Subscribe to Gizbot

ಮೊಟೊ G6, G6 ಪ್ಲೇ ಮತ್ತು G6 ಪ್ಲಸ್ ಸ್ಮಾರ್ಟ್‌ಫೋನ್ ಮಾಹಿತಿ ಲೀಕ್: ಮಾರುಕಟ್ಟೆಯಲ್ಲಿ ಹೊಸ ನಿರೀಕ್ಷೆ..!

Written By:

ಮೊಟೊರೊಲಾ ಏಪ್ರಿಲ್ ನಲ್ಲಿ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಮುಂದಾಗಿರುವ ಮೊಟೊ G6, ಮೊಟೊ G6 ಪ್ಲೇ ಮತ್ತು ಮೊಟೊ G6 ಪ್ಲಸ್ ಸ್ಮಾರ್ಟ್‌ಫೋನ್‌ ಕುರಿತ ಮಾಹಿತಿಯೂ ಲೀಕ್ ಆಗಿದ್ದು, ಈಗಾಗಲೇ ಮಾರುಕಟ್ಟೆಯ ಈ ಮಾಹಿತಿಯೂ ಟ್ರೆಂಟ್ ಹುಟ್ಟಿಹಾಕಿದೆ. ಮಾರುಕಟ್ಟೆಯಲ್ಲಿ ಸಾಕಷ್ಟು ಹವಾ ಎಬ್ಬಿಸಿದೆ. ಲಿನೊವೊ ಒಡೆತನದ ಮೊಟೊರೊಲಾ ಈ ಹೊಸ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸದ್ದು ಮಾಡುವುದಂತೂ ಖಂಡಿತ.

ಮೊಟೊ G6, G6 ಪ್ಲೇ ಮತ್ತು G6 ಪ್ಲಸ್ ಸ್ಮಾರ್ಟ್‌ಫೋನ್ ಮಾಹಿತಿ ಲೀಕ್

ಮೊಟೊ G6, ಮೊಟೊ G6 ಪ್ಲೇ ಮತ್ತು ಮೊಟೊ G6 ಪ್ಲಸ್ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್ ಒರಿಯೋದಲ್ಲಿ ಕಾರ್ಯನಿರ್ವಹಿಸಲಿದ್ದು, ಡ್ಯುಯಲ್ ಸಿಮ್‌ ಹಾಕಿಕೊಳ್ಳುವ ಅವಕಾಶವನ್ನು ಮಾಡಿಕೊಡಲಿದೆ ಎಂಬ ಮಾಹಿತಿಯೂ ಲೀಕ್ ಆಗಿದೆ. ಆದರೆ ಈ ಸ್ಮಾರ್ಟ್‌ಫೋನ್‌ಗಳ ಬೆಲೆಯ ಬಗ್ಗೆ ಮಾಹಿತಿ ದೊರೆತಿಲ್ಲ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೊಟೊ G6 ಪ್ಲೇ:

ಮೊಟೊ G6 ಪ್ಲೇ:

5.7 ಇಂಚಿನ HD+ IPS ಡಿಸ್‌ಪ್ಲೇಯನ್ನು ಮೊಟೊ G6 ಪ್ಲೇ ಸ್ಮಾರ್ಟ್‌ಫೋನಿನಲ್ಲಿ ಕಾಣಬಹುದಾಗಿದೆ. 2GB RAM ಮತ್ತು 16GB ಇಂಟರ್ನಲ್ ಮೆಮೊರಿಯನ್ನು ನೀಡಲಾಗಿದ್ದು, ಇದರೊಂದಿಗೆ SD ಕಾರ್ಡ್ ಮೂಲಕ 256 GB ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ. ಅಲ್ಲದೇ 4000mAh ಬ್ಯಾಟರಿಯನ್ನು ನೋಡಬಹುದಾಗಿದೆ. 12MP ಹಿಂಭಾಗದ ಕ್ಯಾಮೆರಾವನ್ನು ಹಾಗೂ 5 MP ಮುಂಭಾಗದ ಕ್ಯಾಮೆರಾವನ್ನು ಕಾಣಬಹುದಾಗಿದೆ. ಅಲ್ಲದೇ ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅನ್ನು ನೀಡಲಾಗಿದೆ.

ಮೊಟೊ G6:

ಮೊಟೊ G6:

ಮೊಟೊ G6 ಸ್ಮಾರ್ಟ್‌ಫೋನಿನಲ್ಲಿ 5.7 FHD + ಗುಣಮಟ್ಟದ ಡಿಸ್‌ಪ್ಲೇಯನ್ನು ಕಾಣಬಹುದಾಗಿದೆ. ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 450 ಪ್ರೋಸೆಸರ್ ನೊಂದಿಗೆ 4GB RAM ಹಾಗೂ 64GB ಇಂಟರ್ನಲ್ ಮೆಮೊರಿಯನ್ನು ನೀಡಲಾಗಿದೆ. ಇದರೊಂದಿಗೆ SD ಕಾರ್ಡ್ ಮೂಲಕ 256 GB ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾವನ್ನು ನೋಡಬಹುದಾಗಿದೆ. 12MP + 5MP ಕ್ಯಾಮೆರಾವನ್ನು ಕಾಣಬಹುದಾಗಿದೆ ಮುಂಭಾಗದಲ್ಲಿ 16 MP ಕ್ಯಾಮೆರಾವನ್ನು ಸೆಲ್ಪಿಗಾಗಿ ಅಳವಡಿಸಲಾಗಿದೆ. ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಇದೆ.

Facebook ನಲ್ಲಿ ಫೇಸ್‌ ರೆಕಗ್ನಿಷನ್ ಆಯ್ಕೆಯನ್ನು ಬಳಸುವುದು ಹೇಗೆ?
ಮೊಟೊ G6 ಪ್ಲಸ್:

ಮೊಟೊ G6 ಪ್ಲಸ್:

ಮೊಟೊ G6 ಪ್ಲಸ್ ಸ್ಮಾರ್ಟ್‌ಫೋನಿನಲ್ಲಿ 5.93 ಇಂಚಿನ FHD+ ಗುಣಮಟ್ಟದ ಡಿಸ್‌ಪ್ಲೇಯನ್ನು ನೀಡಲಾಗಿದೆ. ಇದರಲ್ಲಿ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 630 ಪ್ರೋಸೆಸರ್ ಜೊತೆಗೆ 6GB RAM ಮತ್ತು 64GB ಇಂಟರ್ನಲ್ ಮೆಮೊರಿಯನ್ನು ಅಳವಡಿಸಲಾಗಿದೆ. ಇದರೊಂದಿಗೆ SD ಕಾರ್ಡ್ ಮೂಲಕ 256 GB ಮೆಮೊರಿಯನ್ನು ವಿಸ್ತರಿಸಿಕೊಳ್ಳಬಹುದಾಗಿದೆ. 3200 mAh ಬ್ಯಾಟರಿಯನ್ನು ನೋಡಬಹುದಾಗಿದೆ.12MP + 5MP ಕ್ಯಾಮೆರಾವನ್ನು ಕಾಣಬಹುದಾಗಿದೆ. ಮುಂಭಾಗದಲ್ಲಿ 5 MP ಕ್ಯಾಮೆರಾವನ್ನು ಸೆಲ್ಪಿಗಾಗಿ ನೀಡಲಾಗಿದೆ. ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಅನ್ನು ಅಳವಡಿಸಲಾಗಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
Moto G6, Moto G6 Play, Moto G6 Plus Price, Images, Specifications Leaked. to know more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot