ಇಂದು Moto G35 5G ಲಾಂಚ್; ಬೆಲೆ 10,000ಕ್ಕಿಂತಲೂ ಕಡಿಮೆ.. ಇಲ್ಲಿವೆ ಟಾಪ್ 5 ಫೀಚರ್ಸ್
ಮತ್ತೊಂದು ಮೊಟೊ ಫೋನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ವಿಶೇಷವೆಂದರೆ, ಈ ಮೊಬೈಲ್ 10,000 ರೂ.ಗಿಂತ ಕಡಿಮೆ ಬೆಲೆಯನ್ನು ಹೊಂದಿರಲಿದೆ. ಹೌದು, ಮೊಟೊರೊಲಾ ಇಂದು (ಡಿಸೆಂಬರ್ 10) ಹೊಸ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಲಿದೆ. ಅದುವೇ, ಮೊಟೊ G35 5G (Moto G35 5G) ಸ್ಮಾರ್ಟ್‌ಫೋನ್. ಕಂಪನಿಯು ಅಗ್ಗದ ಬೆಲೆಗೆ ಈ ಮೊಬೈಲ್ ಅನ್ನು ಬಿಡುಗಡೆ ಮಾಡಿದರೂ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಬನ್ನಿ, ಈ ಫೋನಿನ ಟಾಪ್ 5 ವೈಶಿಷ್ಟ್ಯಗಳನ್ನು ತಿಳಿಯೋಣ.
ಮೊಟೊ G35 5G ಫೋನ್ ಇಂದು ಅಧಿಕೃತವಾಗಿ ಮಾರುಕಟ್ಟೆಗೆ ಲಗ್ಗೆ ಇಡಲಿದೆ. ಈ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಕಪ್ಪು, ಹಸಿರು ಮತ್ತು ಕೆಂಪು ಬಣ್ಣಗಳಲ್ಲಿ ಈ ಫೋನ್ ಮಾರಾಟವಾಗಲಿದೆ. ಇದು ಯುನಿಸೊಕ್ T760 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರಲಿದೆ. ಜೊತೆಗೆ 6.72 ಇಂಚಿನ ಡಿಸ್ಪ್ಲೇ, 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 20W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ.

ಮೊಟೊ G35 5G ಬಿಡುಗಡೆ ವಿವರ
ಕಂಪನಿಯು ಇಂದು (ಡಿಸೆಂಬರ್ 10) ಮಧ್ಯಾಹ್ನ 12 ಗಂಟೆಗೆ ನೂತನ ಮೊಟೊ G35 5G ಫೋನನ್ನು ಅನಾವರಣಗೊಳಿಸಲಿದೆ. ಅಗ್ಗದ ಬಜೆಟ್‌ನಲ್ಲಿ 5G ಫೋನ್ ಖರೀದಿಸುವ ಗ್ರಾಹಕರಿಗೆ ಇದು ಉತ್ತಮ ಆಯ್ಕೆಯಾಗಿದೆ. ಮೊದಲೇ ಹೇಳಿದಂತೆ, ಈ ಮೊಬೈಲ್ 10 ಸಾವಿರ ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ಈಗಾಗಲೇ, ಜಾಗತಿಕ ಮಾರುಕಟ್ಟೆಯಲ್ಲಿ ಫೋನಿನ 4GB + 128GB ಸ್ಟೋರೇಜ್ ಆಯ್ಕೆಯು 17,700 ರೂ.ಗೆ ಮಾರಾಟವಾಗುತ್ತಿದೆ. ನೀವು, ಈ ಫೋನನ್ನು ಬಿಡುಗಡೆಯ ಬಳಿಕ ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಸಬಹುದು.
ಮೊಟೊ G35 5G: ಟಾಪ್ 5 ವೈಶಿಷ್ಟ್ಯಗಳು
ದೊಡ್ಡ ಡಿಸ್ಪ್ಲೇ
ಮೊಟೊ G35 5G ಫೋನಿನ ವೈಶಿಷ್ಟ್ಯಗಳನ್ನು ಈಗಾಗಲೇ ಬಹಿರಂಗಪಡಿಸಲಾಗಿದೆ. ಈ ಪೈಕಿ ಮೊದಲು ಡಿಸ್ಪ್ಲೇ ಬಗ್ಗೆ ತಿಳಿಯೋಣ. ಈ ಮೊಬೈಲ್ 120Hz ರಿಫ್ರೆಶ್ ದರದೊಂದಿಗೆ 6.72 ಇಂಚಿನ ಡಿಸ್ಪ್ಲೇ ಹೊಂದಿರಲಿದೆ. ಇದು ಪೂರ್ಣ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿರಲಿದೆ. ಡಿಸ್ಪ್ಲೇಯು 1000 ನಿಟ್ಸ್ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರುತ್ತದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.
ಶಕ್ತಿಶಾಲಿ ಪ್ರೊಸೆಸರ್
ಕಂಪನಿಯು ಮೊಟೊ G35 5G ಫೋನನ್ನು ಯುನಿಸೊಕ್ T760 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಿದೆ. ಈ ಪ್ರೊಸೆಸರ್ ಅನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹಲೋ ಯುಐ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡಲಿದೆ.
1TB ವರೆಗೆ ಸ್ಟೋರೇಜ್
ಮುಂಬರುವ ಮೊಟೊ G35 5G ಮೊಬೈಲ್ 4GB RAM ಹೊಂದಿರಲಿದೆ. ಇದರಲ್ಲಿ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿರುತ್ತದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
50MP ಮುಖ್ಯ ಮತ್ತು 16MP ಸೆಲ್ಫಿ ಶೂಟರ್
ಮೊಟೊ G35 5G ಸ್ಮಾರ್ಟ್‌ಫೋನ್ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿರಲಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರುತ್ತದೆ.
ಪವರ್ ಫುಲ್ ಬ್ಯಾಟರಿ
ಕಂಪನಿಯು ಮೊಟೊ G35 5G ಫೋನನ್ನು 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 20W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ನೀಡಲಾಗುತ್ತದೆ. ಈ ಫೋನ್ ಯುಎಸ್‌ಬಿ ಟೈಪ್ ಸಿ ಪೋರ್ಟ್ ಸಹ ಹೊಂದಿದೆ.


Click it and Unblock the Notifications








