ಮೊಟೊ G9 ಪವರ್‌ ಫಸ್ಟ್‌ ಲುಕ್; ಬಜೆಟ್‌ ದರದಲ್ಲಿ ಬಿಗ್ ಬ್ಯಾಟರಿ ಬೆಸ್ಟ್‌ ಫೋನ್!

|

ಮೊಟೊರೊಲಾ ಕಂಪೆನಿ ಭಾರತೀಯ ಮಾರುಕಟ್ಟೆಯಲ್ಲಿ ಹಲವು ಭಿನ್ನ ಶ್ರೇಣಿಯ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸಂಸ್ಥೆಯು ಇತ್ತೀಚಿಗೆ ಜನಪ್ರಿಯ G9 ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹೊಸದಾಗಿ ಮೊಟೊ G9 ಪವರ್‌ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ, ಪ್ರೊಸೆಸರ್‌, ಬ್ಯಾಟರಿ ಹಾಗೂ ಡಿಸೈನ್‌ ನಂತಹ ಅಂಶಗಳಿಂದ ಗ್ರಾಹಕರ ಗಮನ ಸೆಳೆದಿದೆ.

ಮೊಟೊ

ಮೊಟೊರೊಲಾ ಕಂಪನಿಯ ಮೊಟೊ G9 ಪವರ್‌ ಸ್ಮಾರ್ಟ್‌ಫೋನ್ ಬಜೆಟ್ ಫೋನ್‌ ಆಗಿದ್ದರು ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿದೆ. ಮೊಟೊ G9 ಪವರ್‌ ಫೋನ್ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಪಡೆದಿದೆ. ಹಾಗಾದರೇ ಮೊಟೊ G9 ಪವರ್‌ ಸ್ಮಾರ್ಟ್‌ಫೋನ್ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಮೊಟೊ G 9 ಪವರ್‌ ಸ್ಮಾರ್ಟ್‌ಫೋನ್‌ 720x1,640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.5: 9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ 83.1% ಸ್ಕ್ರೀನ್‌ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್‌ ಕಾರ್ಯ ಹೇಗೆ

ಪ್ರೊಸೆಸರ್‌ ಕಾರ್ಯ ಹೇಗೆ

ಮೊಟೊ G 9 ಪವರ್‌ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರ ಜೊತೆಗೆ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಸಿ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಅಧಿಕ ಡೇಟಾದ ಗೇಮ್‌ಗಳನ್ನು ಸುಗಮವಾಗಿ ಆಡಬಹುದಾಗಿದೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಮೊಟೊ G 9 ಪವರ್‌ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ತನ್ನ ವರ್ಗದಲ್ಲೇ ಅತ್ಯುತ್ತಮ ಕ್ಯಾಮೆರಾ ಎನ್ನಬಹುದಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಮೊಟೊ G 9 ಪವರ್‌ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 20W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE , ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್ , ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಸೇರಿವೆ. ಬಜೆಟ್‌ ಬೆಲೆಯಲ್ಲಿ ಅಧಿಕ ಬ್ಯಾಟರಿ ನೀಡಿರುವುದು ಪ್ಲಸ್‌ ಪಾಯಿಂಟ್ ಆಗಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಮೊಟೊ G 9 ಪವರ್‌ ಸ್ಮಾರ್ಟ್‌ಫೋನ್‌ ಬೆಲೆಯನ್ನು ಸಿಂಗಲ್ 4GB RAM + 128GB ಸ್ಟೋರೇಜ್ ರೂಪಾಂತರವು 11,999ರೂ. ಪ್ರೈಸ್‌ಟ್ಯಾಗ್‌ ಪಡೆದಿದೆ. ಇನ್ನು ಈ ಫೋನ್ ಎಲೆಕ್ಟ್ರಿಕ್ ವೈಲೆಟ್ ಮತ್ತು ಮೆಟಾಲಿಕ್ ಸೇಜ್ ಕಲರ್ ಆಯ್ಕೆಗಳನ್ನು ಪಡೆದಿದೆ.

Best Mobiles in India

English summary
Moto G9 Power at Rs 11,999 seems like a good option to consider if you are looking for a budget smartphone that offers great battery life.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X