ಸದ್ದಿಲ್ಲದೇ Motorola Edge 50 Neo ಲಾಂಚ್; 512GB ಸ್ಟೋರೇಜ್.. 50MP ಕ್ಯಾಮೆರಾ.. ಬೆಲೆ ನೋಡಿ
ಮೊಟೊರೊಲಾ ಅಭಿಮಾನಿಗಳಿಗೆ ಸರ್ಪ್ರೈಸ್ ಸುದ್ದಿ ಇದೆ. ಸದ್ದಿಲ್ಲದೇ ಹೊಸ ಫೋನ್ ಬಿಡುಗಡೆಯಾಗಿದೆ. ಹೌದು, ಮೊಟೊರೊಲಾ ಕಂಪನಿಯು ಮೊಟೊರೊಲಾ ಎಡ್ಜ್ 50 ನಿಯೋ (Motorola Edge 50 Neo) ಸ್ಮಾರ್ಟ್‌ಫೋನ್ ಅನ್ನು ಅಧಿಕೃತವಾಗಿ ಬಿಡುಗಡೆಯಾಗಿದೆ. ಈ ಫೋನ್ ಯುಕೆಯಲ್ಲಿ ಸಿಂಗಲ್ RAM ಮತ್ತು ಸ್ಟೋರೇಜ್ ರೂಪಾಂತರಗಳಲ್ಲಿ ಲಾಂಚ್ ಆಗಿದೆ. ಎಡ್ಜ್ 50 ಸರಣಿಯ ಅತ್ಯಂತ ಕೈಗೆಟುಕುವ ಮಾದರಿಯಾಗಿ ಈ ಫೋನನ್ನು ಬಿಡುಗಡೆ ಮಾಡಲಾಗಿದೆ. ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ ಬನ್ನಿ.
ಮೊಟೊರೊಲಾ ಎಡ್ಜ್ 50 ನಿಯೋ 'Edge' ಸರಣಿಗೆ ಸೇರುವ ಹೊಸ ಫೋನ್ ಆಗಿದೆ. ಇದು ಕಳೆದ ವರ್ಷ ಬಿಡುಗಡೆಯಾದ ಮೊಟೊರೊಲಾ ಎಡ್ಜ್ 40 ನಿಯೋ ಫೋನಿಗೆ ಉತ್ತರಾಧಿಕಾರಿಯಾಗಿ ಬಂದಿದೆ. ಹೊಸ ಎಡ್ಜ್ 50 ನಿಯೋ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಇದೆ. 120Hz ರಿಫ್ರೆಶ್ ದರದೊಂದಿಗೆ 6.4 ಇಂಚಿನ ಡಿಸ್ಲ್ಪೇಯನ್ನು ಹೊಂದಿದೆ. ಈ ಫೋನ್ ಹೊಸ ಮತ್ತು ವೇಗದ ಚಿಪ್‌ಸೆಟ್‌ನೊಂದಿಗೆ ಬರುತ್ತದೆ.

ಮೊಟೊರೊಲಾ ಎಡ್ಜ್ 50 ನಿಯೋ ಫೋನಿನ ಬೆಲೆ ಮತ್ತು ಲಭ್ಯತೆ
ಮೊಟೊರೊಲಾ ಎಡ್ಜ್ 50 ನಿಯೋ ಫೋನನ್ನು 12GB ಮತ್ತು 512GB ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆ ಮಾಡಲಾಗಿದೆ. ಇದರ ಬೆಲೆ ಸುಮಾರು 49,872 ರೂ. (GBP 449.99) ಇದೆ. ಸ್ಮಾರ್ಟ್‌ಫೋನ್ ಅನ್ನು ಮೂರು ಪ್ಯಾಂಟೋನ್ ಬಣ್ಣಗಳಲ್ಲಿ ಬಿಡುಗಡೆ ಮಾಡಲಾಗಿದೆ. ಪೊಯಿನ್ಸಿಯಾನಾ, ಲ್ಯಾಟೆ, ಗ್ರಿಸೈಲ್ ಮತ್ತು ನಾಟಿಕಲ್ ಬ್ಲೂ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಮೊಟೊರೊಲಾ ಶೀಘ್ರದಲ್ಲೇ ಎಡ್ಜ್ 50 ನಿಯೋವನ್ನು ಭಾರತ ಸೇರಿದಂತೆ ಇತರ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಮೊಟೊರೊಲಾ ಎಡ್ಜ್ 50 ನಿಯೋ ಫೋನಿನ ವೈಶಿಷ್ಟ್ಯಗಳು
ಡಿಸ್ಲ್ಪೇ: ಮೊಟೊರೊಲಾ ಎಡ್ಜ್ 50 ನಿಯೋ ಫೋನ್ 6.4 ಇಂಚಿನ 1.5K ಪೋಲ್ಡ್ ಡಿಸ್ಲ್ಪೇಯನ್ನು ಹೊಂದಿದೆ. ಇದು 2670 x 1220 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ರೇಟ್, 3,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.
ಪ್ರೊಸೆಸರ್: ಮೊಟೊರೊಲಾ ಎಡ್ಜ್ 50 ನಿಯೋ ಫೋನಿನಲ್ಲಿ MediaTek ಡೈಮೆನ್ಸಿಟಿ 7300 ಚಿಪ್‌ಸೆಟ್ ಅನ್ನು ಅಳವಡಿಸಲಾಗಿದೆ. ಇದು 12GB LPDDR4x RAM ಮತ್ತು 512GB UFS 3.1 ಸ್ಟೋರೇಜ್‌ನೊಂದಿಗೆ ಬರುತ್ತದೆ. ಇದು ಹಲೋ UI ಜೊತೆಗೆ ಫೋನ್ Android 14 ಅನ್ನು ಬೆಂಬಲಿಸುತ್ತದೆ.

ಕ್ಯಾಮೆರಾ: ಹೊಸ ಮೊಟೊರೊಲಾ ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಜೊತೆಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ / ಮ್ಯಾಕ್ರೋ ಕ್ಯಾಮೆರಾ ಹೊಂದಿದೆ. 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಜೊತೆಗೆ 3x ಆಪ್ಟಿಕಲ್ ಜೂಮ್ ಮತ್ತು ಸೆಲ್ಫಿ ಕ್ಲಿಕ್ಕಿಸಲು 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ: ಮೊಟೊರೊಲಾ ಎಡ್ಜ್ 50 ನಿಯೋ ಫೋನ್ 4,310mAh ಬ್ಯಾಟರಿಯನ್ನು ಹೊಂದಿದೆ. ಇದು 68W ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ.
ಇತರೆ ಫೀಚರ್ಸ್: ಈ ಹೊಸ ಫೋನ್ ನೀರು ಮತ್ತು ಧೂಳಿನ ಪ್ರತಿರೋಧಕ್ಕಾಗಿ IP68 ರೇಟಿಂಗ್ ಪಡೆದಿದೆ. MIL-STD 810H ಪ್ರಮಾಣೀಕರಣವನ್ನು ಹೊಂದಿದೆ. ಇದಲ್ಲದೆ, ಡ್ಯುಯಲ್ ಸ್ಪೀಕರ್‌ಗಳು, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್-ಸಿ ಪೋರ್ಟ್, ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಡಾಲ್ಬಿ ಅಟ್ಮಾಸ್‌ನೊಂದಿಗೆ ಒದಗಿಸಲಾಗಿದೆ.


Click it and Unblock the Notifications








