Home
ಮೊಬೈಲ್

ಮೊಟೊ ಪ್ರಿಯರಿಗೆ ಹಬ್ಬ! 2 ಸೊಗಸಾದ ಫೋನ್ ಲಾಂಚ್; 6000mAh ಬ್ಯಾಟರಿ, 512GB ಸ್ಟೋರೇಜ್.. ಬೆಲೆಯೂ ಕಡಿಮೆನೇ?

ಮೊಟೊರೊಲಾ ಅಭಿಮಾನಿಗಳಿಗೆ ಏಪ್ರಿಲ್ ತಿಂಗಳು ಹಬ್ಬವೇ ಸರಿ! ಕಂಪನಿಯು ಈಗಾಗಲೇ ತನ್ನ 'ಎಡ್ಜ್' ಸರಣಿಯಲ್ಲಿ ಎರಡು ಹೊಸ ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದೇ ಏಪ್ರಿಲ್ 30 ರಂದು ಭಾರತದಲ್ಲಿ ಮೊಟೊರೊಲಾ ಎಡ್ಜ್ 60 ಫ್ಯೂಷನ್ (Motorola Edge 60 Fusion) ಮತ್ತು ಮೊಟೊರೊಲಾ ಎಡ್ಜ್ 60 ಸ್ಟೈಲಸ್ (Motorola Edge 60 Stylus) ಮತ್ತು ಮೊಟೊರೊಲಾ ಎಡ್ಜ್ 60 ಪ್ರೊ (Motorola Edge 60 Pro) ಸಹ ರಿಲೀಸ್ ಆಗಲಿದೆ. ಇವು ಭಾರತೀಯ ಮಾರುಕಟ್ಟೆಗೆ ಬರುವ ಮೊದಲೇ, ಎರಡು ಹೊಸ ಮೊಬೈಲ್‌ಗಳು ಜಾಗತಿಕ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ.

ಹೌದು, ಕಂಪನಿಯು ಮೊಟೊರೊಲಾ ಎಡ್ಜ್ 60 (Motorola Edge 60) ಮತ್ತು ಮೊಟೊರೊಲಾ ಎಡ್ಜ್ 60 ಪ್ರೊ (Motorola Edge 60 Pro) ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಫೋನ್‌ಗಳು 6.7 ಇಂಚಿನ ಡಿಸ್ಪ್ಲೇ ಹೊಂದಿವೆ. ಮೊಟೊರೊಲಾ ಎಡ್ಜ್ 60 ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್ ಹೊಂದಿದೆ. ಮೊಟೊರೊಲಾ ಎಡ್ಜ್ 60 ಪ್ರೊ ಅನ್ನು ಮೀಡಿಯಾಟೆಕ್ ಡೈಮೆನ್ಸಿಟಿ 8350 ಎಕ್ಸ್‌ಟ್ರೀಮ್ ಪ್ರೊಸೆಸರ್‌ನೊಂದಿಗೆ ಲಾಂಚ್ ಮಾಡಲಾಗಿದೆ. ಬನ್ನಿ, ಈ ಫೋನ್‌ಗಳ ಬೆಲೆ, ಲಭ್ಯತೆ ಮತ್ತು ಇನ್ನಿತರ ವಿಶೇಷತೆಗಳನ್ನು ತಿಳಿಯೋಣ.

Motorola: 2 ಸೊಗಸಾದ ಫೋನ್ ಲಾಂಚ್; 6000mAh ಬ್ಯಾಟರಿ, 512GB ಸ್ಟೋರೇಜ್; ಬೆಲೆ?

ಮೊಟೊರೊಲಾ ಎಡ್ಜ್ 60 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಮೊಟೊರೊಲಾ ಎಡ್ಜ್ 60 5G ಸ್ಮಾರ್ಟ್‌ಫೋನ್‌ 6.67 ಇಂಚಿನ 1.5K POLED ಡಿಸ್ಪ್ಲೇ ಹೊಂದಿದೆ. ಇದು 2712 x 1220 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಮೊಟೊರೊಲಾ ಎಡ್ಜ್ 60 ಫೋನಿನಲ್ಲಿ ಮೀಡಿಯಾಟೆಕ್ ಡೈಮೆನ್ಸಿಟಿ 7300 ಆಕ್ಟಾ ಕೋರ್ ಪ್ರೊಸೆಸರ್ ಅಳವಡಿಸಲಾಗಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ ಗ್ರಾಫಿಕ್ಸ್‌ಗಾಗಿ, ಮಾಲಿ G615 MC2 ಜಿಪಿಯು ಅಳವಡಿಸಲಾಗಿದೆ. ಈ ಫೋನ್ 8GB, 12GB RAM ಮತ್ತು 256GB, 512GB ಸ್ಟೋರೇಜ್ ಹೊಂದಿದೆ. ಮೈಕ್ರೋ ಎಸ್‌ಡಿ ಮೂಲಕ 512GB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್

