Just In
- 8 min ago
ಬಿಎಸ್ಎನ್ಎಲ್ನಿಂದ ಅಗ್ಗದ ಪ್ಲ್ಯಾನ್ ಲಾಂಚ್; ದಂಗಾದ ಖಾಸಗಿ ಟೆಲಿಕಾಂಗಳು!
- 24 min ago
ಏಪ್ರಿಲ್ನಲ್ಲಿ 10,000 ರೂ.ಒಳಗೆ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್ಫೋನ್ಗಳು!
- 1 hr ago
ಆನ್ಲೈನ್ನಲ್ಲಿ ವೆಬ್ಕ್ಯಾಮ್ ಖರೀದಿಸುವ ಮೊದಲು ಈ ಸಂಗತಿ ಗಮನಿಸಿ!
- 2 hrs ago
TCL ಅಮೆಜಾನ್ ಇಂಡಿಯಾ ಟಿವಿ ಡೇಸ್ ಸೇಲ್! ಸ್ಮಾರ್ಟ್ಟಿವಿಗಳಿಗೆ ವಿಶೇಷ ರಿಯಾಯಿತಿ!
Don't Miss
- News
ಅಂಜನಾದ್ರಿ ಬೆಟ್ಟ ಆಂಜನೇಯನ ಜನ್ಮಸ್ಥಳ ಅಲ್ವಂತೆ, ತಿರುಮಲ ಅಂತೆ: ಟಿಟಿಡಿ ಹೊಸ ಕ್ಯಾತೆ
- Automobiles
ಇದೇ ತಿಂಗಳ 13ರಂದು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಲಿದೆ ಬಜಾಜ್
- Movies
ಏಪ್ರಿಲ್ 15ಕ್ಕೆ 'ವಿಕ್ರಾಂತ್ ರೋಣ' ಚಿತ್ರತಂಡದಿಂದ ಸರ್ಪ್ರೈಸ್ ಪ್ರಕಟಣೆ
- Sports
RCB vs MI: ವಿರಾಟ್ ಕೊಹ್ಲಿಗೆ ಕುಟುಕಿದ ರೋಹಿತ್ ಶರ್ಮಾ!
- Finance
ಅಲಿಬಾಬಾ ಕಂಪನಿಗೆ ಶಾಕ್ ನೀಡಿದ ಚೀನಾ ಸರ್ಕಾರ: 20,000 ಕೋಟಿ ರೂಪಾಯಿ ದಂಡ
- Education
KSET 2021 Postponed: ನಾಳೆ ನಡೆಯಬೇಕಿದ್ದ ಕೆಸೆಟ್ ಪರೀಕ್ಷೆ ಮುಂದೂಡಿಕೆ
- Lifestyle
ಬೇಸಿಗೆಯಲ್ಲಿ ಕೂದಲು ಉದುರಲು ಕಾರಣಗಳಿವು
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೊಟೊ G30 ಫಸ್ಟ್ ಲುಕ್; ಬಜೆಟ್ ದರದಲ್ಲಿ ಕಂಫರ್ಟ್ ಫೋನ್!
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಮೊಟೊ G30 ಸ್ಮಾರ್ಟ್‌ಫೋನ್ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡದೆ. ಮುಖ್ಯವಾಗಿ ಸ್ನ್ಯಾಪ್‌ಡ್ರಾಗನ್ 662 SoC ಪ್ರೊಸೆಸರ್ ಹಾಗೂ ಕ್ವಾಡ್ ಕ್ಯಾಮೆರಾ ಆಯ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಹೌದು, ಮೊಟೊರೊಲಾ ಕಂಪೆನಿ ನೂತನ ಮೊಟೊ G30 ಸ್ಮಾರ್ಟ್‌ಫೋನ್ ಟ್ರೆಂಡಿ ಲುಕ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್ ಆಗಿದೆ. ಹಾಗಾದರೇ ಹೊಸ ಮೊಟೊ G30 ಸ್ಮಾರ್ಟ್‌ಫೋನ್ ಫಸ್ಟ್ ಲುಕ್ ಹೇಗಿದೆ?..ಈ ಫೋನಿನ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ
ಮೊಟೊ G30 ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಸಫೋರ್ಟ್ ಪಡೆದಿದ್ದು, 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಪಡೆದಿದೆ. ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಅನುಪಾತವು 20:9 ಆಗಿದೆ. ತನ್ನ ವರ್ಗದಲ್ಲಿಯೇ ಉತ್ತಮ ಡಿಸ್‌ಪ್ಲೇ ರೆಸಲ್ಯೂಶ್ ಹೊಂದಿದ್ದು, ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್ ಕಾರ್ಯವೇನು
ಮೊಟೊ G30 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 662 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ. ಅಧಿಕ ಡೇಟಾ ಅಗತ್ಯ ಇರುವ ಗೇಮ್‌ಗಳನ್ನು ಆಡಲು ಬೆಂಬಲಿಸುತ್ತದೆ.

ಕ್ವಾಡ್ ಕ್ಯಾಮೆರಾ ರಚನೆ
ಮೊಟೊ G30 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಟೆಲಿಫೋಟೋ ಶೂಟರ್ ಹಾಗೂ ನಾಲ್ಕನೇ ಬೇಸಿಕ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾ 13ಎಂಪಿ ಸೆನ್ಸಾರ್‌ನಲ್ಲಿದೆ. ಬಜೆಟ್ ದರದಲ್ಲಿ ಕಾಣಿಸಿಕೊಂಡಿದ್ದರೂ ಈ ಫೋನ್ ಮುಖ್ಯ ಕ್ಯಾಮೆರಾ ಹೈ ಎಂಡ್ ಸೆನ್ಸಾರ್ ಪಡೆದಿರುವುದು ವಿಶೇಷ ಆಕರ್ಷಣೆ ಆಗಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G30 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗೆಯೇ 20W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ, ವೈ-ಫೈ, ಬ್ಲೂಟೂತ್ 5.0, ಎನ್‌ಎಫ್‌ಸಿ, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಬಜೆಟ್ ಬೆಲೆಯಲ್ಲಿ ಅಧಿಕ ಬ್ಯಾಟರಿ ನೀಡಿರುವುದು ಪ್ಲಸ್ ಪಾಯಿಂಟ್ ಆಗಿದೆ.

ಬೆಲೆ ಮತ್ತು ಲಭ್ಯತೆ
ಮೊಟೊ G30 ಸ್ಮಾರ್ಟ್‌ಫೋನ್ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆಯು ಭಾರತದಲ್ಲಿ10,999ರೂ. ಆಗಿದೆ. ಇನ್ನು ಈ ಫೋನ್ ಡಾರ್ಕ್ ಪರ್ಲ್ ಮತ್ತು ಪ್ಯಾಸ್ಟಲ್ ಸ್ಕೈ ಕಲರ್ ಆಯ್ಕೆಗಳನ್ನು ಹೊಂದಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999