ಹೊಸ Lava ಫೋನ್ ಸೇಲ್ ಶುರು; 2000 ಡಿಸ್ಕೌಂಟ್.. ಅಚ್ಚರಿ ಫೀಚರ್ಸ್.. ಬೆಲೆಯೂ ಕಡಿಮೆ
ಲಾವಾ ಕಂಪನಿಯು ಇತ್ತೀಚೆಗೆ ಲಾವಾ ಬ್ಲೇಜ್ ಡ್ಯುವೋ 5G (Lava Blaze Duo 5G) ಫೋನನ್ನು ಬಿಡುಗಡೆ ಮಾಡಿದೆ. ಇದು ಡಬಲ್ ಡಿಸ್ಪ್ಲೇ ಹೊಂದಿರುವ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಆಗಿದೆ. ಇದು ತನ್ನ ಸ್ಟೈಲಿಶ್ ಲುಕ್ ಮತ್ತು ವೈಶಿಷ್ಟ್ಯಗಳೊಂದಿಗೆ ಮೊಬೈಲ್ ಪ್ರಿಯರನ್ನು ಆಕರ್ಷಿಸುತ್ತಿದೆ. ಅಂದಹಾಗೆ, ಈ ಫೋನ್ ಇಂದಿನಿಂದ (ಡಿಸೆಂಬರ್ 20) ಖರೀದಿಗೆ ಲಭ್ಯವಿದೆ. ನೀವು, ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ ರಿಯಾಯಿತಿಯೊಂದಿಗೆ ಖರೀದಿಸಬಹುದು. ಬನ್ನಿ, ಈ ಹೊಸ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಕಂಪನಿಯು ಲಾವಾ ಬ್ಲೇಜ್ ಡ್ಯುವೋ 5G ಫೋನನ್ನು ಎರಡು ಸ್ಟೋರೇಜ್ ರೂಪಾಂತರದಲ್ಲಿ ಮಾರಾಟ ಮಾಡುತ್ತಿದೆ. ಈ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಹೊಂದಿದೆ. ಫೋನಿನಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ, 16GB RAM + 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 33W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟ ಪ್ರಾರಂಭಿಸಿದೆ.

ಲಾವಾ ಬ್ಲೇಜ್ ಡ್ಯುವೋ 5G ಬೆಲೆ ಮತ್ತು ಆಫರ್‌ಗಳು
6GB + 128GB ಸ್ಟೋರೇಜ್ ಬೆಲೆ = 16,999 ರೂ.
8GB + 128GB ಸ್ಟೋರೇಜ್ ಬೆಲೆ = 17,999 ರೂ.
ಲಾವಾ ಬ್ಲೇಜ್ ಡ್ಯುವೋ 5G ಫೋನಿನ ಆರಂಭಿಕ ಬೆಲೆ 16,999 ರೂ. ಆಗಿದೆ. ಕಂಪನಿಯು ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೇಲೆ 2,000 ರೂ.ಗಳ ರಿಯಾಯಿತಿ ನೀಡುತ್ತಿದೆ. ನೀವು, ಡಿಸ್ಕೌಂಟ್‌ನೊಂದಿಗೆ 14,999 ರೂ. ಮತ್ತು 15,999 ರೂ.ಗೆ ಈ ಮೊಬೈಲ್ ಖರೀದಿಸಬಹುದು. ಈ ಫೋನ್ ಇಂದಿನಿಂದ (ಡಿ.20) ಅಮೆಜಾನ್‌ನಲ್ಲಿ ಲಭ್ಯವಿದೆ. ನೀವು, ಸೆಲೆಸ್ಟಿಯಲ್ ಬ್ಲೂ ಮತ್ತು ಆರ್ಕ್ಟಿಕ್ ವೈಟ್ ಬಣ್ಣಗಳಲ್ಲಿ ಕೊಳ್ಳಬಹುದು.
ಲಾವಾ ಬ್ಲೇಜ್ ಡ್ಯುವೋ 5G ಫೀಚರ್ಸ್
ಡಿಸ್ಪ್ಲೇ ಹೇಗಿದೆ
ಲಾವಾ ಬ್ಲೇಜ್ ಡ್ಯುವೋ 5G ಫೋನ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ 3D ಕರ್ವ್ ಅಮೋಲೆಡ್ ಮುಖ್ಯ ಡಿಸ್ಪ್ಲೇಯನ್ನು ಹೊಂದಿದೆ. ಇದು 1080 x 2400 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲ ಪಡೆದಿದೆ. ಈ ಫೋನಿನಲ್ಲಿ 1.58 ಇಂಚಿನ ದ್ವಿತೀಯ ಡಿಸ್ಲೇ ಸಹ ಇದೆ. ಇದು 228x 460 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಹೊಂದಿದೆ.
ಪ್ರೊಸೆಸರ್ ಯಾವುದು?
ಲಾವಾ ಬ್ಲೇಜ್ ಡ್ಯುವೋ 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7025 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ. ಇದು ಆಂಡ್ರಾಯ್ಡ್ 15 ಸಫೋರ್ಟ್ ಸಹ ಹೊಂದಿದೆ. ಈ ಫೋನ್ 8GB RAM + 8GB ವರ್ಚುವಲ್ RAM ಮತ್ತು 128GB ಸ್ಟೋರೇಜ್ ಹೊಂದಿದೆ.

64 ಮೆಗಾಪಿಕ್ಸೆಲ್ ಕ್ಯಾಮೆರಾ
ಲಾವಾ ಬ್ಲೇಜ್ ಡ್ಯುವೋ 5G ಮೊಬೈಲ್ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಬ್ಯಾಕಪ್ ಹೇಗಿದೆ?
ಕಂಪನಿಯು ಲಾವಾ ಬ್ಲೇಜ್ ಡ್ಯುವೋ 5G ಫೋನನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಕಲ್ಪಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಲಾವಾ ಬ್ಲೇಜ್ ಡ್ಯುವೋ 5G ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಡ್ಯುಯಲ್ ಸಿಮ್ 5G, 4G VoLTE, ವೈ-ಫೈ 6E, ಬ್ಲೂಟೂತ್ 5.4 ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








