Motorola: 50MP + 32MP ಕ್ಯಾಮೆರಾಗಳು.. 5500mAh ಬ್ಯಾಟರಿ.. ನಾಳೆ ಹೊಸ 5G ಫೋನ್ ಬಿಡುಗಡೆ.. ಬೆಲೆ ಎಷ್ಟು?
Motorola Edge 60 Fusion Launch Date in India: ಮೊಟೊರೊಲಾ ಮತ್ತೊಂದು ಹೊಸ ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ನಾಳೆಯೇ (ಏಪ್ರಿಲ್ 2) ಈ ಸ್ಮಾರ್ಟ್‌ಫೋನ್ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಡಲಿದೆ. ಹೌದು, ನೂತನ ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G (Motorola Edge 60 Fusion 5G) ಮೊಬೈಲ್ ನಾಳೆ ಅಧಿಕೃತವಾಗಿ ರಿಲೀಸ್ ಆಗಲಿದೆ. ಇದು ಪ್ರೀಮಿಯಂ ಸ್ಮಾರ್ಟ್‌ಫೋನ್ ಆಗಿದ್ದು, ಸ್ಟೈಲಿಶ್ ಲುಕ್ ಮತ್ತು ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಕಂಪನಿಯು ಈಗಾಗಲೇ ಮೂಮಬರು ಫೋನಿನ ಪ್ರಮುಖ ವಿಶೇಷತೆಗಳನ್ನು ಸಹ ಬಹಿರಂಗಪಡಿಸಿದೆ. ಬನ್ನಿ, ಈ ಮೊಬೈಲ್ ಯಾವೆಲ್ಲಾ ವಿಶೇಷತೆಗಳನ್ನು ಒಳಗೊಂಡಿರುತ್ತದೆ ಎನ್ನುವುದನ್ನು ತಿಳಿಯೋಣ.
ಮೊಟೊರೊಲಾ ಎಡ್ಜ್ 60 ಫ್ಯೂಷನ್ ಫೋಟೋಗ್ರಫಿ ಪ್ರಿಯರಿಗೆ ಹೇಳಿಮಾಡಿಸಿದ ಮೊಬೈಲ್ ಆಗಿದೆ. ಈ ಫೋನಿನಲ್ಲಿ 50MP ಮುಖ್ಯ ಕ್ಯಾಮೆರಾ ಮತ್ತು 32MP ಸೆಲ್ಫಿ ಕ್ಯಾಮೆರಾ ಲಭ್ಯವಿರುತ್ತದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿರುತ್ತದೆ. ಈ ಫೋನ್ 6.7 ಇಂಚಿನ 1.5K ಕರ್ವ್ಡ್ ಡಿಸ್ಪ್ಲೇ ಹೊಂದಿದೆ. ಹಾಗೆಯೇ 5500mAh ಬ್ಯಾಟರಿ ಬ್ಯಾಟರಿ ಬ್ಯಾಕಪ್ ಮತ್ತು 68W ವೇಗದ ಚಾರ್ಜಿಂಗ್ ಒಳಗೊಂಡಿದೆ. ಇದಲ್ಲದೆ 12GB RAM + 256GB ಸ್ಟೋರೇಜ್ ಮತ್ತು IP69 ರೇಟಿಂಗ್ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ನಾಳೆ ಬಿಡುಗಡೆಯಾಗಲಿದೆ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ ಬಿಡುಗಡೆ ವಿವರಗಳು
ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಸ್ಮಾರ್ಟ್‌ಫೋನ್ ನಾಳೆ (ಏಪ್ರಿಲ್ 2) ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಫೋನಿನ ಬೆಲೆ ಮತ್ತು ಮಾರಾಟದ ವಿವರಗಳನ್ನು ನಾಳೆ ಬಹಿರಂಗಪಡಿಸಲಿದೆ. ಈಗಾಗಲೇ ಕಂಪನಿಯ ವೆಬ್‌ಸೈಟ್‌ನಲ್ಲಿ ಹಾಗೂ ಫ್ಲಿಪ್‌ಕಾರ್ಟ್‌ನಲ್ಲಿ ಫೋನಿನ ಮೈಕ್ರೋ ಸೈಟ್ ಲೈವ್ ಆಗಿದೆ. ಇಲ್ಲಿ ಬಿಡುಗಡೆ ಸಮಾರಂಭವನ್ನು ನೇರ ಪ್ರಸಾರ ಮಾಡಲಾಗುವುದು. ಇದಲ್ಲದೆ, ನೀವು ಮೊಟೊರೊಲಾ ಇಂಡಿಯಾದ ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿಯೂ ಲಾಂಚ್ ಈವೆಂಟ್ ವೀಕ್ಷಿಸಬಹುದು.
ಮೊಟೊರೊಲಾ ಎಡ್ಜ್ 60 ಫ್ಯೂಷನ್ ವೈಶಿಷ್ಟ್ಯಗಳು
ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಮೊಬೈಲ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿರಲಿದೆ. ಇದು 1.5K ಪಿಕ್ಸೆಲ್ ರೆಸಲ್ಯೂಶನ್ ಹೊಂದಿರುವ ಸಂಪೂರ್ಣ ಬಾಗಿದ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ 7i ರಕ್ಷಣೆನ್ನು ಹೊಂದಿದೆ. ಈ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿರುತ್ತದೆ. ಈ ಪ್ರೊಸೆಸರ್ ಹೊಂದಿರುವ ಭಾರತದಲ್ಲಿ ಮೊದಲ ಫೋನ್ ಇದಾಗಿದೆ ಎಂದು ಕಂಪನಿ ಹೇಳಿದೆ. ಈ ಮೊಬೈಲ್ 3 ವರ್ಷಗಳ ಆಂಡ್ರಾಯ್ಡ್ ಓಎಸ್ ಮತ್ತು 4 ವರ್ಷಗಳ ಭದ್ರತಾ ನವೀಕರಣಗಳೊಂದಿಗೆ ಬರುತ್ತದೆ.

ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ LED ಫ್ಲ್ಯಾಷ್ ಲೈಟ್ ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 13 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು ಮ್ಯಾಕ್ರೋ ಲೆನ್ಸ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಒಳಗೊಂಡಿದೆ. ಈ ಫೋನ್ 8GB RAM ಮತ್ತು 12GB RAM ಆಯ್ಕೆಗಳಲ್ಲಿ ಬಿಡುಗಡೆಯಾಗಲಿದೆ. ಈ ಫೋನಿನಲ್ಲಿ 256GB ಸ್ಟೋರೇಜ್ ಲಭ್ಯವಿರಬಹುದು. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1 TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
ಮೊಟೊರೊಲಾ ಎಡ್ಜ್ 60 ಫ್ಯೂಷನ್ 5G ಫೋನ್ 5,500mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 68W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗುತ್ತದೆ. ಈ ಮೊಬೈಲ್ ಮೋಟೋ ಗೆಸ್ಚರ್‌ಗಳು ಮತ್ತು ಎಐ (AI) ಫೀಚರ್ ಹೊಂದಿರುತ್ತದೆ. ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಇದು ವಾಟರ್ ಟಚ್ 3.0 ವೈಶಿಷ್ಟ್ಯ ಹೊಂದಿದ್ದು, ಒದ್ದೆಯಾದ ಕೈಗಳಿಂದಲೂ ನೀವು ಫೋನ್ ಬಳಸಬಹುದು.


Click it and Unblock the Notifications








