ಸದ್ದಿಲ್ಲದೆ Lava Blaze Duo 5G ಲಾಂಚ್; ಡಬಲ್ ಡಿಸ್ಪ್ಲೇ.. 64MP ಕ್ಯಾಮೆರಾ.. ಕಡಿಮೆ ಬೆಲೆ!
ಲಾವಾ ಸದ್ದಿಲ್ಲದೆ ಹೊಸ 5G ಫೋನನ್ನು ಬಿಡುಗಡೆ ಮಾಡಿದೆ. ಇದು ಡಬಲ್ ಡಿಸ್ಪ್ಲೇ ಹೊಂದಿರುವ ಕೈಗೆಟುಕುವ ಮೊಬೈಲ್ ಆಗಿದೆ. ಹೌದು, ಕಂಪನಿಯು ಲಾವಾ ಬ್ಲೇಜ್ ಡ್ಯುವೋ 5G (Lava Blaze Duo 5G) ಫೋನನ್ನು ಭಾರತದಲ್ಲಿ ಲೋಕಾರ್ಪಣೆ ಮಾಡಿದೆ. ಈ ಮೂಲಕ ತನ್ನ ಗ್ರಾಹಕರಿಗೆ ಅಚ್ಚರಿಯ ಉಡುಗೊರೆ ನೀಡಿದೆ. 17 ಸಾವಿರ ಬಜೆಟ್ ಒಳಗಡೆ ಹೊಸ ಮೊಬೈಲ್ ಖರೀದಿಸಲು ಬಯಸುವವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಲಾವಾ ಬ್ಲೇಜ್ ಡ್ಯುವೋ 5G ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಿದೆ. ಈ ಫೋನ್ 64 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ, 16GB RAM, 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 33W ವೇಗದ ಚಾರ್ಜಿಂಗ್ ಸೇರಿದಂತೆ ಅನೇಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಲಾವಾ ಬ್ಲೇಜ್ ಡ್ಯುವೋ 5G ಬೆಲೆ ಮತ್ತು ಲಭ್ಯತೆ
ಲಾವಾ ಬ್ಲೇಜ್ ಡ್ಯುವೋ 5G ಫೋನಿನ 6GB + 128GB ಸ್ಟೋರೇಜ್ ರೂಪಾಂತರದ ಬೆಲೆ 16,999 ರೂ. ಮತ್ತು 8GB + 128GB ಸ್ಟೋರೇಜ್ ಆಯ್ಕೆಯನ್ನು 17,999 ರೂ.ಗೆ ಪರಿಚಯಿಸಲಾಗಿದೆ. ಇದು ಡಿಸೆಂಬರ್ 20 ರಿಂದ ಅಮೆಜಾನ್‌ನಲ್ಲಿ ಖರೀದಿಗೆ ಲಭ್ಯವಿರುತ್ತದೆ. ನೀವು ಸೆಲೆಸ್ಟಿಯಲ್ ಬ್ಲೂ ಮತ್ತು ಆರ್ಕ್ಟಿಕ್ ವೈಟ್ ಬಣ್ಣಗಳಲ್ಲಿ ಕೊಳ್ಳಬಹುದು. ನೀವು, ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೇಲೆ 2,000 ರೂ.ಗಳ ರಿಯಾಯಿತಿ ಪಡೆಯಬಹುದು.
ಲಾವಾ ಬ್ಲೇಜ್ ಡ್ಯುವೋ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಲಾವಾ ಬ್ಲೇಜ್ ಡ್ಯುವೋ 5G ಸ್ಮಾರ್ಟ್‌ಫೋನ್ 6.67 ಇಂಚಿನ 3D ಕರ್ವ್ ಅಮೋಲೆಡ್ ಮುಖ್ಯ ಡಿಸ್ಪ್ಲೇಯನ್ನು ಹೊಂದಿದೆ. ಇದು 1080 x 2400 ಪಿಕ್ಸೆಲ್ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಫೋನಿನಲ್ಲಿ 1.58 ಇಂಚಿನ ದ್ವಿತೀಯ ಡಿಸ್ಲೇ ಲಭ್ಯವಿದೆ. ಇದು 228x 460 ಪಿಕ್ಸೆಲ್ ರೆಸಲ್ಯೂಶನ್ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಲಾವಾ ಬ್ಲೇಜ್ ಡ್ಯುವೋ 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು ಆಂಡ್ರಾಯ್ಡ್ 15 ಬೆಂಬಲ ಸಹ ಪಡೆದಿದೆ.
ಸ್ಟೋರೇಜ್ ಆಯ್ಕೆ
ಲಾವಾ ಬ್ಲೇಜ್ ಡ್ಯುವೋ 5G ಫೋನ್ 8GB RAM + 8GB ವರ್ಚುವಲ್ RAM ಮತ್ತು 128GB ಸ್ಟೋರೇಜ್ ಹೊಂದಿದೆ. ಫೋನಿನಲ್ಲಿ ಗೇಮಿಂಗ್ ಸೇರಿದಂತೆ ಪ್ರತಿಯೊಂದು ಕಾರ್ಯವನ್ನು ವೇಗವಾಗಿ ಮಾಡಬಹುದು.

ಕ್ಯಾಮೆರಾ ಸೆಟಪ್
ಲಾವಾ ಬ್ಲೇಜ್ ಡ್ಯುವೋ 5G ಸ್ಮಾರ್ಟ್‌ಫೋನ್ 64 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಲಾವಾ ಬ್ಲೇಜ್ ಡ್ಯುವೋ 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಲಾವಾ ಬ್ಲೇಜ್ ಡ್ಯುವೋ 5G ಫೋನ್ ಧೂಳು ಮತ್ತು ನೀರಿನಿ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ, ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಡ್ಯುಯಲ್ ಸಿಮ್ 5G, 4G VoLTE, ವೈ-ಫೈ 6E, ಬ್ಲೂಟೂತ್ 5.4 ಸೇರಿದಂತೆ ಹಲವು ಆಯ್ಕೆಗಳನ್ನು ಹೊಂದಿದೆ.


Click it and Unblock the Notifications








