ಜಸ್ಟ್ 6,999 ರೂ.! 5200mAh ಬ್ಯಾಟರಿ, 50MP ಕ್ಯಾಮೆರಾ.. ಅಗ್ಗದ ಬೆಲೆಗೆ ಹೊಸ Moto G05 ಲಾಂಚ್
ಮೊಟೊರೊಲಾ ಬಹುನಿರೀಕ್ಷಿತ ಅಗ್ಗದ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಮೊಟೊ G05 (Moto G05) ಹೆಸರಿನೊಂದಿಗೆ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹೌದು, ಕಂಪನಿಯು ಕಳೆದ ವರ್ಷ ಫೆಬ್ರವರಿ ಬಿಡುಗಡೆಯಾಗಿದ್ದ Moto G04 ಫೋನಿನ ಉತ್ತರಾಧಿಕಾರಿಯಾಗಿ ಇದನ್ನು ಪರಿಚಯಿಸಿದೆ. ಈ ಮೊಬೈಲ್ ಮೊಟೊ G04 ಗಿಂತ ದೊಡ್ಡ ಡಿಸ್ಪ್ಲೇ ಹೊಂದಿದೆ. ಇದು ಪ್ರೊಸೆಸರ್, ಕ್ಯಾಮೆರಾ ಮತ್ತು ಬ್ಯಾಟರಿಯಲ್ಲಿ ಅಪ್ಡೇಟ್‌ನೊಂದಿಗೆ ಬಂದಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಮೊಟೊ G05 ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಮೀಡಿಯಾಟೆಕ್ ಹೆಲಿಯೊ G81 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 4GB RAM + 64GB ಸ್ಟೋರೇಜ್, 5200mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೊಟೊ G05 ಫೋನಿನ ಬೆಲೆ ಮತ್ತು ಮಾರಾಟ ದಿನಾಂಕ ತಿಳಿಯಲು ಮುಂದೆ ಓದಿ.

ಮೊಟೊ G05 ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊ G05 ಫೋನ್ 6.67 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1604 × 720 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 90Hz ರಿಫ್ರೆಶ್ ದರ ಮತ್ತು 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಸಹ ಹೊಂದಿದೆ. ಇದು ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಹೊಸ ಮೊಟೊ G05 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್‌ನ ಹೆಲಿಯೊ G81 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಗ್ರಾಫಿಕ್ಸ್‌ಗಾಗಿ, ಆರ್ಮ್ ಮಾಲಿ G52 MC2 ಜಿಪಿಯು ಸಹ ಹೊಂದಿದೆ. ಈ ಮೊಬೈಲ್ ಇತ್ತೀಚಿನ ಹೊಸ ಆಂಡ್ರಾಯ್ಡ್ 15 ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ನಿರ್ವಹಿಸುತ್ತದೆ.
ಸ್ಟೋರೇಜ್ ಆಯ್ಕೆ
ಮೊಟೊ G05 ಮೊಬೈಲ್ 4GB RAM ನೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದೆ. ಇದು 8GB ವರ್ಚುವಲ್ RAM ಹೊಂದಿದೆ. ಈ ಫೋನ್ 64GB ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ನೀವು ಮೈಕ್ರೊ ಎಸ್‌ಡಿ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಕ್ಯಾಮೆರಾ ಸೆಟಪ್
ನೂತನ ಮೊಟೊ G05 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಈ ಮೊಟೊ G05 ಮೊಬೈಲ್ 5,200mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಬ್ಯಾಟರಿ ಸಂಪೂರ್ಣ ಚಾರ್ಜ್ ಬಳಿಕ ಎರಡು ದಿನ ಬಾಳಿಕೆ ಬರುತ್ತದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, ಈ ಫೋನ್ 18W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಮೊಟೊ G05 ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಜೊತೆಗೆ ಡ್ಯುಯಲ್ ಡಾಲ್ಬಿ ಅಟ್ಮಾಸ್, ಸ್ಟೀರಿಯೋ ಸ್ಪೀಕರ್‌ಗಳು, 3.5mm ಆಡಿಯೋ ಜಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಹ ಹೊಂದಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇದು ಡ್ಯುಯಲ್ ಸಿಮ್, ಬ್ಲೂಟೂತ್ 5.4, ವೈ-ಫೈ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಮೊಟೊ G05 ಬೆಲೆ ಮತ್ತು ಮಾರಾಟ
ಮೊಟೊ G05 ಮೊಬೈಲ್ ಕೇವಲ 4GB + 64GB ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆಯಾಗಿದೆ. ಇದರ ಬೆಲೆ ಕೇವಲ 6,999 ರೂ. ಆಗಿದೆ. ನೀವು, ಫಾರೆಸ್ಟ್ ಗ್ರೀನ್ ಮತ್ತು ಪ್ಲಮ್ ರೆಡ್ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನ್ ಜನವರಿ 13 ರಿಂದ ಫ್ಲಿಪ್‌ಕಾರ್ಟ್, ಕಂಪನಿಯ ವೆಬ್‌ಸೈಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ.


Click it and Unblock the Notifications








