Just In
- 8 min ago
ಸ್ಯಾಮ್ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಬಿಡುಗಡೆ! ವಿಶೇಷತೆ ಏನು?
- 1 hr ago
ರಿಯಲ್ಮಿ ಕಂಪೆನಿಯಿಂದ ಮೊದಲ ಪ್ರೀಮಿಯಂ ಆಂಡ್ರಾಯ್ಡ್ ಟ್ಯಾಬ್ಲೆಟ್ ಬಿಡುಗಡೆ!
- 3 hrs ago
ಭಾರತದ ಅತಿದೊಡ್ಡ ಡ್ರೋನ್ ಫೆಸ್ಟಿವಲ್ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ
- 4 hrs ago
ಏರ್ಟೆಲ್ ಗ್ರಾಹಕರೇ ಈ ಅಗ್ಗದ ಯೋಜನೆಯಲ್ಲಿ ಪ್ರತಿದಿನ 3GB ಡೇಟಾ ಸಿಗುತ್ತೆ!
Don't Miss
- News
ಬಳ್ಳಾರಿ: 300 ಕ್ಕೂ ಹೆಚ್ಚು ಮಾವು ತಳಿಗಳ ಪ್ರದರ್ಶನ, ಮಾರಾಟ ಮೇಳ
- Movies
ಸಾಕಷ್ಟು ಆಕ್ಟರ್ಗಳಿಗೆ ಡ್ರೆಸ್ ಡಿಸೈನ್ ಮಾಡೋರು ಇವರೇ?
- Automobiles
ಥರ್ಡ್ ಪಾರ್ಟಿ ಇನ್ಸುರೆನ್ಸ್: ಜೂನ್ 1ರಿಂದ ವಾಹನ ಮಾಲೀಕತ್ವ ಮತ್ತಷ್ಟು ದುಬಾರಿ!
- Finance
ಮೂರು ದಿನದ ಕುಸಿತಕ್ಕೆ ಬ್ರೇಕ್: ಸೆನ್ಸೆಕ್ಸ್, ನಿಫ್ಟಿ ಜಿಗಿತ
- Sports
ಬಾಂಗ್ಲಾದೇಶ vs ಶ್ರೀಲಂಕಾ 2nd ಟೆಸ್ಟ್: ಗೆಲುವಿನ ಸನಿಹದಲ್ಲಿ ಲಂಕಾ: ಸೋಲಿನಿಂತ ತಪ್ಪಿಸಿಕೊಳ್ಳುತ್ತಾ ಬಾಂಗ್ಲಾ?
- Lifestyle
ಕಿಚನ್ ಟಿಪ್ಸ್: ಫ್ರಿಡ್ಜ್ನಲ್ಲಿ ಆಹಾರಗಳನ್ನು ಹೀಗೆ ಇಟ್ಟರೆ ಆರೋಗ್ಯಕ್ಕೆ ಕುತ್ತು ಎಚ್ಚರ..!
- Education
Karnataka SSLC Revaluation 2022 : ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೊಟೊ G71 5G ಫಸ್ಟ್ ಲುಕ್; ಮೀಡ್‌ರೇಂಜ್ ದರದಲ್ಲಿ ಕಂಫರ್ಟ್ ಫೋನ್!