ಮೊಟೊರೊಲಾ ಎಡ್ಜ್ 60 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಎರಡನೇ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಆಟೋ ಫೋಕಸ್ ಅಲ್ಟ್ರಾ ವೈಡ್ ಲೆನ್ಸ್ ಹೊಂದಿದೆ. ಜೊತೆಗೆ 10 ಮೆಗಾಪಿಕ್ಸೆಲ್ 3x ಟೆಲಿಫೋಟೋ ಕ್ಯಾಮೆರಾ ಲಭ್ಯವಿದೆ. ಇದು 30x ಸೂಪರ್ ಜೂಮ್, 4K 30fps ವರೆಗೆ ವಿಡಿಯೋ ರೆಕಾರ್ಡಿಂಗ್ ಬೆಂಬಲಿಸುತ್ತದೆ. ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ಮೊಟೊರೊಲಾ ಎಡ್ಜ್ 60 ಸ್ಮಾರ್ಟ್‌ಫೋನ್‌ 5,200mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನ್ 68W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್‌ ತಂತ್ರಜ್ಞಾನ ಹೊಂದಿದೆ. ಈ ಮೊಬೈಲ್ 161 x 73 x 7.9 ಮಿಮೀ ಮತ್ತು 179 ಗ್ರಾಂ ತೂಕ ಹೊಂದಿದೆ.

ಇತರೆ ವೈಶಿಷ್ಟ್ಯಗಳು

ಮೊಟೊರೊಲಾ ಎಡ್ಜ್ 60 5G ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಹಾಗೆಯೇ MIL-STD-810H ಮಿಲಿಟರಿ ದರ್ಜೆಯ ಪ್ರಮಾಣೀಕರಣದೊಂದಿಗೆ ಬರುತ್ತದೆ. ಇದು ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಮತ್ತು ಡಾಲ್ಬಿ ಅಟ್ಮೋಸ್ ಅನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, ವೈ-ಫೈ 6E, ಬ್ಲೂಟೂತ್ 5.4, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಓಳಗೊಂಡಿದೆ.

Motorola: 2 ಸೊಗಸಾದ ಫೋನ್ ಲಾಂಚ್; 6000mAh ಬ್ಯಾಟರಿ, 512GB ಸ್ಟೋರೇಜ್; ಬೆಲೆ?

ಮೊಟೊರೊಲಾ ಎಡ್ಜ್ 60 ಪ್ರೊ 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಮೊಟೊರೊಲಾ ಎಡ್ಜ್ 60 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ 1.5K POLED ಡಿಸ್ಪ್ಲೇ ಹೊಂದಿದೆ. ಇದು 2,712 x 1,220 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಬೆಂಬಲ ಪಡೆದಿದೆ. ಇದರೊಂದಿಗೆ 120Hz ರಿಫ್ರೆಶ್ ದರ, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಈ ಫೋನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಮೊಟೊರೊಲಾ ಎಡ್ಜ್ 60 ಪ್ರೊ 5G ಫೋನ್ ಮೀಡಿಯಾ ಟೆಕ್‌ನ ಡೈಮೆನ್ಸಿಟಿ 8350 ಎಕ್ಸ್‌ಟ್ರೀಮ್ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್ ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಮಾಲಿ G615 MC6 ಜಿಪಿಯು ಅಳವಡಿಸಲಾಗಿದೆ. ಈ ಫೋನ್ 8GB, 12GB RAM ಮತ್ತು 256GB, 512GB ಸ್ಟೋರೇಜ್ ಹೊಂದಿದೆ.

