ಮೈಕ್ರೋಮ್ಯಾಕ್ಸ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
ಮೈಕ್ರೋಮ್ಯಾಕ್ಸ್ ಮಾರುಕಟ್ಟೆಗೆ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಮೈಕ್ರೋಮ್ಯಾಕ್ಸ್ ಎ068 ಬೋಲ್ಟ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು 6490 ರೂಪಾಯಿ ಬೆಲೆ ನಿಗದಿ ಮಾಡಿದೆ.
ಈ ಸ್ಮಾರ್ಟ್‌ಫೋನಿನ ವಿಶೇಷತೆ ಏನೆಂದರೆ ಕನ್ನಡದಲ್ಲಿ ಟೈಪ್ ಮಾಡಬಹುದು.ಕನ್ನಡ ಸೇರಿದಂತೆ ಇಪತ್ತು ಭಾಷೆಗಳಿರುವ ಫಾಂಟುಗಳನ್ನು ಮೈಕ್ರೋಮ್ಯಾಕ್ಸ್ ಈ ಸ್ಮಾರ್ಟ್‌ಫೋನ್‌ಗೆ ನೀಡಿದೆ.
ಸಾಧಾರಣವಾಗಿ ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಸೇರಿದಂತೆ ನಂತರ ಬಿಡುಗಡೆಯಾದ ಆಂಡ್ರಾಯ್ಡ್ ಓಎಸ್ ಹೊಂದಿರುವ ಸ್ಮಾರ್ಟ್‌ಫೋನ್/ಟ್ಯಾಬ್ಲೆಟ್‌ನಲ್ಲಿ ಕನ್ನಡ ಟೈಪ್ ಮಾಡಲು ಸಪೋರ್ಟ್ ಮಾಡುತ್ತದೆ. ಕನ್ನಡ ಟೈಪ್ ಮಾಡಬೇಕಾದರೆ ಗ್ರಾಹಕರು ಆಂಡ್ರಾಯ್ಡ್ ಪ್ಲೇ ಸ್ಟೋರ್‌ನಲ್ಲಿರುವ ಕನ್ನಡ ಕೀ ಬೋರ್ಡ್ ಆಪ್‌ಗಳನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ.
1 GHz ಮೀಡಿಯಾ ಟೆಕ್ ಡ್ಯುಯಲ್ ಕೋರ್ ಪ್ರೊಸೆಸರ್,512 ಎಂಬಿ ರ್‍ಯಾಮ್,4 ಜಿಬಿ ಆಂತರಿಕ ಮೆಮೊರಿ,5 ಎಂಪಿ ಹಿಂದುಗಡೆ ಕ್ಯಾಮೆರಾವನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ.

ಮೈಕ್ರೋಮ್ಯಾಕ್ಸ್ ಎ068 ಬೋಲ್ಟ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(480*854 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1 GHz ಮೀಡಿಯಾ ಟೆಕ್ ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000mAh ಬ್ಯಾಟರಿ


Click it and Unblock the Notifications








