ಮೈಕ್ರೋಮ್ಯಾಕ್ಸ್‌ನಿಂದ 3000mAh ಬ್ಯಾಟರಿ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಕಡಿಮೆ ಬೆಲೆಯಲ್ಲೇ ಶಕ್ತಿಶಾಲಿ 3000mAh ಬ್ಯಾಟರಿ ಹೊಂದಿರುವ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್ ಎ 177 ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು 8,490 ಬೆಲೆಯನ್ನು ನಿಗದಿ ಪಡಿಸಿದೆ.
150.5 x 76.2 x 10.2 ಮಿ.ಮೀ ಗಾತ್ರ. 100.5 ಗ್ರಾಂ ತೂಕವನ್ನು ಸ್ಮಾರ್ಟ್‌ಫೋನ್ ಹೊಂದಿದ್ದು,ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,1GB ರ್‍ಯಾಮ್,4GB ಆಂತರಿಕ ಮೆಮೊರಿ, 5 ಎಂಪಿ ಹಿಂದುಗಡೆ ಕ್ಯಾಮೆರಾವನ್ನುಒಳಗೊಂಡಿದೆ.
ಕಳೆದ ನವೆಂಬರ್‌ನಲ್ಲಿ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್ ಹೆಸರಿನಲ್ಲೇ 3000mAh ಬ್ಯಾಟರಿ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು.ಈ ಸ್ಮಾರ್ಟ್‌ಫೋನ್ ಮತ್ತು ಹೊಸದಾಗಿ ಬಿಡುಗಡೆಯಾದ ಸ್ಮಾರ್ಟ್‌ಫೋನ್ ಪ್ರೊಸೆಸರ್ ಕ್ಲಾಕ್ ಸ್ಪೀಡ್ ಹೊರತು ಪಡಿಸಿ ಉಳಿದ ಎಲ್ಲಾ ವಿಶೇಷತೆಗಳು ಒಂದೇ ಆಗಿದೆ.ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್ ಎ 77 1.3 GHz ಡ್ಯುಯಲ್ ಕೋರ್ ಪ್ರೊಸೆಸರ್ ಹೊಂದಿದ್ದರೆ, ಹೊಸ ಸ್ಮಾರ್ಟ್‌ಫೋನ್ 1.2 GHz ಮೀಡಿಯ ಟೆಕ್ ಪ್ರೊಸೆಸರ್‌ನ್ನು ಒಳಗೊಂಡಿದೆ.

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಜ್ಯೂಸ್ ಎ 177
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ
ಇದನ್ನೂ ಓದಿ: ಕಡಿಮೆ ಬೆಲೆಯ ಫುಲ್ ಎಚ್‌ಡಿ ಸ್ಕ್ರೀನ್ ಸ್ಮಾರ್ಟ್‌ಫೋನ್‌ಗಳು


Click it and Unblock the Notifications