ಕ್ಯಾಮೆರಾ ಸೆಟಪ್

ಮೊಟೊರೊಲಾ ಎಡ್ಜ್ 60 ಪ್ರೊ 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು OIS ಜೊತೆಗೆ ಎಲ್‌ಇಡಿ ಫ್ಲ್ಯಾಷ್ ಲೈಟ್ ಹೊಂದಿದೆ. ಎರಡನೇ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ + ಮ್ಯಾಕ್ರೋ ಲೆನ್ಸ್ ಹೊಂದಿದೆ. ಜೊತೆಗೆ 10 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಲಭ್ಯವಿದೆ. ಈ ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಸಹ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ಮೊಟೊರೊಲಾ ಎಡ್ಜ್ 60 ಪ್ರೊ 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನ್ 90W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್‌ ತಂತ್ರಜ್ಞಾನ ಹೊಂದಿದೆ. ಈ ಮೊಬೈಲ್ 15W ವೈರ್‌ಲೆಸ್ ಚಾರ್ಜಿಂಗ್ ತಂತ್ರಜ್ಞಾನವನ್ನು ಸಹ ಬೆಂಬಲಿಸುತ್ತದೆ.

ಇತರೆ ವೈಶಿಷ್ಟ್ಯಗಳು

ಮೊಟೊರೊಲಾ ಎಡ್ಜ್ 60 ಪ್ರೊ ಫೋನ್ ಮೋಟೋ ಎಐ (AI) ವೈಶಿಷ್ಟ್ಯಗಳನ್ನು ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಹಾಗೆಯೇ MIL-STD-810H ಮಿಲಿಟರಿ ದರ್ಜೆಯ ಪ್ರಮಾಣೀಕರಣದೊಂದಿಗೆ ಬರುತ್ತದೆ. ಇದು ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಮತ್ತು ಡಾಲ್ಬಿ ಅಟ್ಮೋಸ್ ಅನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, ವೈ-ಫೈ 6E, ಬ್ಲೂಟೂತ್ 5.4, ಜಿಪಿಎಸ್, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಓಳಗೊಂಡಿದೆ.

Motorola: 2 ಸೊಗಸಾದ ಫೋನ್ ಲಾಂಚ್; 6000mAh ಬ್ಯಾಟರಿ, 512GB ಸ್ಟೋರೇಜ್; ಬೆಲೆ?

ಮೊಟೊರೊಲಾ ಎಡ್ಜ್ 60 ಮತ್ತು ಮೊಟೊರೊಲಾ ಎಡ್ಜ್ 60 ಪ್ರೊ ಬೆಲೆ

ಮೊಟೊರೊಲಾ ಎಡ್ಜ್ 60 ಫೋನನ್ನು 42,500 ರೂ.ಗೆ ಬಿಡುಗಡೆ ಮಾಡಲಾಗಿದೆ. ಇದು 12 RAM + 512GB ಸ್ಟೋರೇಜ್ ಮಾದರಿಯ ಬೆಲೆ ಆಗಿದೆ. ಇದು ಪ್ಯಾಂಟೋನ್ ಗಿಲ್ಬ್ರಾಲ್ಟರ್ ಸೀ, ಪ್ಯಾಂಟೋನ್ ಶ್ಯಾಮ್ರಾಕ್ ಮತ್ತು ಪ್ಯಾಂಟೋನ್ ಪ್ಲಮ್ ಪರ್ಫೆಕ್ಟ್ ಬಣ್ಣಗಳಲ್ಲಿ ಬರುತ್ತದೆ. ಇನ್ನು, ಮೊಟೊರೊಲಾ ಎಡ್ಜ್ 60 ಪ್ರೊ ಮೊಬೈಲ್ 67,750 ರೂ.ಗಳ ಬೆಲೆಯನ್ನು ಹೊಂದಿದೆ. ಇದು 12GB RAM + 512GB ಸ್ಟೋರೇಜ್ ರೂಪಾಂತರದ ಬೆಲೆ ಆಗಿದೆ. ಈ ಮೊಟೊರೊಲಾ 5G ಫೋನ್ ಸ್ಪಾರ್ಕ್ಲಿಂಗ್ ಗ್ರೇಪ್, ಶ್ಯಾಡೋ ಗ್ರೀನ್ ಮತ್ತು ಡ್ಯಾಜ್ಲಿಂಗ್ ಬ್ಲೂ ಬಣ್ಣಗಳಲ್ಲಿ ಬರುತ್ತದೆ. ಈ ಫೋನ್ ಏಪ್ರಿಲ್ 30 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಫೋನಿನ ಬೆಲೆ 30 ಸಾವಿರ ರೂ. ಇರಲಿದೆ.

Best Mobiles in India

English summary
Motorola Edge 60 and Motorola Edge 60 pro launched with 6.7 pOLED display: India Launch Timeline Tipped
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+