Lava Agni 3 5G ಫೋನ್ ಇಷ್ಟವಿಲ್ಲವೇ?..ಇಲ್ಲಿವೆ ನೋಡಿ ವಾವ್ ಎನಿಸುವ ಫೋನ್‌ಗಳು!
ಸ್ವದೇಶಿ ಮೊಬೈಲ್ ಬ್ರ್ಯಾಂಡ್ ಖ್ಯಾತಿಯ ಲಾವಾ (Lava) ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ಲಾವಾ ಅಗ್ನಿ 3 (Lava Agni 3 5G) ಮೊಬೈಲ್ ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಲಾವಾ ಅಗ್ನಿ 3 ಫೋನ್ ಬಜೆಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಇದೇ ಅಕ್ಟೋಬರ್ 9 ರಂದು ಫಸ್ಟ್ ಸೇಲ್ ಪ್ರಾರಂಭ ಮಾಡಲಿದೆ. ಇದು ಡ್ಯುಯಲ್ ಸ್ಕ್ರೀನ್ ಜೊತೆಗೆ ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳೆದಿದೆ. ಅದಾಗ್ಯೂ, ನಿಮಗೆ ಲಾವಾ ಅಗ್ನಿ 3 (Lava Agni 3 5G) ಮೊಬೈಲ್‌ಗೆ ಸಮಾನವಾದ ಇತರೆ ಪರ್ಯಾಯ ಮೊಬೈಲ್‌ಗಳು ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯ ಇವೆ.
ಹೌದು, ಪ್ರಸ್ತುತ ಬಜೆಟ್ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಫೀಚರ್ಸ್ ಮೊಬೈಲ್‌ಗಳಿಗೆ ಮಾರುಕಟ್ಟೆಯಲ್ಲಿ ಡಿಮ್ಯಾಂಡ್ ಇದೆ. ಈ ನಿಟ್ಟಿನಲ್ಲಿ ಮೊಬೈಲ್ ಕಂಪನಿಗಳು ಕೂಡಾ ಬಜೆಟ್ ವಿಭಾಗದಲ್ಲಿ ಅತ್ಯುತ್ತಮ ಫೋನ್‌ಗಳನ್ನು ಬಿಡುಗಡೆ ಮಾಡುತ್ತಾ ಮುನ್ನಡೆದಿವೆ. ಈ ಸಾಲಿಗೆ ಲಾವಾದ ಲಾವಾ ಅಗ್ನಿ 3 (Lava Agni 3 5G) ಕೂಡಾ ಸೇರ್ಪಡೆ ಎನ್ನಬಹುದು. ಆದರೆ ಮಾರುಕಟ್ಟೆಯಲ್ಲಿ ಇದಕ್ಕೆ ಟಾಂಗ್ ನೀಡುವ ಇತರೆ ಪರ್ಯಾಯ ಮೊಬೈಲ್‌ಗಳ ಆಯ್ಕೆ ಸಹ ಗ್ರಾಹಕರಿಗೆ ಲಭ್ಯ ಇವೆ. ಹಾಗಾದರೇ ಲಾವಾ ಅಗ್ನಿ 3 ಫೋನ್‌ಗೆ ಎರಡು ಉತ್ತಮ ಪರ್ಯಾಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮೊಟೊರೊಲಾ ಎಡ್ಜ್ 50 ಫ್ಯೂಜನ್ ಮೊಬೈಲ್
ಮೊಟೊರೊಲಾ ಎಡ್ಜ್ 50 ಫ್ಯೂಜನ್ (Motorola Edge 50 Fusion) ಮೊಬೈಲ್ 6.7 ಇಂಚಿನ 3D ಕರ್ವ್ಡ್ pOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದರ ಡಿಸ್‌ಪ್ಲೇಯು 2400 × 1080p ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಅಲ್ಲದೇ ಇದು ಕ್ವಾಲ್ಕಮ್ ಸ್ನಾಪ್ಡ್ರಾಗನ್ 7s ಜೆನ್ 3 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ.
ಅಲ್ಲದೇ ಈ ಫೋನ್ ಹಿಂಭಾಗದಲ್ಲಿ ಇದು ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಹಾಗೆಯೇ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 68W ಟರ್ಬೋ ಪವರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ವಿವೋ T3 ಪ್ರೊ 5G ಮೊಬೈಲ್
ವಿವೋ T3 ಪ್ರೊ 5G (vivo T3 Pro 5G) ಮೊಬೈಲ್ 6.67 ಇಂಚಿನ 3D ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ.
ಹಾಗೆಯೇ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಒದಗಿಸಲಾಗಿದೆ. ಜೊತೆಗೆ 5500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.


Click it and Unblock the Notifications








