ಜಿಯೋ ಫೋನ್ 2ಗೆ ಸೆಡ್ಡು: ರೂ.2500ಕ್ಕೆ ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್...!

|

ಭಾರತೀಯ ಮಾರುಕಟ್ಟೆಯಲ್ಲಿ ಬೆಸಿಕ್ ಸ್ಮಾರ್ಟ್‌ಫೋನ್‌ಗಳ ಬೇಡಿಕೆಯೂ ಅಧಿಕವಾಗಿರುವ ಹಿನ್ನಲೆಯಲ್ಲಿ ಗೂಗಲ್ ಭಾರತೀಯರಿಗಾಗಿಯೇ ನಿರ್ಮಿಸಿದ ಆಂಡ್ರಾಯ್ಡ್ ಗೋ ಆವೃತ್ತಿಯಲ್ಲಿ ಕಾರ್ಯನಿರ್ವಹಿಸುವ ಸ್ಮಾರ್ಟ್‌ಫೋನ್ ವೊಂದು ಭಾರತೀಯ ಮಾರುಕಟ್ಟೆಯಲ್ಲಿ ಲಾಂಚ್ ಆಗಲಿದೆ. ಐ ಟೆಲ್ ಕಂಪನಿಯೂ ಜಿಯೋ ಫೋನಿಗೆ ಸೆಡ್ಡು ಹೊಡೆಯುವ ಸಲುವಾಗಿ ಅದೇ ಬೆಲೆಗೆ ಐಟೆಲ್ A22 ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲಿದೆ ಎನ್ನಲಾಗಿದೆ.

ಜಿಯೋ ಫೋನ್ 2ಗೆ ಸೆಡ್ಡು: ರೂ.2500ಕ್ಕೆ ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್...!

ಈಗಾಗಲೇ ಮಾರುಕಟ್ಟೆಯಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್‌ಗಳು ಲಾಂಚ್ ಆಗುತ್ತಿದೆ. ಈ ಹಿನ್ನಲೆಯಲ್ಲಿ ಐಟೆಲ್ A22 ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ ಅವುಗಳಿಂತ ಕಡಿಮೆ ಬೆಲೆಗೆ ಲಾಂಚ್ ಆಗುವ ಸಾಧ್ಯತೆ ಇದ್ದು, ಮಾರುಕಟ್ಟೆಯಲ್ಲಿ ದೊಡ್ಡ ಪ್ರಮಾಣದ ಬೇಡಿಕೆಯನ್ನು ಸೃಷ್ಠಿಸಿಕೊಳ್ಳಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಐಟೆಲ್ A22 ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ ಕುರಿತ ಮಾಹಿತಿಯೂ ಮುಂದಿದೆ.

ಬೆಲೆ:

ಬೆಲೆ:

ಮಾರುಕಟ್ಟೆಯಲ್ಲಿ ಬೆಲೆಯ ಮೂಲಕವೇ ಗುರುತಿಸಿಕೊಳ್ಳಲು ಮುಂದಾಗಿರುವ ಐಟೆಲ್ A22 ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ ರೂ.2500ಕ್ಕೆ ಲಾಂಚ್ ಆಗಲಿದೆ ಎನ್ನುವ ಮಾಹಿತಿಯೂ ಲೀಕ್ ಆಗಿದೆ. ಮಾರುಕಟ್ಟೆಯಲ್ಲಿ ಜಿಯೋ ಫೋನಿಗೆ ಹೊಡೆತವನ್ನು ನೀಡಿ. ಆದರ ಮಾರುಕಟ್ಟೆಯನ್ನು ಆಕ್ರಮಿಸುವ ಸಲುವಾಗಿ ಯೋಜನೆಯನ್ನು ರೂಪಿಸಿದೆ ಎನ್ನಲಾಗಿದೆ.

