿಂತ ಮೊದಲೇ ಭಾರತದಲ್ಲಿ ಐಕ್ಯೂ ನಿಯೋ 10R 5G (iQOO Neo 10R 5G) ಫೋನ್ ಲಾಂಚ್ ಆಗಲಿದೆ.
ಐಕ್ಯೂ ನಿಯೋ 10R 5G ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಲಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8S ಜೆ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 256GB ಸ್ಟೋರೇಜ್, 6400mAh ಬ್ಯಾಟರಿ ಮತ್ತು 80W ಫಾಸ್ಟ್ ಚಾರ್ಜಿಂಗ್ ಒಳಗೊಂಡಿರುತ್ತದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಐಕ್ಯೂ ನಿಯೋ 10R 5G ಬೆಲೆ
ಐಕ್ಯೂ ನಿಯೋ 10R 5G ಮೊಬೈಲ್ ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಈ ಫೋನನ್ನು ಬಜೆಟ್ ಬೆಲೆಯಲ್ಲಿ ಪರಿಚಯಿಸಲಾಗುವುದು. ಅದರಂತ ಐಕ್ಯೂ ನಿಯೋ 10R 5G ಸ್ಮಾರ್ಟ್‌ಫೋನಿನ ಬೆಲೆ 30 ಸಾವಿರಕ್ಕಿಂತ ಕಡಿಮೆ ಇರುತ್ತದೆ ಎಂದು ಹೇಳಲಾಗಿದೆ. ಈ ಫೋನ್ 25,999 ರಿಂದ 29,999 ರೂ. ಬೆಲೆಗೆ ಮಾರಾಟವಾಗುವ ಸಾಧ್ಯತೆಯಿದೆ.
ಐಕ್ಯೂ ನಿಯೋ 10R 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಐಕ್ಯೂ ನಿಯೋ 10R 5G ಫೋನ್ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿರುತ್ತದೆ. ಇದು ಪಂಚ್ ಹೋಲ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 144Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ತಂತ್ರಜ್ಞಾನ ಸಹ ಹೊಂದಿರಲಿದೆ.
ಪ್ರೊಸೆಸರ್ ಸಾಮರ್ಥ್ಯ
ಐಕ್ಯೂ ನಿಯೋ 10R 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8S ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ.
ಸ್ಟೋರೇಜ್ ಆಯ್ಕೆ
ಮುಂಬರುವ ಐಕ್ಯೂ ನಿಯೋ ಫೋನನ್ನು ಎರಡು RAM ರೂಪಾಂತರಗಳಲ್ಲಿ ಬಿಡುಗಡೆ ಮಾಡಬಹುದು. ಫೋನಿನ ಮೂಲ ರೂಪಾಂತರವು 8GB RAM ಹೊಂದಿರುತ್ತದೆ. ಹಾಗೆಯೇ ಟಾಂಪ್ ವೇರಿಯಂಟ್ 12GB RAM ಹೊಂದಿರಲಿದೆ ಎಂದು ತಿಳಿದುಬಂದಿದೆ. ವರದಿಯ ಪ್ರಕಾರ, ಈ ಎರಡೂ ರೂಪಾಂತರಗಳನ್ನು 256GB ಸ್ಟೋರೇಜ್ ಆಯ್ಕೆ ಒಳಗೊಂಡಿರುತ್ತವೆ.
ಡ್ಯುಯಲ್ ಕ್ಯಾಮೆರಾ ಸೆಟಪ್
ಐಕ್ಯೂ ನಿಯೋ 10R 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಸೋನಿ ಕ್ಯಾಮೆರಾ ಇರುತ್ತದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಐಕ್ಯೂ ನಿಯೋ 10R 5G ಸ್ಮಾರ್ಟ್‌ಫೋನ್ 6400mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನ್‌ನಲ್ಲಿ 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು.


Click it and Unblock the Notifications








