ಸದ್ಯದಲ್ಲೇ ಬಿಡುಗಡೆಯಾಗಲಿದೆ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ದೊಡ್ಡ ಸ್ಕ್ರೀನ್ ಹೊಂದಿರುವ, ಕಡಿಮೆ ಬಜೆಟ್‌ನ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್, ಅದರಲ್ಲೂ ಮೈಕ್ರೋಮ್ಯಾಕ್ಸ್ ಕಂಪೆನಿಯ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್. ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8 ಸ್ಮಾರ್ಟ್‌ಫೋನ್‌ಗೆ ಮಾರುಕಟ್ಟೆಯಲ್ಲಿ ಫೈಟ್ ನೀಡಲು ಮೈಕ್ರೋಮ್ಯಾಕ್ಸ್ ಬಿಡುಗಡೆ ಮಾಡುತ್ತಿರುವ ಕ್ಯಾನ್‌ವಾಸ್ ಡೂಡಲ್ 2 ಈಗ ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಲಿಸ್ಟ್ ಆಗಿದೆ. ಆದರೆ ಈ ಸ್ಮಾರ್ಟ್‌ಫೋನ್ ಬೆಲೆಯ ಮಾಹಿತಿಯನ್ನು ಪ್ರಕಟಿಸಿಲ್ಲ. ಸದ್ಯದಲ್ಲೇ ಈ ಸ್ಮಾರ್ಟ್‌ಫೋನ್ ಬರಲಿದೆ ಎಂದು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಮಾಹಿತಿಗಳ ಪ್ರಕಾರ ಮೈಕ್ರೋಮ್ಯಾಕ್ಸ್ ಈ ಸ್ಮಾರ್ಟ್‌ಫೋನ್ ಮುಂದಿನ ವಾರ ಮಾರುಕಟ್ಟೆಗೆ ಬಿಡುಗಡೆ ಮಾಡಲಿದ್ದು, ಸ್ಮಾರ್ಟ್‌ಫೋನ್‌ಗೆ ಎಷ್ಟು ದರವನ್ನು ನಿಗದಿಪಡಿಸುತ್ತದೆ ಎನ್ನುವ ಮಾಹಿತಿಯನ್ನು ಮೈಕ್ರೋಮ್ಯಾಕ್ಸ್ ಇದುವರೆಗೂ ಎಲ್ಲಿಯೂ ಪ್ರಕಟಿಸಿಲ್ಲ. ಆದರೆ ಮಾಹಿತಿಗಳ ಪ್ರಕಾರ ಈ ಸ್ಮಾರ್ಟ್‌ಫೋನ್‌ಗೆ ಅಂದಾಜು 17 ಸಾವಿರ ರೂಪಾಯಿಯನ್ನು ನಿಗದಿ ಪಡಿಸಬಹುದು ಎಂದು ಹೇಳಲಾಗುತ್ತಿದೆ.
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.7 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
12 GB ಆಂತರಿಕ ಮೆಮೋರಿ
2600 mAh ಬ್ಯಾಟರಿ
ಇದನ್ನೂ ಓದಿ: ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ವಹಿವಾಟು: ಆಪಲ್‌ನ್ನು ಹಿಂದಿಕ್ಕಿದ ಮೈಕ್ರೋಮ್ಯಾಕ್ಸ್
ಸ್ಮಾರ್ಟ್‌ಫೋನ್ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗ್ಯಾಲರಿ

ಸದ್ಯದಲ್ಲೇ ಬಿಡುಗಡೆಯಾಗಲಿದೆ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2

ಸದ್ಯದಲ್ಲೇ ಬಿಡುಗಡೆಯಾಗಲಿದೆ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2

ಸದ್ಯದಲ್ಲೇ ಬಿಡುಗಡೆಯಾಗಲಿದೆ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2

ಸದ್ಯದಲ್ಲೇ ಬಿಡುಗಡೆಯಾಗಲಿದೆ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2

ಸದ್ಯದಲ್ಲೇ ಬಿಡುಗಡೆಯಾಗಲಿದೆ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2

ಸದ್ಯದಲ್ಲೇ ಬಿಡುಗಡೆಯಾಗಲಿದೆ ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2

Click it and Unblock the Notifications