ಆಂಡ್ರಾಯ್ಡ್ ಗೊ:

ಆಂಡ್ರಾಯ್ಡ್ ಗೊ:

ಐಟೆಲ್ A22 ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ ಒರಿಯೋ 8.1 (ಗೋ ಆವೃತ್ತಿ)ಯಲ್ಲಿ ಕಾರ್ಯನಿರ್ವಹಿಸಲಿದ್ದು, ಬಳಕೆದಾರರಿಗೆ ದೊಡ್ಡ ಮಟ್ಟದಲ್ಲಿ ಸಹಾಯವನ್ನು ಮಾಡಲಿದೆ. ಇದಲ್ಲದೇ ಈ ಸ್ಮಾರ್ಟ್‌ಫೋನಿನಲ್ಲಿ 1GB RAM ಮತ್ತು 8 GB ಇಂಟರ್‌ನಲ್ ಮೆಮೊರಿಯನ್ನು ಕಾಣಬಹುದಾಗಿದೆ. ಅಲ್ಲದೇ ಮೆಮೊರಿ ಕಾರ್ಡ್ ಹಾಕಿಕೊಳ್ಳುವ ಅವಕಾಶವು ಇದರಲ್ಲಿದೆ.

5  ಇಂಚಿನ ಡಿಸ್‌ಪ್ಲೇ:

5 ಇಂಚಿನ ಡಿಸ್‌ಪ್ಲೇ:

ಐಟೆಲ್ A22 ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನ್ 5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, FWVGA ಗುಣಮಟ್ಟದಾಗಿದೆ. ಇಲ್ಲಿ ಬಳಕೆದಾರರಿಗೆ ಗುಣಮಟ್ಟದಲ್ಲಿ ರಾಜಿಯಾಗಬೇಕಾಗಿದೆ. ಬಜೆಟ್ ಬೆಲೆಯಾಗಿರುವ ಕಾರಣದಿಂದಾಗಿ ಬಳಕೆದಾರರು ಒಪ್ಪಿಕೊಳ್ಳಲೇ ಬೇಕಾಗಿದೆ.

ಕ್ಯಾಮೆರಾ:

ಕ್ಯಾಮೆರಾ:

ಐಟೆಲ್ A22 ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನಿನ ಹಿಂಭಾಗದಲ್ಲಿ 5 MP ಕ್ಯಾಮೆರಾವನ್ನು ಅಳವಡಿಸಲಾಗಿದ್ದು, ಇದರೊಂದಿಗೆ LED ಫ್ಲಾಷ್ ಲೈಟ್ ಅನ್ನು ಕಾಣಬಹುದಾಗಿದೆ. ಅಲ್ಲದೇ ಮುಂಭಾಗದಲ್ಲಿ 2 MP ಕ್ಯಾಮೆರಾವನ್ನು ನೀಡಲಾಗಿದ್ದು, ಇದರೊಂದಿಗೆ ಸಾಫ್ಟ್ ಲೈಟ್ ಅನ್ನು ಅಳವಡಿಸಲಾಗಿದೆ.

ಉತ್ತಮ ಬ್ಯಾಟರಿ:

ಉತ್ತಮ ಬ್ಯಾಟರಿ:

ಐಟೆಲ್ A22 ಆಂಡ್ರಾಯ್ಡ್ ಗೋ ಸ್ಮಾರ್ಟ್‌ಫೋನಿನಲ್ಲಿ ಉತ್ತಮ ಬ್ಯಾಟರಿಯನ್ನು ಕಾಣಬಹುದಾಗಿದ್ದು, 2400mAh ಬ್ಯಾಟರಿಯನ್ನು ಇದರಲ್ಲಿ ಅಳವಡಿಸಲಾಗಿದೆ. ಇದರೊಂದಿಗೆ ಬಳಕೆದಾರರು ಉತ್ತಮ ವಿನ್ಯಾಸವನ್ನು ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
itel A22 Android Go smartphone to launch soon in India. to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X