Home
ಮೊಬೈಲ್

iQOO Neo 10R: ಬಿಡುಗಡೆಯಾಗುವ ಮೊದಲೇ ಫೀಚರ್ಸ್ ಬಹಿರಂಗ; ಬೆಲೆಯೂ ಲೀಕ್.. ಲಾಂಚ್ ಯಾವಾಗ?

ಬಹುನಿರೀಕ್ಷಿತ ಐಕ್ಯೂ ನಿಯೋ 10R (iQOO Neo 10R) ಮೊಬೈಲ್ ಮಾರ್ಚ್ 11 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಇದು ದೇಶೀಯ ಮಾರುಕಟ್ಟೆಗೆ ಬರುತ್ತಿರುವ ನಿಯೋ 10 ಸರಣಿಯ ಮೊದಲ ಸ್ಮಾರ್ಟ್‌ಫೋನ್‌ ಆಗಿದೆ. ಈ ಫೋನ್ ಬಿಡುಗಡೆ ಬಳಿಕ ಅಧಿಕೃತ ವೆಬ್‌ಸೈಟ್‌ ಮತ್ತು ಅಮೆಜಾನ್‌ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಐಕ್ಯೂ ಈ ಹೊಸ ಫೋನಿಗೆ ಸಂಬಂಧಿಸಿದ ಮಾಹಿತಿಯನ್ನು ನಿರಂತರವಾಗಿ ಬಹಿರಂಗಪಡಿಸುತ್ತಿದೆ. ಇದೀಗ, ಐಕ್ಯೂ ನಿಯೋ 10R ಫೋನಿನ ವಿಶೇಷತೆಗಳನ್ನು ಬಿಡುಗಡೆಗೂ ಮುನ್ನವೇ ಬಹಿರಂಗಪಡಿಸಲಾಗಿದೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಐಕ್ಯೂ ನಿಯೋ 10R ಫೋನ್ 30,000 ರೂ.ಗಳ ಬಜೆಟ್‌ ವಿಭಾಗದಲ್ಲಿ ಬಿಡುಗಡೆಯಾಗಲಿದೆ. ಇದು ಬೆಲೆಗೆ ತಕ್ಕಂತೆ ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿರುತ್ತದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್‌ನೊಂದಿಗೆ ರಿಲೀಸ್ ಆಗಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿರುತ್ತದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್ಪ್ಲೇ ಹೊಂದಿರುತ್ತದೆ. ಇದು 6400mAh ಸಾಮರ್ಥ್ಯದ ಬಿಗ್ ಬ್ಯಾಟರಿಯೊಂದಿಗೆ ಬರುತ್ತದೆ. ಜೊತೆಗೆ 12GB + 256GB ಸ್ಟೋರೇಜ್, 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾ.11 ರಂದು iQOO Neo 10R ಬಿಡುಗಡೆ; ಟಾಪ್ ಫೀಚರ್ಸ್, ಬೆಲೆ ಸೋರಿಕೆ!

ಐಕ್ಯೂ ನಿಯೋ 10R ಬೆಲೆ (ನಿರೀಕ್ಷಿತ)

ಐಕ್ಯೂ ನಿಯೋ 10R ಬೆಲೆ ಈಗಾಗಲೇ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಟಿಪ್‌ಸ್ಟಾರ್ ಈ ಫೋನಿನ 12GB ರೂಪಾಂತರದ ಬೆಲೆಯನ್ನು ಬಹಿರಂಗಪಡಿ‍ಸಿದೆ. ಈ ಮೊಬೈಲ್ ಸುಮಾರು 35,999 ರೂ. ಬೆಲೆಯಲ್ಲಿ ಲಾಂಚ್ ಆಗಲಿದೆ. ಇದು ಫೋನಿನ 12GB + 256GB ರೂಪಾಂತರದ ದರವಾಗಿದೆ. ಈ ಐಕ್ಯೂ ಮೊಬೈಲ್ ರಿಯಾಯಿತಿ ಮತ್ತು ಬ್ಯಾಂಕ್ ಆಫರ್‌ಗಳೊಂದಿಗೆ 30 ಸಾವಿರಕ್ಕಿಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ. ಈ ಮೊಬೈಲ್ ರೇಜಿಂಗ್ ಬ್ಲೂ ಮತ್ತು ಮೂನ್‌ಲೈಟ್ ಟೈಟಾನಿಯಂ ಬಣ್ಣಗಳಲ್ಲಿ ಬರುತ್ತದೆ. ಈ ವಿಭಾಗದಲ್ಲಿ ಅತ್ಯಂತ ವೇಗದ ಸ್ಮಾರ್ಟ್‌ಫೋನ್ ಆಗಲಿದೆ.

ಐಕ್ಯೂ ನಿಯೋ 10R ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಐಕ್ಯೂ ನಿಯೋ 10R ಫೋನ್ 6.78 ಇಂಚಿನ 1.5K ಅಮೋಲೆಡ್ ಡಿಸ್ಪ್ಲೇ ಹೊಂದಿರಲಿದೆ. ಇದು 144Hz ರಿಫ್ರೆಶ್ ದರದ ಬೆಂಬಲದೊಂದಿಗೆ ಬರುವ ನಿರೀಕ್ಷೆಯಿದೆ.

ಪ್ರೊಸೆಸರ್ ಸಾಮರ್ಥ್ಯ

ಐಕ್ಯೂ ನಿಯೋ 10R ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8s ಜೆನ್ 3 ಪ್ರೊಸೆಸರ್ ಹೊಂದಿರಲಿದೆ. ಈ ಫೋನ್ ಆಂಡ್ರಾಯ್ಡ್‌ 15 (Android 15) ಆಧಾರಿತ Funtouch ಓಸ್‌ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ 8GB + 256GB ಮತ್ತು 12GB + 256GB ಸ್ಟೋರೇಜ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ಇದು 8GB + 128GB ರೂಪಾಂತರದಲ್ಲೂ ಬರಬಹುದು.

ಮಾ.11 ರಂದು iQOO Neo 10R ಬಿಡುಗಡೆ; ಟಾಪ್ ಫೀಚರ್ಸ್, ಬೆಲೆ ಸೋರಿಕೆ!

ಕ್ಯಾಮೆರಾ ಸೆಟಪ್

ಐಕ್ಯೂ ನಿಯೋ 10R ಸ್ಮಾರ್ಟ್‌ಫೋನ್ OIS ಬೆಂಬಲದೊಂದಿದೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಹೊಂದಿರುತ್ತದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇರಲಿದೆ. ಈ ಫೋನ್ 4K 60fps ವಿಡಿಯೋಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನೂ ಐಕ್ಯೂ ನಿಯೋ 9 ಪ್ರೊ ಮೊಬೈಲ್ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಐಕ್ಯೂ ನಿಯೋ 10R ಫೋನ್ 6400mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆಯಾಗಲಿದೆ. ಇದು ಬೃಹತ್ ಬ್ಯಾಟರಿ ಹೊಂದಿರುವ ಫೋನ್‌ಗಳಲ್ಲಿ ಒಂದಾಗಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು. ಈ ವಿಭಾಗದಲ್ಲಿ ಅತ್ಯಂತ ತೆಳುವಾದ ಫೋನ್ ಆಗಿದೆ. ಇದು ಕೇವಲ 7.98 ಎಂಎಂ ದಪ್ಪ ಇರುತ್ತದೆ.

Best Mobiles in India

English summary
iQOO Neo 10R specifications confirmed ahead of India launch: know what to expect
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+