ಪ್ರತಿಷ್ಠಿತ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಮೊಟೊರೊಲಾ ಕಂಪೆನಿಯ ಇತ್ತೀಚಿಗಷ್ಟೆ ಭಾರತದಲ್ಲಿ ಬಿಡುಗಡೆ ಮಾಡಿರುವ ಮೊಟೊ G71 5G ಸ್ಮಾರ್ಟ್‌ಫೋನ್ ಗ್ರಾಹಕರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಮೀಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡದೆ. ಮುಖ್ಯವಾಗಿ ಸ್ನ್ಯಾಪ್‌ಡ್ರಾಗನ್ 695 SoC ಪ್ರೊಸೆಸರ್ ಹಾಗೂ ಟ್ರಿಪಲ್ ಕ್ಯಾಮೆರಾ ಆಯ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಹೌದು, ಮೊಟೊರೊಲಾ ಕಂಪೆನಿ ನೂತನ ಮೊಟೊ G71 5G ಸ್ಮಾರ್ಟ್‌ಫೋನ್ ಟ್ರೆಂಡಿ ಲುಕ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್‌ನಲ್ಲಿದೆ. ಇದರೊಂದಿಗೆ 5,000mAh ಬ್ಯಾಟರಿ ಬಾಳಿಕೆ ಪಡೆದಿರುವುದು ಮತ್ತೊಂದು ಹೈಲೈಟ್ ಆಗಿದೆ. ಹಾಗೆಯೇ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗಾದರೇ ಹೊಸ ಮೊಟೊ G71 5G ಸ್ಮಾರ್ಟ್‌ಫೋನ್ ಫಸ್ಟ್ ಲುಕ್ ಹೇಗಿದೆ?..ಈ ಫೋನಿನ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಮೊಟೊ G71 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿರುವ 6.4 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಮ್ಯಾಕ್ಸ್ ವಿಷನ್ ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ತನ್ನ ವರ್ಗದಲ್ಲಿಯೇ ಉತ್ತಮ ಡಿಸ್‌ಪ್ಲೇ ರೆಸಲ್ಯೂಶ್ ಹೊಂದಿದ್ದು, ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್ ಪವರ್ ಹೇಗಿದೆ?
ಮೊಟೊ G71 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ My UX ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ವಿಸ್ತರಣೆಗೆ ಅವಕಾಶ ನೀಡಿದೆ. ಅಧಿಕ ಡೇಟಾ ಅಗತ್ಯ ಇರುವ ಗೇಮ್‌ಗಳನ್ನು ಆಡಲು ಬೆಂಬಲಿಸುತ್ತದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್ ವಿಶೇಷ
ಮೊಟೊ G71 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಜೊತೆಗೆ f/2.2 ಅಲ್ಟ್ರಾ ವೈಡ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ತನ್ನ ವರ್ಗದಲ್ಲೇ ಈ ಫೋನ್ ಮುಖ್ಯ ಕ್ಯಾಮೆರಾ ಹೈ ಎಂಡ್ ಸೆನ್ಸಾರ್ ಪಡೆದಿರುವುದು ವಿಶೇಷ ಆಕರ್ಷಣೆ ಆಗಿದೆ.

ಬ್ಯಾಟರಿ ಮತ್ತು ಇತರೆ
ಮೊಟೊ G71 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಟರ್ಬೊ ಪವರ್ ಚಾರ್ಜರ್ ಮೂಲಕ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, NFC, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಪಡೆದುಕೊಂಡಿದೆ. ಜೊತೆಗೆ ಡಾಲ್ಬಿ ಅಟ್ಮೋಸ್ ಆಡಿಯೊ ಬೆಂಬಲವನ್ನು ಸಹ ಒಳಗೊಂಡಿದೆ. ಬಜೆಟ್ ಬೆಲೆಯಲ್ಲಿ ಅಧಿಕ ಬ್ಯಾಟರಿ ನೀಡಿರುವುದು ಪ್ಲಸ್ ಪಾಯಿಂಟ್ ಆಗಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊ G71 5G ಸ್ಮಾರ್ಟ್‌ಫೋನ್ ತನ್ನ ಏಕೈಕ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ 18,999.ರೂ ಬೆಲೆ ಹೊಂದಿದೆ. ಇದು ಆರ್ಕ್ಟಿಕ್ ಬ್ಲೂ ಮತ್ತು ನೆಪ್ಚೂನ್ ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಇ ಕಾಮರ್ಸ್ ತಾಣಗಳಲ್ಲಿ ಖರಿದಿಗೆ ಸಿಗಲಿದೆ.
-
54,535
-
1,19,900
-
54,999
-
86,999
-
49,975
-
49,990
-
20,999
-
1,04,999
-
44,999
-
64,999
-
20,699
-
49,999
-
11,499
-
54,999
-
7,999
-
8,980
-
17,091
-
10,999
-
34,999
-
39,600
-
25,750
-
33,590
-
27,760
-
44,425
-
13,780
-
1,25,000
-
45,990
-
1,35,000
-
82,999
-
17,999