ಮೊಟೊ G32 ಫಸ್ಟ್‌ ಲುಕ್‌: ಕಡಿಮೆ ಬೆಲೆಗೆ ಬೊಂಬಾಟ್ ಸ್ಮಾರ್ಟ್‌ಫೋನ್‌!

|

ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಮೊಟೊ G32 ಸ್ಮಾರ್ಟ್‌ಫೋನ್‌ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡದೆ. ಮುಖ್ಯವಾಗಿ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಹಾಗೂ ಟ್ರಿಪಲ್‌ ಕ್ಯಾಮೆರಾ ಆಯ್ಕೆ ಪ್ಲಸ್‌ ಪಾಯಿಂಟ್ ಆಗಿದೆ.

ಇದರೊಂದಿಗೆ

ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿರುವ ಮೊಟೊರೊಲಾ ಕಂಪೆನಿ ನೂತನ ಮೊಟೊ G32 ಸ್ಮಾರ್ಟ್‌ಫೋನ್‌ ಟ್ರೆಂಡಿ ಲುಕ್ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್‌ ಆಗಿದೆ. ಅಲ್ಲದೇ ಈ ಫೋನ್ 4GB RAM + 64GB ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್‌ ಒಳಗೊಂಡಿದೆ.

ಅವಕಾಶ

ಮೊಟೊ G32 ಸ್ಮಾರ್ಟ್‌ಫೋನ್‌ ಅಧಿಕ ಬ್ಯಾಟರಿಯೊಂದಿಗೆ 33W ಟರ್ಬೋಪವರ್ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಹೆಚ್ಚುವರಿ ಸಂಗ್ರಹಕ್ಕಾಗಿ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಪಡೆದಿದೆ. 4GB RAM + 64GB ಸ್ಟೋರೇಜ್‌ನ ಈ ಫೋನಿನ ಬೆಲೆಯು 12,999ರೂ. ಆಗಿದ್ದು, ಮಿನರಲ್ ಗ್ರೇ ಮತ್ತು ಸ್ಯಾಟಿನ್ ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ. ಹಾಗಾದರೇ ಹೊಸ ಮೊಟೊ G32 ಸ್ಮಾರ್ಟ್‌ಫೋನ್ ಫಸ್ಟ್‌ ಲುಕ್ ಹೇಗಿದೆ?..ಈ ಫೋನಿನ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಮೊಟೊ G32 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ HD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 85.48 % ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಪಡೆದುಕೊಂಡಿದೆ. ಈ ಫೋನ್ ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಮೊಟೊ G32 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಕೂಡ ನೀಡಲಾಗಿದೆ. ಇದರ ಪ್ರೊಸಸರ್ ತನ್ನ ವರ್ಗದಲ್ಲೇ ಉತ್ತಮವಾಗಿದೆ. ಆದ್ರೆ 6GB RAM + 128GB ಸ್ಟೋರೇಜ್‌ನ ಇನ್ನೊಂದು ವೇರಿಯಂಟ್‌ ಆಯ್ಕೆ ನೀಡಬಹುದಿತ್ತು.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಮೊಟೊ G32 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ತನ್ನ ವರ್ಗದಲ್ಲಿನ ಇತರೆ ಬ್ರ್ಯಾಂಡ್‌ಗಳ ಫೋನ್‌ಗಳಿಗೆ ಪೈಫೋಟಿ ನೀಡುವ ಕ್ಯಾಮೆರಾ ರಚನೆ ಇದಾಗಿದೆ ಎನ್ನಬಹುದು.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಮೊಟೊ G32 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 33W ಟರ್ಬೋಪವರ್ ವೇಗದ ಚಾರ್ಜಿಂಗ್ ಟೆಕ್ನಾಲಜಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ Wi-Fi, 4G LTE, ಬ್ಲೂಟೂತ್ v5.2, 3.5mm ಹೆಡ್‌ಫೋನ್ ಪೋರ್ಟ್ ಮತ್ತು USB ಟೈಪ್-C ಅನ್ನು ಒಳಗೊಂಡಿದೆ. ಇದಲ್ಲದೆ ಫಿಂಗರ್‌ಪ್ರಿಂಟ್ ರೀಡರ್, ಪ್ರಾಕ್ಸಿಮಿಟಿ ಸೆನ್ಸಾರ್‌, ವೇಗವರ್ಧಕ, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಗೈರೊಸ್ಕೋಪ್ ಸೆನ್ಸಾರ್‌ ಮತ್ತು ಇ-ಕಂಪಾಸ್‌ ಅನ್ನು ಒಳಗೊಂಡಿದೆ.

Best Mobiles in India

English summary
Moto G32 First Look: Attractive smartphone at budget price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X