ಜಸ್ಟ್ 6,999 ರೂ.! 50MP ಟ್ರಿಪಲ್ ಕ್ಯಾಮೆರಾ.. 5000mAh ಬ್ಯಾಟರಿ.. Lava O3 Pro ಬೆಲೆ ಬಹಿರಂಗ
ಲಾವಾ ಮೊಬೈಲ್‌ಗಳಿಗೆ ಭಾರತದಲ್ಲಿ ಸಖತ್ ಡಿಮ್ಯಾಂಡ್ ಇದೆ. ಗ್ರಾಹಕರು ಸಹ ಮುಗಿಬಿದ್ದು ಲಾವಾ ಫೋನ್‌ಗಳನ್ನು ಖರೀದಿಸುತ್ತಾರೆ. ಇದೀಗ ಕಂಪನಿಯು ಹೊಸ ಲಾವಾ O3 ಪ್ರೊ (Lava O3 Pro) ಫೋನನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇದು ಅತೀ ಕಡಿಮೆ ಬೆಲೆಗೆ ಲಭ್ಯವಿದೆ. ಹೌದು, ಅಧಿಕೃತ ಬಿಡುಗಡೆಗೂ ಮೊದಲೇ, ಈ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ಅಮೆಜಾನ್‌ನಲ್ಲಿ ಬಹಿರಂಗಪಡಿಸಲಾಗಿದೆ. ಬನ್ನಿ, ಲಾವಾ O3 ಪ್ರೊ ಫೋನ್ ಯಾವೆಲ್ಲಾ ವಿಶೇಷತೆಗಳನ್ನು ಹೊಂದಿದೆ ಅನ್ನೋದನ್ನು ತಿಳಿಯೋಣ.
ಲಾವಾ O3 ಪ್ರೊ ಮೊಬೈಲ್ ಪಂಚ್ ಹೋಲ್ ಕಟೌಟ್ ಹೊಂದಿದೆ. ಫೋನಿನಲ್ಲಿ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು ಎಲ್‌ಇಡಿ ಫ್ಲ್ಯಾಶ್ ಹೊಂದಿದೆ. ಇದು ಬಲಭಾಗದಲ್ಲಿ ವಾಲ್ಯೂಮ್ ರಾಕರ್‌ಗಳು ಮತ್ತು ಪವರ್ ಬಟನ್‌ಗಳನ್ನು ಹೊಂದಿದೆ. ಎಡಭಾಗದಲ್ಲಿ ಸಿಮ್ ಟ್ರೇ ಲಭ್ಯವಿದೆ. ಈ ಫೋನಿನ ಕೆಳಭಾಗದಲ್ಲಿ ಯುಎಸ್‌ಬಿ ಟೈಪ್ ಸಿ ಪೋರ್ಟ್, ಸ್ಪೀಕರ್ ವೆಂಟ್‌ಗಳು ಮತ್ತು ಮೈಕ್ರೊಫೋನ್ ಇದೆ. ಫೋನಿನ ಬೆಲೆ, ಫೀಚರ್ಸ್ ತಿಳಿಯಲು ಮುಂದೆ ಓದಿ.

ಲಾವಾ O3 ಪ್ರೊ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಲಾವಾ O3 ಪ್ರೊ ಮೊಬೈಲ್ 6.56 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ದರ ಮತ್ತು 1,600 x 720 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಮಪನಿಯು ಲಾವಾ O3 ಪ್ರೊ ಫೋನನ್ನು Unisoc T606 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡುತ್ತದೆ. ಇದು AnTuTu ಬೆಂಚ್‌ಮಾರ್ಕ್‌ನಲ್ಲಿ 2.3 ಲಕ್ಷಕ್ಕಿಂತ ಹೆಚ್ಚು ಅಂಕ ಪಡೆದಿದೆ. ಈ ಫೋನ್ 4GB RAM + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಇದರಲ್ಲಿ 4GB ವರ್ಚುವಲ್ RAM ಲಭ್ಯವಿರಲಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ.
ಈ ಸುದ್ದಿ ಓದಿದ್ದೀರಾ?: ಸಿಹಿಸುದ್ದಿ! ಶೀಘ್ರವೇ Apple iOS 18.2 ಅಪ್ಡೇಟ್ ಲಭ್ಯ; ಈ ಐಫೋನ್‌ಗಳಲ್ಲಿ ಮಾತ್ರ.. ಇನ್‌ಸ್ಟಾಲ್ ಮಾಡುವುದು ಹೇಗೆ?
ಟ್ರಿಪಲ್ ಕ್ಯಾಮೆರಾ ಸೆಟಪ್
ಲಾವಾ O3 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ದ್ವಿತೀಯ ಮತ್ತು ತೃತೀಯ ಕ್ಯಾಮೆರಾ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಆದರೆ, ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮುಂಬರುವ ಲಾವಾ O3 ಪ್ರೊ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 10W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಲಾವಾ O3 ಪ್ರೊ ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಫೇಸ್ ಅನ್‌ಲಾಕ್ ವೈಶಿಷ್ಟ್ಯಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ವೈ-ಫೈ, ಬ್ಲೂಟೂತ್, ಜಿಪಿಎಸ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ 2.0 ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿರಲಿದೆ.
ಲಾವಾ O3 ಪ್ರೊ ಫೋನಿನ ಬೆಲೆ ಎಷ್ಟು?
ಲಾವಾ O3 ಪ್ರೊ ಫೋನಿನ 4GB + 128GB ಸ್ಟೋರೇಜ್ ರೂಪಾಂತರದ ಬೆಲೆ ಕೇವಲ 6,999 ರೂ. ಆಗಿದೆ. ನೀವು, ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ, ಡಿಸ್ಕೌಂಟ್ ಸಹ ಸಿಗುತ್ತದೆ. ಈ ಫೋನ್ ಗ್ಲಾಸಿ ಬ್ಲ್ಯಾಕ್, ಗ್ಲೋಸಿ ವೈಟ್ ಮತ್ತು ಗ್ಲೋಸಿ ಪರ್ಪಲ್ ಬಣ್ಣಗಳಲ್ಲಿ ಮಾರಾಟವಾಗಲಿದೆ. ನೀವು ಅಮೆಜಾನ್‌ನಲ್ಲಿ ಈ ಫೋನನ್ನು ಖರೀದಿಸಬಹುದು.


Click it and Unblock the Notifications








