ಐಟೆಲ್ ಗತ್ತು..! ಹೊಸ itel A95 5G ಲಾಂಚ್; 50MP ಕ್ಯಾಮೆರಾ.. 5000mAh ಬ್ಯಾಟರಿ.. ಅತ್ಯಂತ ಅಗ್ಗದ ಬೆಲೆ
ಐಟೆಲ್ ಸದ್ದಿಲ್ಲದೇ ಭಾರತದಲ್ಲಿ ಹೊಸ 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದನ್ನು 10 ಸಾವಿರಕ್ಕಿಂತ ಕಡಿಮೆ ಬೆಲೆಗೆ ಪರಿಚಯಿಸಲಾಗಿದೆ. ಹೌದು, ಐಟೆಲ್ A95 5G (itel A95 5G) ಮೊಬೈಲ್ ಅಧಿಕೃತವಾಗಿ ದೇಶೀಯ ಮಾರುಕಟ್ಟೆಯಲ್ಲಿ ಎಂಟ್ರಿ ಕೊಟ್ಟಿದೆ. ಕಡಿಮೆ ಬಜೆಟ್‌ನಲ್ಲಿ 5G ಸಂಪರ್ಕ, ಉತ್ತಮ ಕಾರ್ಯಕ್ಷಮತೆ ಮತ್ತು ಆಕರ್ಷಕ ವಿನ್ಯಾಸ ಹೊಂದಿರುವ ಫೋನ್ ಹುಡುಕುತ್ತಿರುವ ಬಳಕೆದಾರರಿಗಾಗಿ, ಇದು ಸೂಕ್ತ ಆಯ್ಕೆಯಾಗಿದೆ. ಬನ್ನಿ, ಹೊಸ ಐಟೆಲ್ A95 5G ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಭಾರತದ ಅತ್ಯಂತ ಕೈಗೆಟುಕುವ 5G ಸ್ಮಾರ್ಟ್‌ಫೋನ್‌ಗಳಲ್ಲಿ ಐಟೆಲ್ A95 5G ಸಹ ಒಂದಾಗಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು 6.6 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 5,000mAh ಬ್ಯಾಟರಿ ಮತ್ತು 10W ವೇಗದ ಚಾರ್ಜಿಂಗ್, 6GB RAM + 128GB ಸ್ಟೋರೇಜ್ ಒಳಗೊಂಡಿದೆ.

ಐಟೆಲ್ A95 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಐಟೆಲ್ A95 5G ಸ್ಮಾರ್ಟ್‌ಫೋನ್ 6.6 ಇಂಚಿನ ಎಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು ವಾಟರ್‌ಡ್ರಾಪ್ ನಾಚ್ ವಿನ್ಯಾಸ, 90% ಸ್ಕ್ರೀನ್ ಟು ಬಾಡಿ ಅನುಪಾತ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಇದು ದೈನಂದಿನ ಬಳಕೆ ಮತ್ತು ವಿಡಿಯೋ ಸ್ಟ್ರೀಮಿಂಗ್‌ಗೆ ಉತ್ತಮವಾಗಿದೆ.
ಪ್ರೊಸೆಸರ್ ಸಾಮರ್ಥ್ಯ
ಐಟೆಲ್ A95 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಇದು 2.4GHz ಆಕ್ಟಾ ಕೋರ್ ಸಿಪಿಯು ಆಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಪೋನ್ 4GB RAM ಮತ್ತು 6GB RAM ನೊಂದಿಗೆ ಬರುತ್ತದೆ. ಈ ಫೋನಿನಲ್ಲಿ 128GB ಆಂತರಿಕ ಸ್ಟೋರೇಜ್ ಆಯ್ಕೆ ಲಭ್ಯವಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.
ಕ್ಯಾಮೆರಾ ಸೆಪಟ್
ಐಟೆಲ್ A95 5G ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಸಹ ಲಭ್ಯವಿದೆ. ಈ ಕ್ಯಾಮೆರಾ ಸೆಟಪ್ ಡಿಜಿಟಲ್ ಜೂಮ್, ಆಟೋ ಫ್ಲ್ಯಾಷ್, ಫೇಸ್ ಡಿಟೆಕ್ಷನ್ ಮತ್ತು ಟಚ್ ಟು ಫೋಕಸ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಇದು 1080p ವಿಡಿಯೋ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಐಟೆಲ್ A95 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 10W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಬ್ಯಾಟರಿ ಒಂದು ದಿನಕ್ಕಿಂತ ಹೆಚ್ಚಿನ ಬ್ಯಾಕಪ್ ಒದಗಿಸುತ್ತದೆ ಮತ್ತು ವೇಗದ ಚಾರ್ಜಿಂಗ್ ಮೂಲಕ ತ್ವರಿತವಾಗಿ ಚಾರ್ಜ್ ಆಗುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಬ್ಲೂಟೂತ್, ವೈ-ಫೈ, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಐಟೆಲ್ A95 5G ಬೆಲೆ
ಐಟೆಲ್ A95 5G ಫೋನಿನ 4GB RAM + 128GB ಸ್ಟೋರೇಜ್ ರೂಪಾಂತರವನ್ನು 9,599 ರೂ.ಗೆ ಬಿಡುಗಡೆ ಮಾಡಲಾಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 9,999 ರೂ. ಆಗಿದೆ. ನೀವು, ಆನ್‌ಲೈನ್ ಮತ್ತು ಆಫ್‌ಲೈನ್ ಅಂಗಡಿಗಳಿಂದ ಈ ಹೊಸ ಐಟೆಲ್ ಫೋನನ್ನು ಖರೀದಿಸಬಹುದು.


Click it and Unblock the Notifications








