Home
ಮೊಬೈಲ್

ಕೇವಲ 9,709 ರೂ.! 5200mAh ಬ್ಯಾಟರಿ.. 6.67 ಇಂಚಿನ ಡಿಸ್ಪ್ಲೇ.. ಸದ್ದಿಲ್ಲದೆ Moto E15 ಫೋನ್ ಲಾಂಚ್

ಮೊಟೊರೊಲಾ ಸದ್ದಿಲ್ಲದೆ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೊಟೊ E15 (Moto E15) ಹೆಸರಿನೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹೌದು, ಕಂಪನಿಯು ತನ್ನ 'E' ಸರಣಿಯಲ್ಲಿ ಮೊಟೊ E15 ಅನ್ನು ಪರಿಚಯಿಸಿದೆ. ನಿರೀಕ್ಷೆಯಂತೆಯೇ, ಕಡಿಮೆ ಬಜೆಟ್ ವಿಭಾಗದಲ್ಲಿ ಈ ಫೋನನ್ನು ಬಿಡುಗಡೆ ಮಾಡಲಾಗಿದೆ. ಇದು ತನ್ನ ಸ್ಟೈಲಿಶ್ ಲುಕ್ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಮೊಬೈಲ್ ಪ್ರಿಯರನ್ನು ಆಕರ್ಷಿಸುತ್ತಿದೆ. ಬನ್ನಿ, ಈ ಹೊಸ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಮೊಟೊ E15 ಮೊಬೈಲ್ ಮೂರು ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಇದು ಫ್ರೆಶ್ ಲ್ಯಾವೆಂಡರ್, ಮಿಸ್ಟಿ ಬ್ಲೂ ಮತ್ತು ಡೆನಿಮ್ ಬ್ಲೂ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ 5200mAh ಬ್ಯಾಟರಿಯನ್ನು ಹೊಂದಿದೆ. ಫೋನಿನಲ್ಲಿ 32 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್ ಹೆಲಿಯೊ G81 ಎಕ್ಸ್‌ಟ್ರೀಮ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 6.67 ಇಂಚಿನ ಡಿಸ್ಪ್ಲೇ, 64GB ಸ್ಟೋರೇಜ್ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಜಸ್ಟ್ 9,709 ರೂ.! ಬಿಗ್ ಬ್ಯಾಟರಿ.. ದೊಡ್ಡ ಡಿಸ್ಪ್ಲೇ.. ಹೊಸ Moto E15 ಲಾಂಚ್

ಮೊಟೊ E15 ಬೆಲೆ ಮತ್ತು ಲಭ್ಯತೆ

ಕಮಫನಿಯು ಮೊಟೊ E15 ಫೋನನ್ನು ಕೇವಲ 2GB + 64GB ಸ್ಟೋರೇಜ್‌ ರೂಪಾಂತರದಲ್ಲಿ ಪರಿಚಯಿಸಿದೆ. ಇದರ ಬೆಲೆ 9,709 ರೂ.ಗೆ (EUR 109) ಆಗಿದೆ. ಪ್ರಸ್ತುತ, ಈ ಮೊಬೈಲ್ ಯುರೋಪಿಯನ್ ಮಾರುಕಟ್ಟೆಯಲ್ಲಿ ಮೊದಲು ಖರೀದಿಗೆ ಲಭ್ಯವಿರುತ್ತದೆ.

ಮೊಟೊ E15 ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಮೊಟೊ E15 ಸ್ಮಾರ್ಟ್‌ಫೋನ್ 6.67 ಇಂಚಿನ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 1604 × 720 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 90Hz ರಿಫ್ರೆಶ್ ದರ ಮತ್ತು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ನೀವು, ಒದ್ದೆಯಾದ ಬೆರಳುಗಳಿಂದಲೂ ಕೆಲಸ ಮಾಡಬಹುದು.

ಪ್ರೊಸೆಸರ್ ಸಾಮರ್ಥ್ಯ

ಮೊಟೊ E15 ಮೊಬೈಲ್ ಮೀಡಿಯಾ ಟೆಕ್ ಹೆಲಿಯೊ G81 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಇದು ಇದು 8 ಕೋರ್ ಪ್ರೊಸೆಸರ್ ಆಗಿದೆ. ಗ್ರಾಫೀಕ್ಸ್‌ಗಾಗಿ, ಆರ್ಮ್ ಮಾಲಿ G52 MP2 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 (ಗೋ ಆವೃತ್ತಿ) ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಇದು ಆಂಡ್ರಾಯ್ಡ್‌

ಸ್ಟೋರೇಜ್ ಆಯ್ಕೆ

ಮೊಟೊ E15 ಫೋನ್ 2GB RAM ನೊಂದಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ RAM ಬೂಸ್ಟ್ ತಂತ್ರಜ್ಞಾನವನ್ನು ಹೊಂದಿದೆ. ನೀವು 4GB ವರ್ಚುವಲ್ RAM ಜೊತೆಗೆ 2GB ಭೌತಿಕ RAM ಅನ್ನು ಬಳಸಬಹುದು. ಅಂದರೆ, 6GB RAM ಸೌಲಭ್ಯ ಹೊಂದಿದೆ. ಈ ಫೋನ್ 64GB ಇಂಟರ್ನಲ್ ಸ್ಟೋರೇಜ್ ಹೊಂದಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್‌ ಹೆಚ್ಚಿಸಬಹುದು.

ಜಸ್ಟ್ 9,709 ರೂ.! ಬಿಗ್ ಬ್ಯಾಟರಿ.. ದೊಡ್ಡ ಡಿಸ್ಪ್ಲೇ.. ಹೊಸ Moto E15 ಲಾಂಚ್

ಕ್ಯಾಮೆರಾ ಸೆಟಪ್

ಮೊಟೊ E15 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲಾಶ್‌ನೊಂದಿಗೆ 32 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ, ಇದು PDAF ಮತ್ತು ಕ್ವಾಡ್ ಪಿಕ್ಸೆಲ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಮೊಟೊ E15 ಮೊಬೈಲ್ 5200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವ್ಯಾಟ್ ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಒಮ್ಮೆ ಸಂಪೂರ್ಣವಾಗಿ ಚಾರ್ಜ್ ಮಾಡಿದರೆ, ಈ ಬ್ಯಾಟರಿ 2 ದಿನಗಳವರೆಗೆ ಕಾರ್ಯನಿರ್ವಹಿಸುತ್ತದೆ ಎಂದು ಕಂಪನಿ ಹೇಳಿದೆ.

ಇತರೆ ವೈಶಿಷ್ಟ್ಯಗಳು

ಮೊಟೊ E15 ಫೋನ್‌ ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಪಡೆದಿದೆ. ಹಾಗೆಯೇ 3.5 ಎಂಎಂ ಆಡಿಯೊ ಜಾಕ್, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್ ಮತ್ತು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.4, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
Moto E15 with 5200mAh battery launched globally: price, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+