Moto: ಕೇವಲ 12,999 ರೂ.! 6000mAh ಬ್ಯಾಟರಿ.. 1TB ಸ್ಟೋರೇಜ್.. ಯಾವ ಫೋನ್?
ಮೊಟೊ ತನ್ನ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಕಂಪನಿಯು ತನ್ನ ಮೊಟೊ G64 5G (Moto G64 5G) ಫೋನಿನ ಬೆಲೆಯನ್ನು ಕಡಿತಗೊಳಿಸಿದೆ. ಹೌದು, ಪೊಕೊ G35 5G (Moto G35 5G) ಮೊಬೈಲ್ ಡಿಸೆಂಬರ್ 10 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಇದಕ್ಕೂ ಮೊದಲೇ, ಮೊಟೊ G64 5G ಫೋನಿನ ದರ ಇಳಿಕೆ ಮಾಡಲಾಗಿದೆ. ನೀವು, 12,000 ರೂ.ಗಳ ಬಜೆಟ್‌ನಲ್ಲಿ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು. ಬನ್ನಿ, ಈ ಫೋನಿನ ಬೆಲೆ ಮತ್ತು ಆಫರ್‌ಗಳನ್ನು ತಿಳಿಯೋಣ.
ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಮೊಟೊ G64 5G ಫೋನಿನ ಖರೀದಿ ಮೇಲೆ ಶೇ.22 ರಷ್ಟು ರಿಯಾಯಿತಿ ಲಭ್ಯವಿದೆ. ಇದು ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ನೀವು ಮಿಂಟ್ ಗ್ರೀನ್, ಐಸ್ ಲಿಲಾಕ್ ಮತ್ತು ಪರ್ಲ್ ಬ್ಲೂ ಬಣ್ಣದಲ್ಲಿ ಖರೀದಿಸಬಹುದು. ಈ ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 128GB ಸ್ಟೋರೇಜ್, 6000mAh ಬ್ಯಾಟರಿಯನ್ನು ಹೊಂದಿದೆ.

ಮೊಟೊ G64 5G ಬೆಲೆ ಮತ್ತು ಆಫರ್‌ಗಳು
ಮೊಟೊ G64 5G ಫೋನಿನ 8GB + 128GB ಸ್ಟೋರೇಜ್ ರೂಪಾಂತರವನ್ನು 14,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ 13,999 ರೂ.ಗೆ ಮಾರಾಟವಾಗುತ್ತಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಶೇ.22 ರಷ್ಟು ರಿಯಾಯಿತಿ ಲಭ್ಯವಿದೆ. ಜೊತೆಗೆ 1,000 ರೂ. ಬ್ಯಾಂಕ್ ಡಿಸ್ಕೌಂಟ್ ಮತ್ತು ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಿಗುತ್ತದೆ. ಬಳಿಕ ನೀವು 12,999 ರೂ.ಗೆ ಈ ಫೋನ್ ಖರೀದಿಸಬಹುದು.
ಮೊಟೊ G64 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಮೊಟೊ G64 5G ಫೋನ್ 6.5 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2400 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊ G64 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಇದನ್ನು 6NF ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಇಮ್ಯಾಜಿನೇಶನ್ ಗ್ರಾಫಿಕ್ಸ್ ಕಾರ್ಡ್ ಹೊಂದಿದೆ.
ಸ್ಟೋರೇಜ್ ಆಯ್ಕೆ
ಮೊಟೊ G64 5G ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ಮತ್ತು 12GB RAM + 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗಿನ ಸ್ಟೋರೇಜ್ ಹೆಚ್ಚಿಸಬಹುದು.
ಕ್ಯಾಮೆರಾ ಸೆಟಪ್
ಮೊಟೊ G64 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಮೊಟೊ G64 5G ಮೊಬೈಲ್ 6000mAh ಸಾಮರ್ಥ್ಯ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಫೋನ್ 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಮೊಟೊ G64 5G ಸ್ಮಾರ್ಟ್‌ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಹೊಂದಿದೆ. ಕನೆಕಕ್ಟಿವಿಟಿ ಆಯ್ಕೆಗಳಲ್ಲಿ ಇದು 14 5G ಬ್ಯಾಂಡ್‌ಗಳು, ಎನ್‌ಎಫ್‌ಸಿ, ವೈ-ಫೈ ಮತ್ತು ಬ್ಲೂಟೂತ್ 5.3 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








